ಹಾವೇರಿ | ರದ್ದಾದ ಮೀಸಲಾತಿಗೆ ರಾಜ್ಯ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವಂತೆ ಮನವಿ

Date:

“ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ, ರಾಜ್ಯ ಉಚ್ಚ ನ್ಯಾಯಾಲಯವು ಅಕ್ಟೋಬರ್ 12ರಂದು ನೀಡಿರುವ ಆದೇಶದಿಂದ ಒಟ್ಟು ಶೇ.6ರಷ್ಟು ಹೆಚ್ಚುವರಿ ಮೀಸಲಾತಿ ರದ್ದಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

- Advertisement -

ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಒಕ್ಕೂಟದ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮೂಲಕ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಸಹ್ಯಾದ್ರಿ ಕಾಲೇಜಿನ ಹಳೆಯ ಕೀರ್ತಿಗೆ ಮಸಿ!...

ಒಂದು ಕಾಲದಲ್ಲಿ ಶಿವಮೊಗ್ಗದ ಶೈಕ್ಷಣಿಕ ವಲಯದಲ್ಲಿ ಸಹ್ಯಾದ್ರಿ ಕಾಲೇಜಿನ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿತ್ತು. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಈ ಪ್ರದೇಶ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ...

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

“ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿ ಜಾರಿಗೊಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ರೂಪಿಸಿರುವ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‌ಪಿ) ಅನುದಾನವನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ತಕ್ಷಣ ನಿಲ್ಲಿಸಬೇಕು. ಈ ಅನುದಾನವನ್ನು ಆಯಾ ಸಮುದಾಯಗಳ ಅಭಿವೃದ್ಧಿ ಮತ್ತು ಮೂಲಸೌಕರ್ಯ ಕಲ್ಪಿಸಲು ಮಾತ್ರ ಬಳಸಬೇಕು” ಎಂದು ಮುಖಂಡರು ಒತ್ತಾಯಿಸಲಾಯಿತು.

“ಸಂವಿಧಾನದ ಆಶಯದಂತೆ ಸಾರ್ವಜನಿಕ ಉದ್ಯೋಗ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸಮರ್ಪಕ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಮೀಸಲಾತಿ ಹೆಚ್ಚಳದ ಬೇಡಿಕೆ ದಶಕಗಳಿಂದ ಹೋರಾಟದ ರೂಪದಲ್ಲಿದೆ. 2018-19ರಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು ಮೀಸಲಾತಿ ಹೆಚ್ಚಳದ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವನ್ನು ರಚಿಸಿತ್ತು. ನಂತರ 2022ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ವಪಕ್ಷಗಳ ಸಭೆ ನಡೆಸಿ ಮೀಸಲಾತಿ ಹೆಚ್ಚಳ ಘೋಷಿಸಿದ್ದರು.

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿ, ಅದಕ್ಕೆ ಕಾನೂನಾತ್ಮಕ ರಕ್ಷಣೆ ಒದಗಿಸುವ ಉದ್ದೇಶದಿಂದ ವಿಧೇಯಕಕ್ಕೆ ಶಾಸನಸಭೆಗಳ ಒಪ್ಪಿಗೆ ಹಾಗೂ ರಾಜ್ಯಪಾಲರ ಅಂಗೀಕಾರವನ್ನೂ ಪಡೆಯಲಾಗಿತ್ತು. ಆದರೆ, ಈಗಿನ ನ್ಯಾಯಾಲಯದ ಆದೇಶದಿಂದ ಸಮುದಾಯಗಳಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ. ಸರ್ಕಾರ ಕೂಡಲೇ ಕಾನೂನು ಹೋರಾಟಕ್ಕೆ ಮುಂದಾಗಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

“ಸರ್ಕಾರ ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸದಿದ್ದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು” ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಉಡಚಪ್ಪ ಮಾಳಗಿ, ಜಿಲ್ಲಾ ಸಂಚಾಲಕ ಮಾಲತೇಶ ಯಲ್ಲಾಪುರ, ಕಲ್ಯಾಣ ಸಮಿತಿ ಅಧ್ಯಕ್ಷ ಮಂಜಪ್ಪ ಮರೋಳ, ಕಲಾವಿದರ ಸಂಘದ ಅಧ್ಯಕ್ಷ ಡಾ. ತಿಪ್ಪೇಸ್ವಾಮಿ ಹೊಸಮನಿ, ಮುಖಂಡರಾದ ಅಶೋಕ ಮರೆಣ್ಣನವರ, ಸಂತೋಷ ಗುಡ್ಡಪ್ಪನವರ, ಮೈಲಪ್ಪ ಗೋಣಿಬಸಮ್ಮನವರ, ಮೈಲಪ್ಪ ದಾಸಪ್ಪನವರ, ಹೊನ್ನಪ್ಪ ಮಾಳಗಿ, ಜಗದೀಶ ಹರಿಜನ, ಬಸಣ್ಣ ಮುಗಳಿ, ಶ್ರೀಮತಿ ನೀಲವ್ವ ಪೂಜಾರ, ಗುಡ್ಡಪ್ಪ ಬಣಕಾರ, ಫಕ್ಕೀರೇಶ ನೀರಲಗಿ, ಮಲ್ಲಪ್ಪ ಹಂಚಿನಮನಿ, ಗುಡ್ಡಪ್ಪ ಮಾಳಗಿ, ಬಸವಣ್ಣೆಪ್ಪ ಅಳ್ಳಳ್ಳಿ, ಮಹೇಶಪ್ಪ ಹರಿಜನ, ಶೇಖಪ್ಪ ಕಲ್ಲೇದೇವರು, ಗುಡ್ಡಪ್ಪ ಅರಿಕಟ್ಟಿ, ರಾಮಪ್ಪ ದೊಡ್ಡಮನಿ, ಗಾಯತ್ರಿ ಅಂಗಡಿ, ಫಕ್ಕೀರೇಶ ಪುರದ, ನೇತ್ರಾ ಗೋಡೇರ, ಚಂದ್ರಪ್ಪ ದೊಡ್ಡಮನಿ, ಮಂಜುನಾಥ ಎನ್.ಎಸ್., ರೂಪಾ ವಾಲೀಕಾರ, ಗುಡ್ಡಪ್ಪ ಹರಿಜನ, ನಾಗಪ್ಪ ಸೋಮಣ್ಣನವರ, ಅಜ್ಜಪ್ಪ ಹರಿಜನ, ಬಸವರಾಜ ಮಾಳಗಿ, ಮರಿಯಪ್ಪ ಹರಿಜನ ಹಾಗೂ ದುರಗಪ್ಪ ಮಾದಾರ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ ಕವಿಗಳು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅನನ್ಯ: ತೋಂಟದ ಸಿದ್ದರಾಮ ಸ್ವಾಮೀಜಿ

"ಸುಪ್ರಸಿದ್ಧ ಕವಿಗಳಾದ ಚಾಮರಸ, ಕುಮಾರವ್ಯಾಸ ಮುಂತಾದವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ...

ಕಲಬುರಗಿ | ವಕೀಲರ ಮೇಲಿನ ಹಲ್ಲೆ, ಕೊಲೆ ಪ್ರಕರಣಗಳಿಗೆ ಕಡಿವಾಣ ಹಾಕಿ: ಸಂರಕ್ಷಣಾ ಕಾಯ್ದೆ ಬಲಪಡಿಸಲು ಆಗ್ರಹ

ವಕೀಲರ ಮೇಲಿನ ಹಲ್ಲೆ, ದೌರ್ಜನ್ಯ, ಬೆದರಿಕೆ ಹಾಗೂ ಕೊಲೆ ಪ್ರಕರಣಗಳನ್ನು ತಡೆಗಟ್ಟುವಂತೆ...

ಕಲಬುರಗಿ | ಕಾರ್ಮಿಕನ ಮೇಲೆ ಯಂತ್ರ ಬಿದ್ದು ಸಾವು, ಇಬ್ಬರಿಗೆ ಗಾಯ

ಚಿಂಚೋಳಿ ತಾಲ್ಲೂಕಿನ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸದ ವೇಳೆ ಸಂಭವಿಸಿದ ಗಂಭೀರ ಅವಘಡವೊಂದು...

ಕಲಬುರಗಿ | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: 54 ವರ್ಷದ ಆಟೋ ಚಾಲಕನ ಬಂಧನ

ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ 54...