ಹಾವೇರಿ | ಹಳ್ಳಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Date:

ಹಾವೇರಿ ತಾಲ್ಲೂಕಿನ ಹಲವಾರು ಹಳ್ಳಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಸಾರ್ವಜನಿಕರಿಗೆ, ಮಹಿಳೆಯರಿಗೆ, ವಯೋವೃದ್ಧರಿಗೆ ಅದರಲ್ಲೂ ಪ್ರಮುಖವಾಗಿ ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಕೂಡಲೇ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮಹಿಳೆಯರು ಕೆಎಸ್ಆರ್ಟಿಸಿ ಜಿಲ್ಲಾ ಅಧಿಕಾರಿಗಳನ್ನು ಒತ್ತಾಯಿಸಿದರು.

- Advertisement -

ಹಾವೇರಿ ಪಟ್ಟಣದ ಕೆಎಸ್ಅರ್ಟಿಸಿ ಜಿಲ್ಲಾ ನಿಯಂತ್ರಾಣಧಿಕಾರಿಗಳ ಕಛೇರಿಯಲ್ಲಿ ಮಂಗಳವಾರ ವರದಾಹಳ್ಳಿ, ನಾಗನೂರ, ಬೆನಕನಹಳ್ಳಿ, ತಿಮ್ಮಾಪೂರ, ಬೂದಗಟ್ಟಿ, ಮಾಚಾಪೂರ, ತಿಮ್ಮೆನಹಳ್ಳಿ, ತಿಮ್ಮಾಪೂರ ತಾಂಡಾ, ಹೊಂಬರಡಿ, ಕಂಚಾರಗಟ್ಟಿ, ಭೂವೀರಾಪೂರ, ಹೊಸಕಿತ್ತೂರ, ಅಕ್ಕೂರು, ಟಾಟಾಮಣ್ಣೂರು, ಕುಳೇನೂರ ಹಾಗೂ ಕೆರಿಮತ್ತಿಹಳ್ಳಿ ಗ್ರಾಮಗಳ ಮಹಿಳೆಯರು ಬಸ್ ಸೌಲಭ್ಯ ಕಲ್ಪಿಸುವಂತೆ ಹಾಗೂ ವೇಳೆಗೆ ಸರಿಯಾಗಿ ಬಸ್ ಬಿಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹಳ್ಳಿಗಳಿಂದ ಹಾವೇರಿ ನಗರಕ್ಕೆ ಬರಲು ಬಸ್ ಸೌಲಭ್ಯಕ್ಕಾಗಿ ಪ್ರತಿದಿನ 3 ರಿಂದ 5 ಕಿಲೋ ಮೀಟರ್‌ ನಡೆದುಕೊಂಡು ಹೋಗುವಂತಹ ಪರಿಸ್ಥಿತಿ ಇದೆ. ಈ ಹಳ್ಳಿಗಳ ಜನರು ದಿನನಿತ್ಯದ ಕೆಲಸಗಳಿಗಾಗಿ ಹಾವೇರಿಗೆ ಓಡಾಡಲು ಸರಕಾರಿ ಬಸ್ ಸೌಲಭ್ಯ ಇಲ್ಲದ ಕಾರಣ ನಡೆದುಕೊಂಡು ಹೋಗುವಂತಾಗಿದೆ. ಆದ್ದರಿಂದ ಮೇಲ್ಕಂಡ  ಈ ಹಳ್ಳಿಗಳಿಗೆ ಖಾಯಂ ಆಗಿ ನಿರಂತರ ಬಸ್ ಸೌಲಭ್ಯ ಕಲ್ಪಿಸಲು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು‌.

ಈ ಸಂದರ್ಭದಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಬಜ್ ಇಂಡಿಯಾ ಟ್ರಸ್ಟ್ ವ್ಯವಸ್ಥಾಪಕರಾದ ರುದ್ರೇಶ್, ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಜಿಲ್ಲಾ ಉಪಾಧ್ಯಕ್ಷರಾದ ಅರುಣ ನಾಗಾವತ್, ಬಜ್ ಸಂಸ್ಥೆ ತರಭೇತಿದಾರರಾದ ದರ್ಶನ, ಅರ್ಚನಾ ದೇವತಿ, ರೇಣುಕಾ ಕಹಾರ, ಬಜ್ ಗೆಳತಿಯಾರದ ದೀಪಾ ಜಾಡರ, ಲಕ್ಷ್ಮೀ ಆನಿಶೆಟ್ಟರ, ಮಮತಾ ಒಂಕಾರಣ್ಣನವರ, ಚೆನ್ನವ್ವ ಆನಿಶೆಟ್ಟರ್, ರತ್ನಾ ಬಿಷ್ಟಕ್ಕನವರ, ಬಸಮ್ಮ ಗುಳೇದ, ಶಿಲ್ಪಾ ಆನಿಶೆಟ್ಟರ, ನೀಲವ್ವ ಅರಳಿಹಳ್ಳಿ, ಚೆನ್ನಬಸವ ಪಾಟೀಲ, ವಿದ್ಯಾ ಮಲ್ಲಿಗಾರ, ಕವಿತಾ ಗೊಟಗೋಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...