ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

Date:

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು ಬೆಳೆಗಾರರು ಹಾವೇರಿ ಜಿಲ್ಲೆಯ ಬಂಕಾಪುರ್ ಟೋಲ್ ಬಂದ್ ಮಾಡಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟು, ಮುಂದುವರೆದಿದೆ.

- Advertisement -

ಬಂಕಾಪುರ್ ಟೋಲ್ ಬಳಿ ರೈತರು ನಿನ್ನೆಯಿಂದ  ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದು, ಇಂದು ಉಗ್ರ ಸ್ವರೂಪ ಪಡೆದುಕೊಂಡಿದ್ದು, ಕಬ್ಬಿಗೆ ₹5500 ದರ ನಿಗದಿ ಘೋಷಿಸುವಂತೆ ಹೆದ್ದಾರಿ ರಸ್ತೆ ನಡುವೆ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರಿಗೆ ದಿಕ್ಕಾರ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರತಿಭಟನೆಯಲ್ಲಿ ರೈತ ಮುಖಂಡ ರುದ್ರಪ್ಪ ಬಳಿಗಾರ ಮಾತನಾಡಿ “ರಾಜ್ಯದಲ್ಲಿ ನಿನ್ನೆ ಇಂದು ನಡೆಯುತ್ತಿರುವ ಪ್ರತಿಭಟನೆ ಇತಿಹಾಸವಾಗಿದೆ. 24ಗಂಟೆಗಳ ಕಾಲ ಮೀರಿ ಬಂಕಾಪುರ್ ಟೋಲ್ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಎಷ್ಟು ದಿನ ಮುಂದುವರೆಯುತ್ತಿದೆ ಎಂಬುದು ಗೊತ್ತಿಲ್ಲ. ಇದು ರಾಜಕೀಯ ವ್ಯಕ್ತಿಗಳ ಮನಸ್ಸನ್ನು ಕದಡಿದ್ದು, ಭಯ ಪಟ್ಟಿರುವುದು ಸತ್ಯ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ನಮಗೆ ಭರವಸೆಯನ್ನು ಕೊಡದೇ ಹೋದರೇ, ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಅವರು ಆದೇಶಿಸಿದ್ದು, ರೈಲ್ವೆ ಸ್ಟೇಷನ್ ಬಂದ್ ಮಾಡಲು ಆದೇಶ ನೀಡಿದ್ದು, ಆ ಆದೇಶದಂತೆ ಉಗ್ರ ಪ್ರತಿಭಟನೆ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ದುಷ್ಟ ಸಚಿವ ಪ್ರಲ್ಹಾದ್ ಜೋಶಿ ಅವರು ಕ್ಯಾಬಿನೆಟ್ ಕರೆದಿದ್ದಾರೆ. ಇದಕ್ಕೆ ಕುಮಾರ ಸ್ವಾಮಿ ಅವರು ಹೋಗಿದ್ದಾರೆ ಎಂಬ ಮಾಹಿತಿ ಬಂದಿದೆ. ಇವತ್ತು ಒಂದು ತಿರ್ಮಾಣ ತೆಗೆದುಕೊಳ್ಳಬಹುದು ಎಂಬುದು ಗೊತ್ತಾಗಿದೆ” ಎಂದರು.

“ಸಕ್ಕರೆಗೆ ಎಮ್.ಎಸ್.ಪಿ ದರ 31ರ ಬದಲಿಗೆ 60ರೂ ಕೊಡಬೇಕು. ಉತ್ತರ ಪ್ರದೇಶ ಹಾಗೂ ಗುಜರಾತನಲ್ಲಿ ಎಥನಾಲ್ ಅನ್ನು ನೂರಕ್ಕೆ ನೂರು ಖರೀದಿಸುವ ಹಾಗೇ ನಮ್ಮ ಕರ್ನಾಟಕದಲ್ಲಿ ಉತ್ಪಾದನೆ ಆಗುವ ಎಥನಾಲ್ ಅನ್ನು ನೂರಕ್ಕೆ ನೂರರಷ್ಟು ಖರೀದಿ ಮಾಡಬೇಕು. ಸ್ವಾಮಿನಾಥನ್ ವರದಿಯನ್ನು ಯತಾವತ್ತಾಗಿ ಜಾರಿಗೊಳಿಸಬೇಕು. ಒಂದು ಟನ್ ಕಬ್ಬಿಗೆ ₹5500 ಎಫ್.ಆರ್.ಪಿ ದರ ನಿಗದಿಗೊಳಿಸಲೆಬೇಕು. ಈ ಬೇಡಿಕೆಗಳು ಈಡೇರುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಡ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

1004212877

ರೈತರ ಹೋರಾಟಕ್ಕೆ ವಕೀಲರ ಸಂಘ ಬೆಂಬಲ: “ಕಬ್ಬಿಗೆ ಬೆಂಬಲ ಬೆಲೆ ಘೋಷಸುವಂತೆ ಹೋರಾಟ ಮಾಡುತ್ತಿರುವ ಸಾವಿರಾರು ರೈತರಿಗೆ  ವಕೀಲರ ಸಂಘದ ವತಿಯಿಂದ ಬೆಂಬಲ ಸೂಚಿಸಿ, ಕಬ್ಬಿಗೆ ₹5500 ದರ ನಿಗದಿಪಡಿಸಬೇಕು. ಸಕ್ಕರೆಗೆ ₹60 ಹೆಚ್ಚಿಸಬೇಕು. ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

1004212879 1
1004212878

ನಾಲ್ಕು ಸಾವಿರ ಜನರಿಗೆ ಊಟ: ಹಾವೇರಿ ಜಿಲ್ಲೆಯ ವಿವಿಧ ಹಳ್ಳಿಗಳಿಂದ ಪ್ರತಿಭಟನೆಗೆ ಆಗಮಿಸಿದ್ದ ಸಾವಿರಾರು ರೈತರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ನಾಲ್ಕು ಸಾವಿರ ಜನರಿಗೆ ಆಗುವಷ್ಟು ಅನ್ನ, ಸಾರು ಹಾಗೂ ಪಲಾವ್ ವ್ಯವಸ್ಥೆ ಮಾಡಲಾಗಿತ್ತು.

ಲಾರಿ ಚಾಲಕರು ನೀರು, ಆಹಾರಕ್ಕಾಗಿ ಪರದಾಟ: ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಬಂಕಾಪುರ್ ಟೋಲ್ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರಿಂದ ಲಾರಿ ಚಾಲಕರಿಗೆ ಸಮಸ್ಯೆ ಉಂಟಾಗಿದ್ದು, ಹಾವೇರಿ ಬೈಪಾಸ್ ಬಳಿ ನೂರಕ್ಕೂ ಹೆಚ್ಚು ಲಾರಿಗಳು ಸಾಲಾಗಿ ನಿಂತಿವೆ. ಲಾರಿ ವಾಹನ ಚಾಲಕರು ನಿನ್ನೆಯಿಂದ ನೀರು, ಊಟಕ್ಕಾಗಿ ಪರದಾಡುತ್ತಿದ್ದಾರೆ. ಈ ಕುರಿತು ಲಾರಿ ಚಾಲಕ ಶಿವು ಮಾತನಾಡಿ, “ರೈತರು ಬೆಳೆದ ಬೆಳೆಗೆ ಬೆಲೆ ಸಿಗದೆ ಇರುವುದರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಕಷ್ಟ ನಮಗೂ ಗೊತ್ತಿದೆ. ನಿನ್ನೆಯಿಂದ ಲಾರಿಯನ್ನು ನಿಲ್ಲಿಸಿಕೊಂಡು ನಿಂತಿದ್ದು, ಕುಡಿಯುವುದಕ್ಕೆ ನೀರು, ಊಟಕ್ಕೆ ಆಹಾರ ಸರಿಯಾಗಿ ಸಿಗುತ್ತಿಲ್ಲ. ಇನ್ನೂ ಅನೇಕ ಸಮಸ್ಯೆಗಳಿವೆ. ಕೂಡಲೇ ರೈತರಿಗೆ ನ್ಯಾಯ ಸಿಗಬೇಕು” ಎಂದು ಹೇಳಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಕೋಲಾರ | ಮಾನವ ಹಕ್ಕುಗಳ ಮಂಡಳಿಯ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್ ನೇಮಕ

ಅಖಿಲ ಭಾರತ ಮಾನವ ಹಕ್ಕುಗಳ ಮಂಡಳಿಯ ನೂತನ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್...

ಬಾಗೇಪಲ್ಲಿ | ಎತ್ತಿನಹೊಳೆ ಅಲ್ಲ ಹಣದಹೊಳೆ ಹರಿಸುವ ಯೋಜನೆ-ಸಂಸದ ಡಾ.ಕೆ.ಸುಧಾಕರ್

ಕೇರಳ,ತೆಲಂಗಾಣ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮತದಾರರ ಪಟ್ಟಿಯಲ್ಲಿ...

ಅ.18ರಂದು ಮೈಸೂರಿನಲ್ಲಿ ಎರಡನೇ ವರ್ಷದ ದಸರಾ ಕಲಾಜಾತ್ರೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ...