ಹಾವೇರಿ | ಬಸ್ ನಿಲ್ದಾಣದಲ್ಲಿ ನುಗ್ಗಿದ ಬಸ್: ಎರಡು ವರ್ಷದ ಮಗು ಸಾವು

Date:

ಚಾಲಕನ ನಿರ್ಲಕ್ಷ ಚಾಲನೆಯಿಂದ ಕೇಂದ್ರ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ಗೆ ಬಸ್ ನುಗ್ಗಿ  ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹಾವೇರಿ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ.

- Advertisement -

‘ಬುಧವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಎರಡು ವರ್ಷದ ಮಗು ಹಜರತ್ ಅಲಿ ಇಸ್ಮಾಯಿಲ್ ರಾಯಚೂರು ತೀವ್ರ ಗಾಯಗೊಂಡಿದ್ದು, ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಮೂವರು ಗಾಯಗೊಂಡಿದ್ದು, ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಹಜರತ್‌ ಅಲಿ ಸೇರಿದಂತೆ ಬಂಕಾಪುರದ ವಾಸುದೇವ ಗುರುನಾಥಪ್ಪ ಉತಳೇಕರ್ (44), ಅವರ ಮಗಳು ಹರ್ಷಾ ಉತಳೇಕ‌ರ್ (6), ಕಾವ್ಯಾಂಜಲಿ ವಿಷ್ಣು ಉತಳೇಕರ್ (39) ಹಾಗೂ ಸವಣೂರಿನ ಆರ್ಬಜಖಾನ್ ಸೌದಾಗರ (13) ಅವರಿಗೂ ಬಸ್ ಡಿಕ್ಕಿ ಹೊಡೆದಿದೆ.

‘ಸವಣೂರಿನ ಹಜರತ್ ಅಲಿ ಹಾಗೂ ಪೋಷಕರು, ಹಾವೇರಿಗೆ ಬಂದಿದ್ದರು. ವಾಪಸು ತಮ್ಮೂರಿಗೆ ಹೋಗಲು ಬಸ್‌ಗಾಗಿ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಕಾಯುತ್ತಿದ್ದರು. ಇದೇ ಸಂದರ್ಭದಲ್ಲಿ ಹಾವೇರಿ-ಲಕ್ಷ್ಮೀಶ್ವರ ಮಾರ್ಗದ ಬಸ್, ಅತೀ ವೇಗದಲ್ಲಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದೆ.

ಈ ಕುರಿತು ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...