ಹಾವೇರಿ | ಸಿಎಂ ಡಿಕೆಸಿ ಜಿಲ್ಲೆಗೆ ಆಗಮನ; ರಸ್ತೆ ದುರಸ್ತಿ; ಸಾರ್ವಜನಿಕರು ಆಕ್ರೋಶ

Date:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಗಮನದ ಹಿನ್ನೆಲೆಯಲ್ಲಿ ಹಾವೇರಿ ನಗರದ ರಸ್ತೆಗಳಲ್ಲಿ ಗುಂಡಿಗಳಿಂದ ನಿತ್ಯ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರೂ ದುರಸ್ತಿಗೆ ಮುಂದಾಗದ ಅಧಿಕಾರಿಗಳು, ರಸ್ತೆಗಳಿಗೆ ಡಾಂಬರು ಹಾಕಲು ಮುಂದಾಗಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಹಾವೇರಿ ಪಟ್ಟಣದಲ್ಲಿ ಕಾಗಿನೆಲೆಯ ಶ್ರೀ ಭಕ್ತ ಕನಕದಾಸರ 539ನೇ ಜಯಂತೋತ್ಸವದ ಅಂಗವಾಗಿ ನಾಳೆ ಹಾವೇರಿ ನಗರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ. ನಗರದ ಕಾಗಿನೆಲೆ ವೃತ್ತದಲ್ಲಿ 8.5 ಅಡಿ ಎತ್ತರದ ಶ್ರೀಭಕ್ತ ಕನಕದಾಸರ ಪ್ರತಿಮೆ ಉದ್ಘಾಟಿಸಲಿರುವ ಅವರು, ಬಳಿಕ ಕಾಗಿನೆಲೆ ಮಠಕ್ಕೆ ಭೇಟಿ ನೀಡಿ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ ಒಂದೇ ವರ್ಷದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ 500 ವ್ಯಕ್ತಿಗಳ ಸಂಪತ್ತು ಸುಮಾರು 2.2 ಟ್ರಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಿದೆ. ಇನ್ನೊಂದು ಕಡೆ,...

“ಸಿಎಂ ಆಗಮನದ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ, ಸಿದ್ಧತೆ ಮತ್ತು ರಸ್ತೆ ದುರಸ್ತಿ ಕಾರ್ಯಗಳು ಭರದಿಂದ ಸಾಗಿವೆ. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಹಾವೇರಿ ರಂಗೇರುತ್ತಿದೆ. ಆದರೆ, ನಗರದ ರಸ್ತೆಗಳಲ್ಲಿ ತಿಂಗಳುಗಳಿಂದ ಗುಂಡಿಗಳು ಬಿದ್ದಿದ್ದರೂ ಅವುಗಳನ್ನು ಸರಿಪಡಿಸಲು ಮುಂದಾಗದ ಅಧಿಕಾರಿಗಳು, ಸಿಎಂ ಆಗಮನದ ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಹಾವೇರಿ ನಗರದ ನಗರಸಭೆ ಎದುರಿನ ರಸ್ತೆಯಲ್ಲಿ ಗುಂಡಿ ಬಿದ್ದಿದ್ದ ಸ್ಥಳಕ್ಕೆ ಇದೀಗ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗಿದೆ. ಹಾವೇರಿ ನಗರದ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಪ್ರತಿದಿನ ಗುಂಡಿಗಳ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಅಪಾಯದ ನಡುವೆ ಸಂಚರಿಸುವಂತಾಗಿದೆ. ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಗಣ್ಯರು ಬಂದಾಗ ಮಾತ್ರ ರಸ್ತೆ ದುರಸ್ತಿಯೇ?; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಗಮನದ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭಿಸಿರುವುದು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಾರ್ವಜನಿಕರ ನಿತ್ಯದ ಸಮಸ್ಯೆಗಳಿಗೆ ಸ್ಪಂದಿಸಲು ವಿಳಂಬ ಮಾಡುವ ಅಧಿಕಾರಿಗಳು, ಗಣ್ಯರ ಭೇಟಿ ಸಂದರ್ಭದಲ್ಲಿ ಮಾತ್ರ ಎಚ್ಚೆತ್ತುಕೊಳ್ಳುವುದು ಯಾವ ನ್ಯಾಯ? ಎಂಬ ಪ್ರಶ್ನೆ ನಾಗರಿಕರನ್ನು ಕಾಡುತ್ತಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಬೇಕು. ಗಣ್ಯರು ಜನಪ್ರತಿನಿಧಿಗಳು ಬರುವಾಗ ದುರಸ್ತಿ ಮಾಡುವುದಲ್ಲ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...