ಹಾವೇರಿ | ಜಿಲ್ಲೆಯ 64 ಸರ್ಕಾರಿ ಶಾಲೆ ಮುಚ್ಚುವ ತೀರ್ಮಾನ; ಎಸ್ಎಫ್ಐ ಆಕ್ರೋಶ

Date:

“ರಾಜ್ಯ ಸರ್ಕಾರದ ನಿರ್ದೇಶನದಂತೆ ಹಾವೇರಿ ಜಿಲ್ಲೆಯಲ್ಲಿ 18 ಕೆಪಿಎಸ್ ಶಾಲೆಗಳಿಗೆ ವಿಲೀನದ ಹೆಸರಿನಲ್ಲಿ 64 ಸರ್ಕಾರಿ ಶಾಲೆಗಳನ್ನು ಮುಚ್ಚುವ ತೀರ್ಮಾನವನ್ನು ಸಹಿಸಲು ಸಾದ್ಯವಿಲ್ಲ. ಒಂದೇ ಒಂದು ಶಾಲೆ ಮುಚ್ಚಿದರೂ ಎಲ್ಲ ಶಾಸಕರು ಹೊಣೆಗಾರು. ಈ ತಿರ್ಮಾಣವನ್ನು ಹಿಂದಕ್ಕೆ ತೆಗೆದುಕೊಳ್ಳದಿದ್ದರೇ ಬೃಹತ್ ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ಎಸ್ಎಫ್ಐ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

- Advertisement -

ಹಾವೇರಿ ಪಟ್ಟಣದ ಶಿವಾಜಿ ನಗರದಲ್ಲಿ ಇರುವ ಎಸ್ಎಫ್ಐ ಕಚೇರಿಯಲ್ಲಿ ಎಸ್ಎಫ್ಐ ಪದಾಧಿಕಾರಿಗಳ ಸಭೆಯಲ್ಲಿ ಫಲಕಗಳನ್ನು ಹಿಡಿದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ಸರ್ಕಾರಿ ಕನ್ನಡ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚುವ ರಾಜ್ಯ ಸರ್ಕಾರದ ಹುನ್ನಾರ ವಿರೋಧಿಸಿ ಎಸ್ಎಫ್ಐ ನೇತೃತ್ವದಲ್ಲಿ ಈಗಾಗಲೇ ದುಂಡು ಮೇಜಿನ ಸಭೆಗಳು, ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿರೋಧದ ಸಭೆಗಳನ್ನು ನಡೆಸಲಾಗಿತ್ತು. ಸರ್ಕಾರಿ ಶಾಲೆಗಳ ಉಳಿವಿಗಾಗಿ ಜನರನ್ನು ಜಾಗೃತಗೊಳಿಸಿ, ಬೃಹತ್ ಚಳುವಳಿ, ಬೀದಿ ನಾಟಕಗಳನ್ನು, ರಾಜ್ಯಾದ್ಯಂತ ಜಾಥಾ ಹಮ್ಮಿಕೊಳ್ಳಲಾಗಿತ್ತು. ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿಯೂ ಬೆಳಗಾವಿ ಚಲೋ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿದೆ” ಎಂದು ತಿಳಿಸಿದ್ದಾರೆ.

“ಕೆಪಿಎಸ್ ಶಾಲೆಯ ಮಂಜೂರು ಹೆಸರಿನಲ್ಲಿ ನಮ್ಮ ಜಿಲ್ಲೆಯ ಶಾಸಕರ ಪೋಸ್ಟರ್ ಗಳಿಗೆ ಪೋಸ್ ಗಳನ್ನು ಕೊಡುತ್ತಿದ್ದರು. ಈಗ ಶಾಲೆ ಮುಚ್ಚುವ ತೀರ್ಮಾನವನ್ನು ನೀವೆ ಮಾಡಿಸಿ ಎಲ್ಲಿಗೆ? ಹೋಗಿದ್ದಿರಿ?  ಬಾಯಿ ಬಿಡಬೇಕು. ಯಾವುದೇ ಕಾರಣಕ್ಕೂ ಒಂದೇ ಶಾಲೆಗಳನ್ನು ಮುಚ್ಚಲು ಎಸ್ಎಫ್ಐ ಬಿಡುವುದಿಲ್ಲ ರಾಜ್ಯ ಸರ್ಕಾರ ಒಂದು ವೇಳೆ ತೀರ್ಮಾನ ಹಿಂದೆ ಸರಿಲ್ಲಿಲ್ಲ ಅಂದರೆ ಬೃಹತ್ ತೆರನಾದ ಹೋರಾಟ ಮಾಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

“ಕೆಪಿಎಸ್ ಉನ್ನತೀಕರಣದ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ನೆಪ ಹೇಳಿ ಶಾಲೆಗಳನ್ನು ಮುಚ್ಚುತ್ತಿದೆ. ಸರ್ಕಾರಿ ಶಾಲೆಯಲ್ಲಿ ದಾಖಲಾತಿಗೆ ಕಾರಣ ಕುರಿತು ಅಧ್ಯಯನ ಮಾಡದೇ ಈ ತಿರ್ಮಾಣ ಸರಿಯಾದುದಲ್ಲ. ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ, ಶಿಕ್ಷಕರ ನೇಮಕಾತಿ, ಸರಿಯಾದ ಸಮಯಕ್ಕೆ ಪಠ್ಯ ಪುಸ್ತಕ ನೀಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಸೈಕಲ್ ಯೋಜನೆ ನಿಲ್ಲಿಸಿರುವುದು ಯಾವುದೇ ಸೌಲಭ್ಯ ನೀಡದೆ ಸರ್ಕಾರ ಖಾಸಗಿಯವರ ಲಾಬಿಗೆ ಇಂದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡಲು ಸರ್ಕಾರ ಮುಂದಾಗಿದೆ” ಎಂದು ಖಂಡಿಸಿದ್ದಾರೆ.

ಎಸ್ಎಫ್ಐ ಮುಖಂಡ ಅರುಣ್ ನಗವತ್ ಮಾತನಾಡಿ, “ಖಾಸಗಿ ಶಾಲಾ ಕಾಲೇಜುಗಳಿಗೆ ಕಡಿವಾಣ ಹಾಕುವ ಬದಲಾಗಿ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಬಂದ್ ಮಾಡಲು ಮುಂದಾಗುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರಕ್ಕೆ ತಾಕತ್ತು ಇದ್ದರೆ, ಸರ್ಕಾರಿ ಶಾಲೆಯ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಖಾಸಗಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಿ, ಖಾಸಗಿ ಶಾಲೆಗಳ ಶುಲ್ಕ, ಹೊಸ ಶಾಲೆಗಳು ಅನುಮತಿಗಳಿಗೆ ನಿಯಂತ್ರಣ ಕಾಯ್ದೆ ಜಾರಿಗೆ ತರಲು ಮುಂದಾಗಲಿ. ಅದನ್ನು ಬಿಟ್ಟು ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರಕ್ಕೆ ಕೈ ಹಾಕಿದ್ದು ಸರಿಯಲ್ಲ” ಎಂದು ತಿಳಿಸಿದ್ದಾರೆ.

“ಕಾಂಗ್ರೆಸ್ ಸರ್ಕಾರವು ಕೆಪಿಎಸ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮುಂದಾಗಿದೆ. ಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಕೈಬಿಡಬೇಕು ಇಲ್ಲದಿದ್ದರೆ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಾಗುತ್ತದೆ. ಸರ್ಕಾರಿ ಕನ್ನಡ ಶಾಲೆಗಳನ್ನು ನೇರವಾಗಿ ಕೊಲೆ ಮಾಡುವ ಬದಲಾಗಿ ಸಮಾನ ಶಿಕ್ಷಣ ಜಾರಿಗೆ ತನ್ನಿ. ರಾಜ್ಯ ಎಲ್ಲಾ ಶಾಲೆಗಳನ್ನು ಪಬ್ಲಿಕ್ ಶಾಲೆಗಳ ರೀತಿಯಲ್ಲಿ ಅಭಿವೃದ್ಧಿ ಪಡಿಸಿ” ಎಂದು

ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರಾ ಕೊರವರ ಸೇರಿದಂತೆ ಮುಖಂಡರು ಕೃಷ್ಣ ನಾಯ್ಕ್, ಧನುಷ್ ದೊಡ್ಡಮನಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...