ಸರ್ಕಾರಿ ಶಾಲೆಗಳಿಗೆ ಉಚಿತ ಡೆಸ್ಕ್ ವಿತರಣಾ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ಉಮ್ಮತ್ ವೆಲ್ಫೇರ್ ಟ್ರಸ್ಟ್ ವತಿಯಿಯಿಂದ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಪಟ್ಟಣದ ಐದು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಯೋಗ್ಯ ಡೆಸ್ಕ್ ಗಳಿಲ್ಲದ ಶಾಲೆಗಳನ್ನು ಗುರುತಿಸಿ, ಉಮ್ಮತ್ ವೇಲ್ಫೆರ್ ಟ್ರಸ್ಟ್ ಅಧ್ಯಕ್ಷರು ಅಹ್ಮದ್ ಸೈಕಲ್ಗಾರ ಅವರ ನೇತೃತ್ವದಲ್ಲಿ ಸರಕಾರಿ ಶಾಲೆಗಳಿಗೆ ಡೆಸ್ಕ್ ವಿತರಿಸಲಾಯಿತು.

“ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ಈ ಉಚಿತ ಡೆಸ್ಕ್ಗಳನ್ನು ನಮ್ಮ ಟ್ರಸ್ಟ್ ಮೂಲಕ ಮಾಡಲಾಗುತ್ತಿದೆ” ಎಂದು ಟ್ರಸ್ಟ್ ಅಧ್ಯಕ್ಷರು ತಿಳಿಸಿದರು.
ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಉಮ್ಮತ್ ವೆಲ್ಫೇರ್ ಟ್ರಸ್ಟ್ನ ಈ ಸಮಾಜಮುಖಿ ಕಾರ್ಯವನ್ನು ಹೃತ್ಪೂರ್ವಕವಾಗಿ ಶ್ಲಾಘಿಸಿ, ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
“ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಭದ್ರ ಬುನಾದಿ ಎಂಬ ನಂಬಿಕೆಯಿಂದ, ಉಮ್ಮತ್ ವೆಲ್ಫೇರ್ ಟ್ರಸ್ಟ್ ಶಿಕ್ಷಣ, ಸಮಾಜ ಸೇವೆ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು, ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ಈ ಕಾರ್ಯ ಹೆಚ್ಚು ಹೆಚ್ಚು ನಡೆಯಲಿ” ಎಂದು ಶಿಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದರು.




