ಹಾವೇರಿ | ಬೀದಿಗೆ ಬಿದ್ದ ವಿಕಲಚೇತನ ಮಹಿಳೆಯರು; ಪುನರ್ ವಸತಿ, ಸೌಲಭ್ಯಗಳನ್ನು ಕಲ್ಪಿಸಲು ಮನವಿ 

Date:

ವಿಕಲಚೇತನರಿಗೆ ಪುನರ್ ವಸತಿ ಮತ್ತು ಸೌಲಭ್ಯಗಳನ್ನು ಕಲ್ಪಿಸಲು ಒತ್ತಾಯಿಸಿ, ಮತ್ತೆ ಅನ್ಯಾಯ ವೆಸಗಿದ ಕಲ್ಮೇಶ್ವರ ಸಂಸ್ಥೆ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ, ಶಾಶ್ವತ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಬೆಂಬಲದೊಂದಿಗೆ ವಿಕಲಚೇತನರು ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಕಿ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಅವರಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

- Advertisement -

“ಹತ್ತಾರು ವರ್ಷಗಳಿಂದ ಆಶ್ರಯ ನೀಡಿ ಅನೇಕ ವಿಕಲಚೇತನ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಶಿಕ್ಷಣ, ಉದ್ಯೋಗ ಸೇರಿದಂತೆ ಸ್ವತಂತ್ರರಾಗಿ ಘನತೆ ಬದುಕು ಕಟ್ಟಿಕೊಳ್ಳಲು ಸಹಾಯಕಾರಿಯಾಗಿದ್ದ ಕಲ್ಮೇಶ್ವರ ವಿದ್ಯಾ ಸಂಸ್ಥೆಯು ಸರ್ಕಾರದ ಯಾವುದೇ ಆದೇಶಗಳಿಲ್ಲದೆ ಮತ್ತೆ ವಸತಿ ನಿಲಯದಲ್ಲಿದ್ದ ಐದು ಜನ ವಿಕಲಚೇತನರನ್ನು ಹೊರದೂಡುವ ಕಾರ್ಯವನ್ನು ಎಸ್ಎಫ್ಐ ಹಾವೇರಿ ಜಿಲ್ಲಾ ಸಮಿತಿಯು ಹಾಗೂ ಅಂಗವಿಕಲರ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ” ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ವಿಲಚೇತನ ವಿದ್ಯಾರ್ಥಿನಿ ಹೇಮಾ ಪ್ರಕಾಶ್ ಮಾತನಾಡಿ, ನೂರಾರು ಕನಸುಗಳನ್ನು ಕಟ್ಟಿಕೊಂಡು ಸ್ವಂತ ಕಾಲಮೇಲೆ ನಿತ್ತು ಘನತೆ ಜೀವನವನ್ನು ರೂಪಿಸಿಕೊಳ್ಳಬೇಕೆಂಬ ಆಸೆಗೆ ಆಶ್ರಯ ಬೇಕಿದೆ. ಬಾಡಿಗೆ ಮನೆ ಸಿಗುತ್ತಿಲ್ಲ ಎಂದು ಸಂಸ್ಥೆ ಮುಖ್ಯಸ್ಥರು ನಿಮ್ಮ ಮನೆಗಳಿಗೆ ಹೋಗಿ ಎಂದಿದ್ದಾರೆ. ಮನೆಗೆ ಹೋದರೆ ಸಮಾಜದಲ್ಲಿ ಬದುಕುವುದು ಬಹಳಷ್ಟು ಕಷ್ಟವಾಗುತ್ತದೆ. ಬಸ್ ಗಳಲ್ಲಿ, ರಸ್ತೆಗಳಲ್ಲಿ ವಿಪರೀತ ಜನಸಂದಣಿಯ ಮಧ್ಯೆ ಓಡಾಡಲು ಕಷ್ಟವಾಗುತ್ತದೆ” ಎಂದರು.

“ಈ ಹಿಂದೆ ಎಸ್ಎಫ್ಐ ಹೋರಾಟ ಹಾಗೂ ಮಾಧ್ಯಮದವರು ವರದಿ ಮಾಡುವ ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಶ್ರೀನಿವಾಸ ಅಲದರ್ತಿ ಅವರು ಕಲ್ಮೇಶ್ವರ ಸಂಸ್ಥೆ ಮುಖ್ಯಸ್ಥ ದಯಾನಂದ ಅವರಿಗೆ ದೂರವಾಣಿ ಸಂಪರ್ಕ ಮಾಡಿ ಯಾವುದೇ ಕಾರಣಕ್ಕೂ ವಿಕಲಚೇತನರನ್ನು ಹೊರಗಡೆ ಕಳಿಸಬೇಡಿ ಎಂದು ತರಾಟೆಗೆ ತೆಗೆದುಕೊಂಡಿದ್ದರು. ತಾವೇ ಸ್ವತಃ ಗುಂಟ್ಟುಮುಟ್ಟೆಗಳನ್ನು ಒಳಗಡೆ ಇರಿಸಿದರು. ವಿಕಲಚೇತನರಿಗೆ ಯಾವುದೇ ತೊಂದರೆ ನೀಡಿದಂತೆ ಕ್ರಮಕೈಗೊಳಲಾಗುವುದು ಎಂದು ಭರವಸೆ ನೀಡಿದ್ದರು. ಎಂದರು ಹೇಳಿದರು.

“ಆದರೆ ಈಗ ಎಪ್ರಿಲ್ ರಿಂದ ಸಂಸ್ಥೆಯನ್ನೆ ರಜೆ ನೆಪದಲ್ಲಿ ಈಗಾಗಲೇ ಮುಚ್ಚಿ ಬೀದಿಗೆ ತಳ್ಳಿದ್ದಾರೆ” ಎಂದು ತಿಳಿಸಿದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ,  ಅಂಗವಿಕಲ ಸ್ತ್ರೀಯರಿಗೆ ಖಾಯಂ ಪುನರ್ವಸತಿ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಲು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯಿದೆ 2016 ರ ಜಾರಿಯ ಬಗೆಗಿನ ಜಿಲ್ಲಾ ಕಮಿಷನರಾದ ಜಿಲ್ಲಾಧಿಕಾರಿಗಳಲ್ಲಿ ಮಾನವೀಯಾಡುತ್ತಿದೇವೆ. ಕೂಡಲೇ ಕಲ್ಮೇಶ್ವರ ಗ್ರಾಮೀಣ ಸಂಸ್ಥೆಯ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಸಂಸ್ಥೆ ಮುಚ್ಚುವುದು ಸರ್ಕಾರದ ನಿಯಮಗಳ ಉಲ್ಲಂಘನೆ ಆಗಿದೆ. ಅನುದಾನ, ರಜೆ ನೆಪ ಬಿಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ  ಅನುದಾನಿತ ಸಂಸ್ಥೆಗಳನ್ನು ಮುಚ್ಚಿ ನೇರವಾಗಿ ಇಲಾಖೆಯೇ ನಿರ್ವಹಣೆ ಮಾಡಬೇಕು ಶಾಶ್ವತ ಪರಿಹಾರವನ್ನು ಒದಗಿಸಬೇಕು ನಿರ್ಲಕ್ಷ್ಯ ವಹಿಸಿದ್ದೆ ಆದಲಿ ಜಿಲ್ಲಾಡಳಿತ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು.

ಈ ಸಂದರ್ಭದಲ್ಲಿ ಗಿರಿಜಾ ಗೌಳಿ, ಸುಮಾ ಸಿ ಡಿ, ಪೂಜಾ ಬಾರ್ಕಿ, ಎಸ್ಎಫ್ಐ ಮುಖಂಡರಾದ ಶಂಭುಲಿಂಗ ಸವದತ್ತಿ, ಅರುಣ್ ನಗವತ್, ಪರಶುರಾಮ ಎಸ್, ಕಾಂತೇಶ ಹಳ್ಳೆರ, ಪ್ರವೀಣ್ ಮಟ್ಟೇರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...