ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

Date:

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಕುರಿತು ಚರ್ಚಿಸಲು ನಾಳೆ ಅ.4ರಂದು ಬ್ಯಾಡಗಿಯಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜಿಸಲಾಗಿದೆ” ಎಂದು ಹಾನಗಲ್ ತಾಲ್ಲೂಕು ಅಧ್ಯಕ್ಷ ಮರಿಗೌಡ ಪಾಟೀಲ ತಿಳಿಸಿದರು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್‌ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು “ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾವಯವ ಉತ್ಪನ್ನಗಳ ಮಾರಾಟ, ಮಾರುಕಟ್ಟೆ ಅವಕಾಶಗಳು ಹಾಗೂ ರೈತರು ಮಧ್ಯವರ್ತಿಗಳ ಅವಲಂಬನೆಯಿಲ್ಲದೆ ನೇರವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಕುರಿತು ಮಾಹಿತಿ ನೀಡಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಾವಯವ ಮತ್ತು ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಬೆಳೆದ ಬೆಳೆಗೆ ನಿರೀಕ್ಷಿತ ಬೆಲೆ ದೊರೆಯದಿರುವುದು ರೈತರಿಗೆ ಸಮಸ್ಯೆಯಾಗಿದೆ. ಹೀಗಾಗಿ ಉತ್ಪಾದಕರಿಗೆ ನ್ಯಾಯಯುತ ಬೆಲೆ ಸಿಗುವಂತೆ ಮಾರುಕಟ್ಟೆ ವ್ಯವಸ್ಥೆ ರೂಪಿಸುವುದು ಅಗತ್ಯವಾಗಿದೆ. ‘ನಮ್ಮ ಬೆಳೆ, ನಮ್ಮ ಬೆಲೆ, ನೇರ ಮಾರುಕಟ್ಟೆ’ ಎಂಬ ಆಶಯದೊಂದಿಗೆ ಕಾರ್ಯಾಗಾರ ಆಯೋಜಿಸಲಾಗಿದೆ” ಎಂದು ಅವರು ತಿಳಿಸಿದರು.

“ರಾಸಾಯನಿಕ ಬಳಕೆಯನ್ನು ಕಡಿಮೆ ಮಾಡಿ ಆರೋಗ್ಯಕರ ಆಹಾರ ಉತ್ಪಾದನೆಗೆ ಆದ್ಯತೆ ನೀಡಬೇಕು. ಸಾವಯವ ಕೃಷಿ ಮಾಡುವ ರೈತರಿಗೆ ಸೂಕ್ತ ಪ್ರೋತ್ಸಾಹ ಹಾಗೂ ಮಾರುಕಟ್ಟೆ ಸೌಲಭ್ಯ ದೊರೆಯುವಂತಾಗಬೇಕು” ಎಂದು ಅವರು ಹೇಳಿದರು.

Advertisements

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಮುಖಂಡರಾದ , ಅಡಿವೆಪ್ಪ ಅಲದಕಟ್ಟಿ, ಮೂಕಯ್ಯ ಗುರುಲಿಂಗಮ್ಮನವರ, ಗುಲಾಮಸಾಬ್ ಬಡಗಿ ಹಾಗೂ ಸೋಮಣ್ಣ ಜಡೆಗೊಂಡರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...