ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಇನ್ನಿತರೆ ಇಲಾಖೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಯುವ ಸಂಸತ್ತು ಅಧಿವೇಶನ ನವೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಶಿಕ್ಷಣ ಸಚಿವರಾದ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ಘನ ಉಪಸ್ಥಿತಿಯಲ್ಲಿ, ಸಕ್ಕರೆ ಮತ್ತು ಜವಳಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಉದ್ಘಾಟನೆ ನೆರವೇರಿಸಿ ಅಧ್ಯಕ್ಷತೆ ವಹಿಸಿಲಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ ಬಸವರಾಜ ಎಸ್.ಬೊಮ್ಮಾಯಿ ಅವರು ಗೌರವ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಬ್ಯಾಡಗಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಸೈಯದ್ ಅಜೀಮ್‌ಪೀರ್ ಎಸ್ ಖಾದ್ರಿ, ಶಾಸಕರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಶಾಸಕರಾದ ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ, ಶಾಸಕರು, ಬೆಳಗಾವಿ ಮತ್ತು ಕಲಬುರಗಿ ವಿಭಾಗದ ಅಲ್ಪಸಂಖ್ಯಾತರ ವಸತಿ ನಿಲಯಗಳ ಆಹಾರ ಪರಿಶೀಲನ ಸಮಿತಿ ಅಧ್ಯಕ್ಷರಾದ ಯಾಸೀರ ಅಹ್ಮದ್‌ಖಾನ್ ಪಠಾಣ, ವಿಧಾನ ಪರಿಷತ್ ಶಾಸಕರಾದ ಬಸವರಾಜ ಹೊರಟ್ಟಿ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹನುಮಂತಪ್ಪ ಮರಗಡಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರು ಪಾಲ್ಗೊಳ್ಳಲಿದ್ದಾರೆ.
ಆರ್ಥಿಕ ಇಲಾಖೆ (ವಿತ್ತೀಯ ಸುಧಾರಣೆ) ಸರ್ಕಾರದ ಕಾರ್ಯದರ್ಶಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ವಿಶಾಲ್ ಆರ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.




