ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ ಹೋಗೋದು ಖಚಿತ. ಅವರು ಯಾವಾಗ ಹೋಗುತ್ತಾರೆ ಎಂಬುದು ತೀರ್ಮಾನ ಆಗಬೇಕು ಅಷ್ಟೇ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಮುಂದುವರಿಸಲು ಅಭ್ಯಂತರ ಇಲ್ಲವೆಂದು ಹೈಕೋರ್ಟ್ ಹೇಳಿದೆ. ಮೇಲ್ನೋಟಕ್ಕೆ ಡಿ.ಕೆ ಶಿವಕುಮಾರ್ ಅಕ್ರಮ ಹಣ ಸಂಪಾದನೆ ಮಾಡಿರುವುದು ಬಹಿರಂಗ ಆಗಿದೆ. ಅವರು ಜೈಲಿಗೆ ಹೋಗುವುದರಲ್ಲಿ ಸಂಶಯವೇ ಇಲ್ಲ” ಎಂದು ಹೇಳಿದ್ದಾರೆ.
“ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ಜಾತಿ ಗಣತಿ ಗೊಂದಲ ಸೃಷ್ಠಿಸಿದ್ದಾರೆ.ಜಾತಿ ಗಣತಿ ಬಿಡುಗಡೆಯಾದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಯಲ್ಲ” ಎಂದಿದ್ದಾರೆ.