ಹಾವೇರಿ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಮೂಲಭೂತ ಕರ್ತವ್ಯ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್. ಕರೆ

Date:

“ಮೂಲಭೂತ ಹಕ್ಕುಗಳಿಗಾಗಿ ಹೋರಾಡುವ ನಾವುಗಳು ಈ ಭೂಮಿಯನ್ನು ಸಂರಕ್ಷಿಸುವುದನ್ನೆ ಮರೆತುಬಿಟ್ಟಿದ್ದೇವೆ. ವಿನಾಶದತ್ತ ಸಾಗುತ್ತಿರುವ ಮನುಕುಲವನ್ನು ಉಳಿಸಲು ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಮೂಲಭೂತ ಕರ್ತವ್ಯ ಆಗಿದೆ” ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ  ಬಿರಾದಾರ ದೇವಿಂದ್ರಪ್ಪಾ ಎನ್ ರವರು ಹೇಳಿದರು.

- Advertisement -

ಹಾವೇರಿ ನಗರದ ಪ್ರಾದೇಶಿಕ ಅರಣ್ಯ ವಿಭಾಗದ ಕಚೇರಿ ಆವರಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಭೂ ದಿನ ಕಾರ್ಯಕ್ರಮದಲ್ಲಿ ಸಸಿಯನ್ನು ನೆಟ್ಟು ನೀರೆರೆಯುವುದರ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಜಾಗತಿಕ ತಾಪಮಾನ ಅರಣ್ಯ ನಾಶ ಹಾಗೂ ಮಾಲಿನ್ಯದಂತಹ ಸವಾಲುಗಳನ್ನು ಮೆಟ್ಟಿನಿಲ್ಲಲು ಭೂ ದಿನದ ಆಚರಣೆ ಪೂರಕವಾಗಿದೆ ಭವಿಷ್ಯದ ಪೀಳಿಗೆಗಾಗಿ ಭೂಮಿಯನ್ನು ಉಳಿಸಲು ತುರ್ತು ಕ್ರಮಗಳ ಅಗತ್ಯವಿದೆ ಕೇವಲ ದಿನಾಚರಣೆಗಳಿಗೆ ಸೀಮಿತವಾಗದೆ. ಸಾಮಾಜಿಕವಾಗಿ ಸಾಂಘಿಕವಾಗಿ ಹೋರಾಟ ಮಾಡುವುದರ ಮೂಲಕ ಈ ಸುಂದರ ಪರಿಸರವನ್ನು ಸಂರಕ್ಷಣೆ ಮಾಡಬೇಕಿದೆ “ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಹೆಚ್. ಸಿ. ಸಿದ್ದನಗೌಡ್ರ ಮಾತನಾಡಿ, “ಮಾನವನ ದುರಾಸೆಗಳೇ ಇಂದಿನ ಪರಿಸರ ದುರಂತಗಳಿಗೆ ಬೀಜಗಳಾಗಿವೆ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೀವಿತಾವಧಿಯಲ್ಲಿ ಕನಿಷ್ಠ ಪಕ್ಷ ಕೆಲವು ಸಸಿಗಳನ್ನಾದರೂ ನೆಟ್ಟು ಪೋಷಿಸುವ ಮೂಲಕ ಭೂಮಿತಾಯಿಯ ಋಣ ತೀರಿಸಬೇಕು” ಎಂದರು.

ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕರ್ ಅಕ್ಷಯ ಅಶೋಕ ಅವರು ಮಾತನಾಡಿ, “ನಮಗೆ ಇರುವುದೊಂದೇ ಭೂಮಿ ಇದನ್ನು ಪಾಲನೆ ಪೋಷಣೆಮಾಡುವುದರ ಮೂಲಕ ಸುಂದರ ನಾಳೆಗಾಗಿ ಹಸಿರಾಗಿಸೋಣ ಮತ್ತು ಈ ಸುಂದರ ಪರಿಸರವನ್ನು ನಮ್ಮ ಮುಂದಿನ ಪಿಳಿಗೆಗೆ ಕೊಡುಗೆಯಾಗಿ ನೀಡೋಣ ಜಿಲ್ಲೆಯ ಪ್ರತಿಯೊಂದು ಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ತಾವು ಸೇವಿಸುವ ಹಣ್ಣುಗಳ ಬೀಜಗಳನ್ನು ಸಂಗ್ರಹಿಸಿ ಅರಣ್ಯ ಇಲಾಖೆಗೆ ನೀಡುವುದರ ಮೂಲಕ ಹಸಿರು ವೃದ್ಧಿಗೆ ಸಹಕರಿಸಬೇಕು” ಎಂದು ಕರೆ ನೀಡಿದರು.

ಹಾವೇರಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ. ಹೆಚ್. ಮಂಜುನಾಥ ರವರು ಸ್ವಾಗತಿಸಿದರು, ವಲಯ ಅರಣ್ಯ ಅಧಿಕಾರಿ  ಸಿದ್ದಮ್ಮ ಕರಿಗಾರ ವಂದಿಸಿದರು, ಗಸ್ತು ಅರಣ್ಯ ಪಾಲಕ ಬಸವರಾಜ ಕುಲಕರ್ಣಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಹೆಚ್ ವಿ, ಅರಣ್ಯ ಇಲಾಖೆಯ ಸಿಬ್ಬಂದಿಗಳು, ಜಿ. ಹೆಚ್. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...