ಹಾವೇರಿ | ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಿ ಅಪೌಷ್ಠಿಕತೆ ತೊಡೆದುಹಾಕಿ: ನ್ಯಾ. ಶ್ರೀಶೈಲಜಾ

Date:

ಗರ್ಭಿಣಿಯರು ಪೌಷ್ಠಿಕ ಆಹಾರ ಸೇವಿಸಬೇಕು ಹಾಗೂ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕು. ಇದರಿಂದ ಮಕ್ಕಳಲ್ಲಿನ ಅಪೌಷ್ಠಿಕತೆ ತೊಡೆದುಹಾಕಬಹುದು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲಹಾ ಎಚ್.ವಿ ಹೇಳಿದರು.

- Advertisement -

ಹಾವೇರಿ ಪಟ್ಟಣದ ಇಜಾರಿಲಕಮಾಪೂರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತಾಲೂಕು ಪಂಚಾಯತ್ ಹಾಗೂ ಶಿಶು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ಪೋಷಣ ದಿನಾಚರಣೆ ಹಾಗೂ ರಾಷ್ಟ್ರೀಯ ಪೋಷಣ ಸಪ್ತಾಹ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಮಕ್ಕಳ ಹಾಗೂ ತಾಯಂದಿರಲ್ಲಿ ಕಂಡು ಬರುವ ಅಪೌಷ್ಠಿಕತೆ ತೊಡೆದುಹಾಕಲು ಸರ್ಕಾರ ಜಾರಿಗೊಳಿಸುವ ಯೋಜನೆಗಳು ಎಲ್ಲರಿಗೂ ತಲುಪಬೇಕು. ನಮ್ಮ ಸಂಪ್ರದಾಯಿಕ ಆಹಾರ ಮತ್ತು ಸಿರಿಧಾನ್ಯಗಳ ಸೇವೆನೆ ಮಾಡಲು ಮಕ್ಕಳ ಮನವೊಲಿಸಬೇಕು. ಇದರಿಂದ ನಮ್ಮ ಮುಂದಿನ ಪೀಳಿಗೆ ಪಾರಂಪರಿಕ ಆಹಾರ ಪದ್ದತಿ ಅನುಸರಿಸುತ್ತಾರೆ” ಎಂದರು.

ಇದೇ ಸೆ.19 ರಂದು ರಾಷ್ಟ್ರೀಯ ಲೋಕ ಅದಾಲತ್ ಹಾಗೂ 3.0 ಮಧ್ಯಸ್ಥಿಕೆ ಅಭಿಯಾನ ಜರುಗಲಿದೆ. ನ್ಯಾಯಾಲಯದಲ್ಲಿ ತಮ್ಮ ಪ್ರಕರಣಗಳಿದ್ದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಇತರರಿಗೂ ಮಾಹಿತಿ ನೀಡಬೇಕು. ಖಾಯಂ ಜನತಾ ನ್ಯಾಯಾಲಯದಲ್ಲಿಯೂ ಸಹ ಯಾವುದೇ ಖರ್ಚಿಲ್ಲದೇ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬುದು. ಏನಾದರೂ ಸಮಸ್ಯೆಗಳಿದ್ದಲ್ಲಿ ಕಾನೂನು ಸಲಹೆಗಾಗಿ ಹಾವೇರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಟೋಲ್ ಫ್ರೀ ಸಂಖ್ಯೆ 15100 ಸಂಪರ್ಕಿಸಬಹುದು” ಎಂದು ಹೇಳಿದರು.

ಕಾನೂನು ನೆರವು ಸಹಾಯಕ ಅಭಿರಕ್ಷಣಾ ವಕೀಲ ಎನ್.ಎನ್.ಡಿಳ್ಳೆಪ್ಪನವರ ಅವರು ಪೌಷ್ಠಿಕ ಆಹಾರ ಮತ್ತು ಪೋಕೋ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ನೇತ್ರಾವತಿ ಜಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ...

ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ...

ಬೀಳಗಿ | ಛಾಯಾಗ್ರಾಹಕರಿಗಾಗಿ ಆಕಾಡೆಮಿ ಸ್ಥಾಪಿಸಲು ವಿಠ್ಠಲ ಹಿರೇಮಠ ಆಗ್ರಹ

ಛಾಯಾಗ್ರಾಹಕರ ವೃತ್ತಿ ಭದ್ರತೆ, ಕುಟುಂಬದ ಕಲ್ಯಾಣ ಹಾಗೂ ಸರಕಾರದ ಸೌಲಭ್ಯಗಳನ್ನು ಒದಗಿಸಲು...

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...