ಹಾವೇರಿ | ಕಬ್ಬು ಬೆಲೆ ನಿಗದಿಗೆ ತಜ್ಞರ ವರದಿ ಬರಬೇಕಾಗಿದೆ: ಸಚಿವ ರುದ್ರಪ್ಪ ಲಮಾಣಿ

Date:

“ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿಯ ವರದಿ ಬರಬೇಕಾಗಿದೆ. ವರದಿ ಬಂದ ಬಳಿಕ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರು ಒಟ್ಟಾಗಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ನಮ್ಮ ಸರ್ಕಾರ ಸದಾ ರೈತರ ಪರವಾಗಿದೆ” ಎಂದು ಸಕ್ಕರೆ ಮತ್ತು ಜವಳಿ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರು ತಿಳಿಸಿದರು.

- Advertisement -

ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಮಾರಂಭದ ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಕಬ್ಬು ಬೆಲೆ ನಿಗದಿ ಬರೆ ರಾಜ್ಯ ಸರ್ಕಾರದ ಸಮಸ್ಯೆ ಅಲ್ಲ, ಇದು ದೇಶದ ವಿವಿಧ ರಾಜ್ಯಗಳ ಸಮಸ್ಯೆಯಾಗಿದೆ. ಹಾಗಾಗಿ ಈ ಸಮಸ್ಯೆ ಪರಿಹಾರಕ್ಕೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಕಾರ್ಖಾನೆ ಮಾಲೀಕರ ಸಮನ್ವಯ ಬಹಳ ಮುಖ್ಯವಾಗಿದೆ. ಹಾಗಾಗಿ ಕೇಂದ್ರ ಸರ್ಕಾರ ಸಮಸ್ಯೆ ಬಗೆಹರಿಸಬೇಕು” ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

“ಕಬ್ಬು ಬೆಲೆ ನಿಗದಿ ಕುರಿತು ರೈತರ ಅಹವಾಲುಗಳನ್ನು ಆಲಿಸಲು ಈಗಾಗಲೇ ತಜ್ಞರ ಸಮಿತಿ ರಚಿಸಲಾಗಿದ್ದು, ಅಕ್ಟೋಬರ್ 29ರಂದು ಸಮಿತಿ ಸಭೆ ನಡೆಸಿದೆ. ಮುಖ್ಯಮಂತ್ರಿ ಸೂಚನೆಯಂತೆ ನಾನು ಹಾಗೂ ಲಕ್ಷ್ಮಣ ಸವದಿ ಅವರು ಸಮಿತಿಯೊಂದಿಗೆ ಚರ್ಚೆಯಲ್ಲಿ ಪಾಲ್ಗೊಂಡು, ರೈತ ಮುಖಂಡರ ಅಭಿಪ್ರಾಯಗಳನ್ನು ಮಂಡಿಸಿದ್ದೇವೆ. ರೈತ ಮುಖಂಡರು ಕಬ್ಬು ಬೆಳೆಗಾರರ ಸಮಸ್ಯೆಗಳು, ಬೇಡಿಕೆಗಳು ಹಾಗೂ ಸಾಧಕ-ಬಾಧಕಗಳನ್ನು ಸಮಿತಿಯ ಮುಂದೆ ವಿವರವಾಗಿ ಪ್ರಸ್ತಾಪಿಸಿದ್ದಾರೆ. ಇಂದಿನ ಮಾರುಕಟ್ಟೆ ದರ ಹಾಗೂ ಹಿಂದಿನ ದರಗಳ ನಡುವಿನ ವ್ಯತ್ಯಾಸ ಸೇರಿದಂತೆ ಕಬ್ಬು ಬೆಲೆ ನಿಗದಿ, ಎಂಎಸ್‌ಪಿ ಮತ್ತು ಎಎಪಿ ಕುರಿತ ವಿಚಾರಗಳ ಬಗ್ಗೆಯೂ ಸಮಗ್ರ ಚರ್ಚೆ ನಡೆದಿದೆ. ನೀತಿ ಆಯೋಗದ ಮಾಜಿ ಸದಸ್ಯರು ಸೇರಿದಂತೆ ಅನುಭವಿ ತಜ್ಞರು ಸಮಿತಿಯಲ್ಲಿದ್ದು, ತಜ್ಞರ ವರದಿ ನಿರೀಕ್ಷೆಯಲ್ಲಿದ್ದೇವೆ” ಎಂದು ತಿಳಿಸಿದರು.

“ಸಕ್ಕರೆ ಕಾರ್ಖಾನೆಗಳ ಕಾರ್ಯಾಚರಣೆ ಆರಂಭಿಸುವ ವಿಚಾರದಲ್ಲಿಯೂ ರೈತರ ಹಿತಾಸಕ್ತಿ ಕಾಪಾಡುವುದು ಮುಖ್ಯವಾಗಿದೆ. ಕಾರ್ಖಾನೆಗಳು ಖಾಸಗಿ ಒಡೆತನದಲ್ಲಿರುವುದರಿಂದ ಅವುಗಳ ಕಾರ್ಯಾಚರಣೆಗೆ ನೇರವಾಗಿ ಆದೇಶ ನೀಡುವಲ್ಲಿ ಕೆಲವು ಆಡಳಿತಾತ್ಮಕ ಮಿತಿಗಳಿವೆ. ಆದರೂ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ತಿಳಿಸಿದರು.

“ಇತ್ತೀಚೆಗೆ ಕೆಲವು ಪ್ರದೇಶಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗೆ ಆಹುತಿಯಾಗಿರುವ ಘಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆ ಮಾಲೀಕರು ಸರ್ಕಾರ ವಿಧಿಸುವ ಷರತ್ತುಗಳನ್ನು ಒಪ್ಪಿಕೊಂಡು ಲಿಖಿತ ಭರವಸೆ ನೀಡಬೇಕು. ರೈತರಿಗೆ ಅನ್ಯಾಯವಾಗದಂತೆ ಜಿಲ್ಲಾಧಿಕಾರಿಗಳು ಹಾಗೂ ರೈತ ಮುಖಂಡರ ಸಮ್ಮುಖದಲ್ಲಿ ಸೂಕ್ತ ಷರತ್ತುಗಳನ್ನು ರೂಪಿಸಿ ಕಾರ್ಖಾನೆಗಳ ಕಾರ್ಯಾಚರಣೆಗೆ ಅನುವು ಮಾಡಿಕೊಡುವ ಕುರಿತು ಚರ್ಚಿಸಲಾಗಿದೆ” ಎಂದರು.

“ಈ ಸಂಬಂಧ ಜಿಲ್ಲಾಧಿಕಾರಿಗಳು, ರೈತ ಮುಖಂಡರು ಹಾಗೂ ಕಾರ್ಖಾನೆ ಮಾಲೀಕರೊಂದಿಗೆ ಸಭೆ ಆಯೋಜಿಸಲಾಗಿತ್ತು. ಕಾರ್ಖಾನೆ ಮಾಲೀಕರು ಸಭೆಗೆ ಹಾಜರಾಗಬೇಕು” ಎಂದು ಬೇಡಿಕೆ ಸಲ್ಲಿಸಿದರು.

“ಕಬ್ಬು ಬೆಲೆ ಸಮಸ್ಯೆ ಪರಿಹಾರಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಹಾಗೂ ಕಾರ್ಖಾನೆ ಮಾಲೀಕರ ಪರಸ್ಪರ ಸಹಕಾರದೊಂದಿಗೆ ರೈತರ ಸಮಸ್ಯೆಗಳ ಬಗೆಹರಿಸಲು ಕ್ರಮವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು” ಎಂದು ತಿಳಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರು, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಶ್ಚಿತ್ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಂವಿಧಾನ, ಮಾನವೀಯ ಮೌಲ್ಯಗಳ ರಕ್ಷಣೆಗೆ ಬೀದಿಗಿಳಿಯಿರಿ: ಪ್ರಕಾಶ್ ರಾಜ್

ಪ್ರಸ್ತುತ ದೇಶದ ಪರಿಸ್ಥಿತಿಯಲ್ಲಿ ವೇದಿಕೆಗಳಲ್ಲಿ ನಿಂತು ಭಾಷಣ ಮಾಡುವುದಕ್ಕಿಂತ ಬೀದಿಗಿಳಿದು ಸಂವಿಧಾನ...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಮುಂದೆ ನಡೆಯುತ್ತಿದ್ದ ಧರಣಿ ಹಿಂಪಡೆದ ರೈತರು

"ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್ ವರದಿ ಜಾರಿಗೆ ಆಗುವವರೆಗೂ ಕಾರ್ಖಾನೆಗಳನ್ನು...

ಚಿಂತಾಮಣಿ | ಯಾದವ ಸಮುದಾಯದ ಶೈಕ್ಷಣಿಕ,ಆರ್ಥಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಒತ್ತು : ಮುನೇಗೌಡ

ಯಾದವ ಸಂಘದ ಜಿಲ್ಲಾಧ್ಯಕ್ಷರು ಹಾಗೂ ವಕೀಲರಾದ ಮುನೇಗೌಡ ಅವರು ಚಿಂತಾಮಣಿ ತಾಲ್ಲೂಕಿನ...