ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತಿಮ್ಮಣ್ಣ ರಾಮಣ್ಣ ವಡ್ಡರ (50) ಆತ್ಮಹತ್ಯೆಗೆ ಶರಣಾದ ರೈತ.
ತಿಮ್ಮಣ್ಣ ರಾಮಣ್ಣ ವಡ್ಡರ ಬ್ಯಾಂಕ್ ಹಾಗೂ ಕೈಗಡ ಸೇರಿ 12 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ತಮ್ಮ ಎರಡು ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ಆದರೆ, ಮಳೆ ಕೊರತೆಯಿಂದ ಬೆಳೆ ಒಣಗಿ ಹೋಗಿದ್ದು, ಇದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು.
ಸಾಲದ ಒತ್ತಡ ಹಾಗೂ ಬೆಳೆ ನಷ್ಟದಿಂದ ಮನನೊಂದು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





