ಹಾವೇರಿ | ಹತ್ತು ತಾಸು ವಿದ್ಯುತ್ ಕೊಡಲು ರೈತ ಸಂಘ ಮನವಿ

Date:

ಬೊಮ್ಮನಹಳ್ಳಿ ಗ್ರೀಡ್ ನಿಂದ ರೈತರ ಬೋರ್ ವೆಲ್ ಪಂಪ್ಲೆಟ್ಟುಗಳಿಗೆ ಸರಿಯಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಇದರಿಂದ ರೈತರ ಬೆಳೆಗಳಿಗೆ ನೀರು ಹಾಯಿಸಲು ಅನಾನುಕೂಲ ಉಂಟಾಗಿರುತ್ತದೆ. ದಿನನಿತ್ಯ ಹಗಲಿನ ವೇಳೆ ಹತ್ತು ತಾಸು ವಿದ್ಯುತ್ ಪೂರೈಸುವಂತೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಕೋಡಿಹಳ್ಳಿ ಚಂದ್ರಶೇಖರ ಬಣ)ವತಿಯಿಂದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರುಗೆ(ಎಇಇ) ಅವರಿಗೆ ಮನವಿ ಸಲ್ಲಿಸಿದರು.

- Advertisement -

“ಈಗಾಗಲೇ ಮಳೆ ಕೊರತೆಯಿಂದ ಬೆಳೆಗಳು ಬಿಸಿಲಿನ ಬೇಗೆಗೆ ಸಂಪೂರ್ಣ ಒಣಗಿ ಹೋಗುತ್ತಿವೆ. ಆದ್ದರಿಂದ ತಾವುಗಳು ದಿನನಿತ್ಯ ಹಗಲಿನ ವೇಳೆ ಹತ್ತು ತಾಸು ಸಮರ್ಪಕವಾಗಿ ವಿದ್ಯುತ್ತನ್ನು ಪೂರಿಸಬೇಕು. ಈ ಮೂಲಕ ತಮಗೆ ತಿಳಿಸುತ್ತೇವೆ” ಎಂದು ರೈತರು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಒಂದು ವಾರದಲ್ಲಿ  ವಿದ್ಯುತ್ತನ್ನು ಕೊಡದೆ ಹೋದರೆ, ತಮ್ಮ ವಿರುದ್ಧ, ಇಲಾಖೆ ವಿರುದ್ದ, ಶಾಖೆಯ ಸುತ್ತಮುತ್ತಲಿನ ಎಲ್ಲಾ ರೈತರು ಸೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ತಿಳಿಸಿದರು.

ಮನವಿ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತರು ರೈತ ಮುಖಂಡರು ಉಪಸ್ಥಿತರಿದ್ದರು.

Advertisements

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...