ಹಾವೇರಿ | ಬರಪರಿಹಾರ ಹೆಚ್ಚಳ, ಸಂಪೂರ್ಣ ಸಾಲ ಮನ್ನಾ ನಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

Date:

“ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ ಪರಿಹಾರ ಸಾಲದಾಗಿದ್ದು, ಪರಿಹಾರ ಹೆಚ್ಚಳ ಮಾಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು” ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕು ಘಟಕದಮದ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

- Advertisement -

ರೈತ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ ಡಿ. ಕಬ್ಬಾರ ಮಾತನಾಡಿ, “ಸತತ ಬೆಳೆಹಾನಿಯಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರಪರಿಹಾರ ಮೊತ್ತವನ್ನು ಸರಕಾರ ಹೆಚ್ಚಳ ಮಾಡಬೇಕು. ಸರ್ಕಾರವು ಪ್ರಸ್ತುತ ನೀಡುತ್ತಿರುವ ₹2,500 ಸಾಲದಾಗಿದ್ದು, ಇದನ್ನು ಖಂಡಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಎಕರೆಗೆ ₹25,000 ದಿಂದ ₹30,000 ಪರಿಹಾರ ನೀಡಬೇಕು” ಎಂದು‌ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ಸಾಲದ ಸುಳಿಯಲ್ಲಿ ಸಿಲುಕಿ ರೈತರು ಬೇರೆ ಹಾದಿ ಹಿಡಿಯುತ್ತಿದ್ದು, ಇದನ್ನು ತಡೆಯಲು ಕೃಷಿ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು” ಎಂದು ಆಗ್ರಹಿಸಿದರು.

“ಬಿತ್ತನೆ ಬೀಜ, ಗೊಬ್ಬರ ತಂದ ಅಂಗಡಿಕಾರರು ಹಾಗೂ ಟ್ರ್ಯಾಕ್ಟರ್ ಸಾಲ ನೀಡಿದ ಖಾಸಗಿ ಫೈನಾನ್ಸ್ ಸಂಸ್ಥೆಗಳು ಬರಗಾಲದ ನಡುವೆಯೂ ರೈತರಿಗೆ ತೀವ್ರ ಕಿರುಕುಳ ನೀಡುತ್ತಿದ್ದು, ಇಂತಹ ಸಂಸ್ಥೆಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರೈತರ ಜೀವನ ಹಸನಾಗಲು ಹಾಗೂ ಕೃಷಿ ವಲಯ ಚೇತರಿಸಿಕೊಳ್ಳಲು ಸರ್ಕಾರ ತಕ್ಷಣವೇ ಈ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಗದಗ | ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆಗೆ ಬೆಂಬಲ ಬೆಲೆ

"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ...

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...