ಹಾವೇರಿ | ರೈತರ ಪ್ರತಿಭಟನೆ ಅಂತ್ಯ: ಬಂದ್ ಆಗಿದ್ದ ವಾಹನಗಳ ಸಂಚಾರ ಪುನಃ ಆರಂಭ

Date:

ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗಿದೆ. ಬಂದ್‌ ಆಗಿದ್ದ ವಾಹನಗಳ ಸಂಚಾರ ಪುನಃ ಆರಂಭಗೊಂಡಿದ್ದು, ಹೆದ್ದಾರಿಗಳಲ್ಲಿ ವಾಹನಗಳು ನಿಧಾನವಾಗಿ ಸಂಚಾರ ಆರಂಭಿಸಿವೆ.

- Advertisement -

‘ಕಬ್ಬಿಗೆ ಪ್ರತಿ ಟನ್‌ಗೆ ₹ 5,500 ದರ ನಿಗದಿಪಡಿಸಬೇಕು. ಸ್ವಾಮಿನಾಥನ್‌ ವರದಿ ಜಾರಿಗೆ ತರಬೇಕು’ ಎಂದು ಆಗ್ರಹಿಸಿ ರೈತರು ಮಂಗಳವಾರದಿಂದ ಪ್ರತಿಭಟನೆ ಆರಂಭಿಸಿದ್ದರು. ಟೋಲ್‌ನಲ್ಲಿ ಕುಳಿತು ಆಕ್ರೋಶ ಹೊರಹಾಕಿದ್ದರು. ಎರಡನೇ ದಿನವಾದ ಬುಧವಾರವೂ ಹೋರಾಟ ಮುಂದುವರಿಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ರಾತ್ರಿ 8 ಗಂಟೆಯವರೆಗೂ ಪ್ರತಿಭಟನೆ ನಡೆಸಿದ ರೈತರು, ರಾಜ್ಯ ಸಂಘದ ಆದೇಶದ ಮೇರೆಗೆ ಪ್ರತಿಭಟನೆ ಹಿಂಪಡೆದಿದ್ದಾಗಿ ಘೋಷಿಸಿದ್ದಾರೆ. ನಂತರ, ಟೋಲ್ ಕಾರ್ಯಾಚರಣೆ ಶುರುವಾಗಿದೆ. ಅಲ್ಲಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಪೊಲೀಸರು, ಹೆದ್ದಾರಿ ಮೂಲಕ ಸಂಚರಿಸಲು ಅನುಕೂಲ ಮಾಡಿಕೊಡುತ್ತಿದ್ದಾರೆ.

ಅಲ್ಲಿಂದಲೇ ಧಾರವಾಡವರೆಗೂ ಪಾದಯಾತ್ರೆ ನಡೆಯುವುದಾಗಿ ಘೋಷಿಸಿದ್ದಾರೆ. ಹಾವೇರಿ ರೈತರು ಸಹ ಧಾರವಾಡ ಜಿಲ್ಲೆಗೆ ತೆರಳಿದ್ದಾರೆ. ಅದೇ ಕಾರಣಕ್ಕೆ ಪ್ರತಿಭಟನೆ ಹಿಂಪಡೆದಿರುವುದಾಗಿ ರೈತ ಮುಖಂಡರು ತಿಳಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...