ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

Date:

“ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ ತುರ್ತು ಬ್ಯಾರೇಜ್ ಗೇಟ್ ಅಳವಡಿಸಿ ಜನ ಜಾನುವಾರುಗಳಿಗೆ ಅನುಕೂಲವಾಗುವಂತೆ ನೀರು ಸಂಗ್ರಹಿಸಬೇಕು” ಎಂದು ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

- Advertisement -

ಹಾವೇರಿ ಜಿಲ್ಲೆಯ ರಾಣಿಬೆನ್ನೂರ ತಾಲ್ಲೂಕಿನ ಮುಷ್ಟೂರು, ಮಲಕನಹಳ್ಳಿ, ಮಣಕೂರು, ಲಿಂಗದಹಳ್ಳಿ, ಚಿಕ್ಕಮಾಗನೂರು, ಗೋಡಿಹಾಳ, ಕೂಲಿ, ಕುಡಪಲಿ ಗ್ರಾಮದ ಬಳಿ ಕುಮಧ್ವತಿ ನದಿಗೆ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗೆ ಗೇಟ್ ಅಳವಡಿಸುವಂತೆ ಸಣ್ಣ ನೀರಾವರಿ ಇಲಾಖೆಯ ಎಂಜಿನೀಯರ್ ಮಣಿಕಂಠ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ʼಮಹಾಭಾರತʼ ಟಿವಿ ಧಾರಾವಾಹಿಗೆ ಅವಿಸ್ಮರಣೀಯ ಸಂಭಾಷಣೆ ಬರೆದಿದ್ದ ಈ...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ರೈತ ಮುಖಂಡ ರವೀಂದ್ರಗೌಡ ಎಫ್. ಪಾಟೀಲ ಮಾತನಾಡಿ, ‘ಮಳೆ ಕೊರತೆಯಿಂದ ಬರಗಾಲ ಆವರಿಸಿದೆ. ಕುಮದ್ವತ್ತಿ ನದಿ ಸಂಪೂರ್ಣ ಬರಿದಾಗಿದೆ. ಸರ್ಕಾರ ಏಮರ್ಜನ್ಸಿ ವಾಟರ್ ಸ್ಟೋರೆಜ್ ಅಂತ ಘೋಷಣೆ ಮಾಡಿ ತುರ್ತು ಬ್ಯಾರೇಜ್ ಗೇಟ್ ಅಳವಡಿಸಿ ಜನ-ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.

‘ಕುಮದ್ವತ್ತಿ ನದಿಗೆ ಸಣ್ಣ ನೀರಾವರಿ ಇಲಾಖೆಯಿಂದ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ನಲ್ಲಿ ಈಗಿರುವ ನೀರನ್ನು ಬ್ಯಾರೇಜ್ ಗೇಟ್ ಅಳವಡಿಸುವ ಮೂಲಕ ನೀರನ್ನು ಸಂಗ್ರಹಿಸಬೇಕು. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಬೇಕಾಗಿದೆ. ಸಣ್ಣ ನೀರಾವರಿ ಇಲಾಖೆ ಗೇಟ್ ಅಳವಡಿಸುವ ದಿನಾಂಕಕ್ಕೆ ಕಾಯದೆ ಕುಮದ್ವತ್ತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಡ್ಜ್ ಕಂ ಬ್ಯಾರೇಜುಗಳ ಗೇಟುಗಳನ್ನು ಕೂಡಲೇ ಹಾಕಿ ನೀರನ್ನು ಸಂಗ್ರಹಿಸಿ ಜೀವ ಸಂಕುಲವನ್ನು ಕಾಪಾಡಬೇಕಾಗಿದೆ’ ಎಂದು ಒತ್ತಾಯಿಸಿದರು.

ಧರ್ಮರಡ್ಡಿ ನಿಂಗರಡ್ಡರ, ಹರಿಹರಗೌಡ ಪಾಟೀಲ, ಯಲ್ಲಪ್ಪ ಓಲೇಕಾರ, ಗುರುನಗೌಡ ಪಾಟೀಲ, ಹನುಮರಡ್ಡಿ ಬಳ್ಳಾರಿ, ಶೇಖನಗೌಡ ಪಾಟೀಲ, ಪ್ರಭಣ್ಣ ಮುದ್ದೂರುನಾಯ್ಕ, ಸಂಕನಗೌಡ ಪಾಟೀಲ, ಯಲ್ಲರಡ್ಡಿ ಯರೇಕುಪ್ಪಿ, ಮಾರುತಿ ಅಂಗಡಿ, ಗೋವಿಂದಪ್ಪ ಕೋರೆರ, ಹಾಲೇಶ ಹೊಳೆಆನ್ವೇರಿ, ಉಮೇಶ ಮುಷ್ಟೂರು ನಾಯ್ಕ, ಮಾಂತೇಶ ದೂಳೆಹೊಳೆ, ಸುರೇಶ ಹೊನ್ನತ್ತಿ, ಜಮಾಲಸಬಾ ಶೇತಸನದಿ, ಕುಮಾರಿ ಕೋಣನತಲಿ, ವಿಜಯ ನಿಂಗರಡೇರ ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...