“ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯಗೊಳಿಸಿರುವುದನ್ನು ರಾಜ್ಯ ಸರ್ಕಾರ ತೆರವುಗೊಳಿಸಬೇಕು” ಎಂದು ಜಿಲ್ಲೆಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಒತ್ತಾಯಿಸಿದರು.
ಹಾವೇರಿ ಪಟ್ಟಣದ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಕೆ.ಮಲ್ಲಿಕಾರ್ಜುನ್ ಅವರನ್ನು ಶನಿವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪೂರ ಮಾತನಾಡಿ, “ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯಗೊಳಿಸಿದ್ದರಿಂದ ರೈತರಿಗೆ ತೊಂದರೆ ಆಗುತ್ತದೆ. ಒಂದು ಎಕರೆಗೆ ಮೂರರಿಂದ ಐದು ಚೀಲ ಯೂರಿಯಾ ಗೊಬ್ಬರವನ್ನು ಬಳಸಲಾಗುತ್ತದೆ” ಎಂದರು.
“ನಮ್ಮ ಜಿಲ್ಲೆಯಲ್ಲಿ ಹೆಚ್ಚು ಮಳೆ ಆಗುವುದರಿಂದ ಭೂಮಿಯು ಜವಳು ಆಗುತ್ತದೆ. ಬೆಳೆ ಹಳದಿ ಬಣ್ಣ ತಿರುಗಿ ಇಳುವರಿಯಲ್ಲಿ ಕುಂಠಿತವಾಗುತ್ತದೆ. ಬೆಳೆದ ಬೆಳೆಯಲ್ಲಿ ಇಳುವರಿ ಬಾರದಿದ್ದಲ್ಲಿ ರೈತ ಸಾಲಗಾರ ಆಗುತ್ತಾನೆ. ರೈತ ಯಾವಾಗಲೂ ಸ್ವಾಭಿಮಾನಿ ಅವನ ಮರ್ಯಾದೆಗೆ ಧಕ್ಕೆ ಬಂದರೆ ಆತ್ಮಹತ್ಯೆಗೆ ಮುಂದಾಗುತ್ತಾನೆ. ಆದ ಕಾರಣ ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯಗೊಳಿಸಿದ್ದರಿಂದ ಸರಕಾರ ಇದನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು” ಎಂದು
“ರಾಜ್ಯ ಸರ್ಕಾರ ಒಂದು ಎಕರೆಗೆ ಒಂದು ಚೀಲ ಯೂರಿಯಾ ಗೊಬ್ಬರ ವಿತರಣೆಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ. ರೈತರು ಯಾವ ಬೆಳೆ ಬೆಳೆಯಬೇಕು, ಯಾವ ಬೆಳೆಗೆ ಎಷ್ಟು ಗೊಬ್ಬರವನ್ನು ಹಾಕಬೇಕೆಂಬುದು ರೈತರಿಗೆ ಗೊತ್ತಿದೆ. ನಮಗೆ ರೈತರು ಬೆಳೆಗಳನ್ನು ಬೆಳೆಯುವ ಕಷ್ಟ ಗೊತ್ತು. ರಾಜಕಾರಣ ಮಾಡುವವರಿಗೆ, ಅಧಿಕಾರಿಗಳಿಗೆ ತಿಳಿಯುವುದಿಲ್ಲ ಇದು ತಿಳಿಯುವುದಿಲ್ಲ” ಎಂದ ಅಸಮಾಧಾನ ವ್ಯಕ್ತಪಡಿಸಿದರು.
ರಸಗೊಬ್ಬರ ಕಡಿತಗೊಂಡಲ್ಲಿ ಇಳುವರಿ ಪ್ರಮಾಣ ಕಡಿಮೆಯಾಗುತ್ತದೆ. ಎಫ್ಐಡಿ ಕಡ್ಡಾಯ ಮತ್ತು ಒಂದು ಎಕರೆಗೆ ಒಂದು ಚೀಲ ಯೂರಿಯಾ ಒದಗಿಸುವ ಯೋಜನೆಯನ್ನು ಸರಕಾರ ಕೈಬಿಡಬೇಕು” ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





