ಹಾವೇರಿ | ಇನ್ನೂ ಮೈಕ್ರೋ ಪೈನಾನ್ಸಗಳ ಕಿರುಕುಳ ತಪ್ಪಿಲ್ಲ: ರೈತ ಸಂಘದ ಜಿಲ್ಲಾಧ್ಯಕ್ಷ ಹನಮಂತಪ್ಪ ಕಬ್ಬಾರ ಆರೋಪ

Date:

“ಖಾಸಗಿ ಮೈಕ್ರೋ ಪೈನಾನ್ಸಗಳನ್ನು ವಿರೋಧಿಸಿ ಸಾಕಷ್ಟು ಹೋರಾಟಗಳನ್ನು ಮಾಡಿದ ನಂತರ ಸರಕಾರ ಎಚ್ಚೆತ್ತು ಸುಗ್ರಿವಾಜ್ಞೆಯನ್ನು ಜಾರೆಗೆ ತಂದಿದ್ದರೂ ಕೂಡ ಇನ್ನೂ ಕೆಲವು ಮೈಕ್ರೋ ಪೈನಾನ್ಸಗಳು ಜನರಿಗೆ ಕಿರುಕುಳ ತಪ್ಪಿಲ್ಲ” ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹನಮಂತಪ್ಪ ಕಬ್ಬಾರ ಆಕ್ರೋಶ ವ್ಯಕ್ತಪಡಿಸಿದರು‌.

- Advertisement -

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದ ತಹಶೀಲ್ದಾರರ ಕಚೇರಿ ಎದುರು ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕನ್ನಡಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಮೈಕ್ರೋ ಪೈನಾನ್ಸ್ ಗಳಿಂದ ಜನರಿಗೆ, ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದು, ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸುವಂತೆ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಬರಗಾಲ ಇರುವುದರಿಂದ ಎಲ್ಲ ಸಾರ್ವಜನಿಕರಿಗೆ ಕೆಲಸ ಇಲ್ಲದೆ, ಬಡ ಕುಟುಂಬಗಳು ಜೀವನ ನಡೆಸುವುದು ಕಷ್ಟಕರ ಆಗುತ್ತಿದೆ. ಆದ್ದರಿಂದ ಸರಕಾರ ಎಚ್ಚೆತ್ತುಕೊಂಡು ಬಡವರ ಕಷ್ಟಕ್ಕೆ ಧಾವಿಸಬೇಕು‌. ಮೈಕ್ರೋ ಪೈನಾನ್ಸ್ ಗಳಲ್ಲಿ ಮಾಡಿದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಬಡವರ ಕಷ್ಟಗಳಿಗೆ ಸ್ಪಂದನೆ ಮಾಡಬೇಕು” ಎಂದು ಸರಕಾರಕ್ಕೆ ಒತ್ತಾಯಿಸಿದರು.

ಮೈಕ್ರೋ ಪೈನಾನ್ಸ್ ಗಳಿಂದ ನೊಂದ ಮಹಿಳೆಯರ ಪರವಾಗಿ ನಾವಿಂದು ತಹಶೀಲ್ದಾರರ ಮೂಲಕ ಮನವಿ ಮಾಡುತ್ತಿದ್ದೇವೆ. ಈಗಾಗಲೇ ಬೆಂಗಳೂರಿನಲ್ಲಿ ಸದನ ಆರಂಭವಾಗಿದೆ. ಈ ಕುರಿತು ಚರ್ಚೆ ನಡೆಸಿ, ನೊಂದ ಮಹಿಳೆಯರ ಸಾಲ ಮನ್ನ ಮಾಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಅಮೀದಾಬಾನು ಶಿಡೆನೂರು, ಶೈಲಮ್ಮ ಹರನಗಿರಿ, ನೀಲಮ್ಮ ಮೆಗಳಗೇರಿ, ಬಸವರಾಜ ಮೆಗಳಗೇರಿ, ಕೀರಣ ಗುಳೇದ, ನಾಗಮ್ಮ ತಳವಾರ, ಶಂಕರ ಬಾರ್ಕಿ ಸೇರಿದಂತೆ ಕನ್ನಡಪರ ಸಂಘಟನೆಯ ಮುಖಂಡರು, ರೈತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...