ಹಾವೇರಿ | ಜೀವನದಲ್ಲಿ ಆರೋಗ್ಯ, ಶಿಕ್ಷಣ, ಕೌಶಲ್ಯ ಬಹಳ ಮುಖ್ಯವಾಗಿವೆ: ಜಿಲ್ಲಾಧಿಕಾರಿ

Date:

“ಜೀವನದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಕೌಶಲ್ಯ ಅತೀ ಮುಖ್ಯ. ಕಾಲಮಾನಕ್ಕೆ ತಕ್ಕಂತೆ ಕೌಶಲ್ಯಗಳನ್ನು ಶಿಕ್ಷಣದ ಜೊತೆಗೆ ಅಳವಡಿಸಿಕೊಳ್ಳಬೇಕು” ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

- Advertisement -

ಹಾವೇರಿ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ವಿಶ್ವ ಯುವ ಕೌಶಲ್ಯ ದಿನ ಅಂಗವಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಂದ ತಯಾರಿಸಿದ ಬಟ್ಟೆಯ ಮೇಲೆ ಚಿತ್ರಕಲೆಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕೌಶಲ್ಯ ಹೊಂದಿದವರು ಹೆಚ್ಚು ಶ್ರಮವಹಿಸದೇ ಅಧಿಕ ಹಣ ಗಳಿಸಲು ಸಾಧ್ಯ. ಹಾಗಾಗಿ ಜೀವನದಲ್ಲಿ ಕೌಶಲ್ಯ ಬಹಳ ಮುಖ್ಯವಾಗಿದೆ” ಎಂದು ಹೇಳಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀಮತಿ ಸೋನಾಲಿ ಕ್ಷೀರಸಾಗರ ಅವರು ಮಾತನಾಡಿ, “ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಸೋಲಾರ್ ಪಿ. ವಿ ಆಪರೇಟರ್, ಅಸಿಸ್ಟೆಂಟ್ ಡಿಸೈನರ್ ಮತ್ತು ಅಪ್ಯಾರೆಲ್ಸ್ ಹಾಗೂ ಡೇಟಾ ಎಂಟ್ರಿ ಆಪರೇಟರ್ ತರಬೇತಿಗಳು ಪ್ರಾರಂಭವಾಗಲಿದ್ದು, ಕಂಪ್ಯೂಟರ್ ತರಬೇತಿಗಳ ಜೊತೆಗೆ ಪಾರಂಪರಿಕ ಮತ್ತು ಸಾಂಪ್ರದಾಯಿಕ ತರಬೇತಿಗಳು ಸಹ ಬಹಳ ಮುಖ್ಯವಾಗಿದೆ. ಜಿಲ್ಲೆಯಲ್ಲಿ ಸ್ಯಾಂಪಲಿಂಗ್ ಟೇಲರ್ ಮತ್ತು traditional Painting Maker- Artisan ತರಬೇತಿಗಳು ನಡೆಯುತ್ತಿವೆ” ಎಂದರು.

“ಹಾವೇರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮೇಲ್ವಿಚಾರಣೆಯಲ್ಲಿ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಕೌಶಲ್ಯಕರ ಯೋಜನೆ (ಸಿ.ಎಂ.ಕೆ.ಕೆ.ವೈ) ಯಡಿ ಪಾರಂಪರಿಕ ಮತ್ತು ಪ್ರಾದೇಶಿಕ ಯೋಜನೆಯಡಿ traditional Painting Maker- Artisan ಜಾಬ್ ರೋಲ್ ಗೆ ಒಟ್ಟು 60 ಅಭ್ಯರ್ಥಿಗಳು ತಿಳವಳ್ಳಿ ಮಂದಾರ ಎಜ್ಯುಕೇಶನ್ ಸೊಸೈಟಿಯಲ್ಲಿ ತರಬೇತಿ ಪಡೆದಿದ್ದಾರೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಶ್ರೀಮತಿ. ಅಮೂಲ್ಯ ಬಿ. ಬಮ್ಮಣ್ಣನವರ, ಜಿಲ್ಲಾ ಉದ್ಯೋಗಾಧಿಕಾರಿ ಚೈತನ್ಯಕುಮಾರ ಎಸ್. ಮೋಹಿತೆ ಇತರರು ಉಪಸ್ಥಿತರಿದ್ದರು. ಅಭಿಯಾನ ವ್ಯವಸ್ಥಾಪಕ ವಿನಾಯಕಬಾಬು ಸ್ವಾಗತಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...