ಹಾವೇರಿ | ಬೀಕರ ಅಪಘಾತ ; ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಮೂವರು ಮೃತ

Date:

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮುವರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ಸಂಭವಿಸಿದೆ.

- Advertisement -

ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ಧಾರ್ಥ(27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸೌಂದರ್ಯ(26), ಸಿಂಧೂ(24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದೆ. ಗಾಯಾಳುಗಳನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ವೇಳೆ ಚಳಗೇರಿ ಟೋಲ್ ಗೇಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.

ಅಪಘಾತದ ಮಾಹಿತಿ ತಿಳಿದು ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಾಯ,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...