ಹಾವೇರಿ | ಪದವೀಧರರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಣಕ್ಕೆ ಇಳಿದಿದ್ದೇನೆ: ಮೋಹನ ಲಿಂಬಿಕಾಯಿ

Date:

ನಾಲ್ಕು ದಶಕಗಳಿಂದ ವಿವಿಧ ಸಂಘಟನೆಗಳ ಮೂಲಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿದ್ದೇನೆ, ಹೀಗಾಗಿ ಜನಪರ ಕಾರ್ಯ ಮಾಡುವ ಮೂಲಕ ಪದವೀಧರರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಣಕ್ಕೆ ಇಳಿದಿದ್ದೇನೆ, ಒಂದು ಬಾರಿ ಸೇವೆ ಮಾಡಲು ಅವಕಾಶ ಕಲ್ಪಿಸಿ’ ಎಂದು ಕಾಂಗ್ರೆಸ್‌ ಅಭ್ಯರ್ಥಿ ಮೋಹನ ಲಿಂಬಿಕಾಯಿ ಮನವಿ ಮಾಡಿದರು.

- Advertisement -

ಪಟ್ಟಣದಲ್ಲಿ ಭಾನುವಾರ ತಾಲ್ಲೂಲು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

“ನನೆಗುದಿಗೆ ಬಿದ್ದಿರುವ ಪದವೀಧರರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಪದವೀಧರರ ಆಶೋತ್ತರಗಳಿಗೆ ಸ್ಪಂದಿಸಿ ಶಾಶ್ವತ ಪರಿಹಾರ ನೀಡುವ ಗುರಿ ನಮ್ಮದು. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು, ಶಿಕ್ಷಕರ ಮೇಲಿರುವ ಅನಗತ್ಯ ಕೆಲಸದ ಹೊರೆ ಕಡಿಮೆ ಮಾಡುವುದು, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುವುದು ನಮ್ಮ ಧೈಯ” ಎಂದರು.

ಶಾಸಕ ಯಾಸೀ‌ರ್ ಅಹ್ಮದಖಾನ್ ಪಠಾಣ ಮಾತನಾಡಿ, ‘ಬಿಜೆಪಿ ಅಭ್ಯರ್ಥಿಗಳು ಈವರೆಗೂ ನೀಡಿದ ಭರವಸೆಗಳು ಯಾವವೂ ಈಡೇರಿಲ್ಲ. ಅವರ ಭರವಸೆಯ ಮಾತುಗಳಿಗೆ ಮರುಳಾಗಬೇಡಿ. ಬಿಜೆಪಿಯ ತಂತ್ರ, ಕುತಂತ್ರಗಳು ಇನ್ನು ನಡೆಯುವುದಿಲ್ಲ” ಎಂದರು.

“5 ಕೋಟಿ ಅನುದಾನವನ್ನು ಪಟ್ಟಣದ ಕ್ರೀಡಾಂಗಣ ಅಭಿವೃದ್ಧಿಗೆ ನೀಡಿದ್ದೇನೆ. ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆಗೆ ₹ 350 ಕೋಟಿ ಅನುದಾನ ನೀಡಲಾಗಿದೆ. ಭಾರತ್ ಜೋಡೋ ಸಂಘಟನೆಗಳಲ್ಲಿ ಪದವೀಧರರನ್ನು ಸೇರ್ಪಡೆ ಮಾಡಲಾಗುತ್ತಿದೆ. ಈ ಬಾರಿ ಪದವೀಧರ ಮತದಾರರು ಐತಿಹಾಸಿಕ ಬದಲಾವಣೆ ಮಾಡಲಿದ್ದಾರೆ ಎಂಬ ಭರವಸೆ ಇದೆ” ಎಂದರು.

ಮಾಜಿ ಸಂಸದ ಮಂಜುನಾಥ ಕುನ್ನೂರ, ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ವಸಂತಾ ಬಾಗೂರ, ವಕೀಲರಾದ ಎಸ್.ವಿ. ಪಾಟೀಲ, ಪಿ. ವಿ.ನಡುವಿನಮಠ, ಪ್ರೇಮಾ ಪಾಟೀಲ ಮಾತನಾಡಿದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ಹೊಳೆಗದ್ದೆ ಟೋಲ್ ಬಳಿ ಅಲ್ಫಾ ವೈನ್ ಶಾಪ್‌ನಲ್ಲಿ ಕಳ್ಳತನ; 2.39 ಲಕ್ಷ ರೂ. ನಗದು ದರೋಡೆ

ಕುಮಟಾ: ತಾಲೂಕಿನ ಹೊಳೆಗದ್ದೆ ಟೋಲ್ ಬಳಿಯ ಅಲ್ಫಾ ವೈನ್ ಶಾಪ್‌ನ ಶೆಟರ್...

ಉಡುಪಿ | ಮೂಲ ನಿವಾಸಿಗಳ ಮತದಾನದ ಹಕ್ಕು ಕಿತ್ತುಕೊಳ್ಳುವ ಸಂಚು: ಜ್ಞಾನಪ್ರಕಾಶ ಸ್ವಾಮೀಜಿ ಆರೋಪ

ಮೂಲನಿವಾಸಿಗಳ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಯ ಅರಿವು ಮೂಡಿಸಿಕೊಂಡು ಜಾಗೃತರಾದಾಗ ಮಾತ್ರ...

ಕೋಲಾರ | ಎಸ್‌ಐಆರ್ ವಿರುದ್ಧದ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರದ ಯತ್ನ: ಖಂಡನೆ

ಎಸ್‌ಐಆರ್‌ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ...

​ಚಿಂತಾಮಣಿ | ಪದವೀಧರರ ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...