ಹಾವೇರಿ | ಹಾನಗಲ್ ವಿದ್ಯಾರ್ಥಿನಿ ಬಿಂದುಶ್ರೀಗೆ NEET ಪರೀಕ್ಷೆಯಲ್ಲಿ ಅನ್ಯಾಯ; ಸರಿಪಡಿಸಲು ಎಸ್ಎಫ್ಐ ಡಿವೈಎಫ್ಐ ಆಗ್ರಹ

Date:

ಹಾನಗಲ್ ತಾಲ್ಲೂಕಿನ ವಿದ್ಯಾರ್ಥಿನಿ ಬಿಂದುಶ್ರೀಗೆ NEET ಪರೀಕ್ಷೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಜಿಲ್ಲಾ ಸಮಿತಿಗಳು ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿದರು.

- Advertisement -

“ಹಾನಗಲ್ ತಾಲ್ಲೂಕಿನ ವಿದ್ಯಾರ್ಥಿನಿ ಬಿಂದುಶ್ರೀ ಅವರು ನೀಟ್ ಪರೀಕ್ಷೆಯಲ್ಲಿ ಉತ್ತಮವಾಗಿ ಪರೀಕ್ಷೆ ಬರೆದಿದ್ದರೂ, ಪರೀಕ್ಷಾ ಪ್ರಕ್ರಿಯೆಯಲ್ಲಿನ ಅನ್ಯಾಯ/ಅಕ್ರಮದ ಪರಿಣಾಮವಾಗಿ ಒಎಂಆ‌ರ್ ಪ್ರತಿ ತಿರುಚಿ ಕೇವಲ 11 ಅಂಕ ಬರುವಂತೆ ಮಾಡಲಾಗಿದೆ. ಅವರ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗಿದೆ. ವಿದ್ಯಾರ್ಥಿನಿಯ ಪರಿಶ್ರಮ ಮತ್ತು ಭವಿಷ್ಯವನ್ನು ಪರಿಗಣಿಸಿ, ಈ ಪ್ರಕರಣವನ್ನು ಗಂಭೀರವಾಗಿ ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸುವುದು ಅಗತ್ಯವಾಗಿದೆ” ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ನೀಟ್ ನಂತಹ ಮಹತ್ವದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಲೋಪ, ಅಕ್ರಮ ಅಥವಾ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು.

ಎಸ್ಎಫ್ಐ ಮತ್ತು ಡಿವೈಎಫ್ಐ ಸಮಿತಿಗಳ ವತಿಯಿಂದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತೇವೆ. ವಿದ್ಯಾರ್ಥಿನಿ ಬಿಂದುಶ್ರೀ ಅವರಿಗೆ ನೀಟ್ ಪರೀಕ್ಷೆಯಲ್ಲಿ ಆಗಿರುವ ಅನ್ಯಾಯದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಪರೀಕ್ಷಾ ಪ್ರಕ್ರಿಯೆಯಲ್ಲಿ ನಡೆದಿರುವ ಲೋಪ/ತಪ್ಪು ಪತ್ತೆಹಚ್ಚಿ, ವಿದ್ಯಾರ್ಥಿನಿಗೆ ನ್ಯಾಯ ದೊರಕುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳಿಂದ ಪ್ರಕರಣದ ಕುರಿತು ಸ್ಪಷ್ಟ ವರದಿ ಪಡೆದು, ವಿದ್ಯಾರ್ಥಿನಿಯ ಶೈಕ್ಷಣಿಕ ಭವಿಷ್ಯಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿನಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಆಕೆಯ ಶೈಕ್ಷಣಿಕ ಹಕ್ಕು ಮತ್ತು ಭವಿಷ್ಯವನ್ನು ರಕ್ಷಿಸಬೇಕು. 

ಇಂತಹ ಘಟನೆಗಳು ಮರುಕಳಿಸದಂತೆ ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆ ಹಾಗೂ ಪಾರದರ್ಶಕತೆ ಖಚಿತಪಡಿಸಬೇಕು. ವಿದ್ಯಾರ್ಥಿನಿ ಬಿಂದುಶ್ರೀ ಅವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಮನವಿಯನ್ನು ತುರ್ತಾಗಿ ಪರಿಗಣಿಸಿ, ನ್ಯಾಯ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ. ಈ ವಿದ್ಯಾರ್ಥಿನಿಗೆ ಸರಿಯಾದ ರೀತಿಯಲ್ಲಿ ಪುನಃ ಪ್ರಶ್ನೆ ಪತ್ರಿಕೆಯನ್ನು ಪರಿಶೀಲಿಸಬೇಕು ಇಲ್ಲವಾದಲ್ಲಿ ನಮ್ಮ ಹೋರಾಟ ಬೃಹತ್ ಪ್ರಮಾಣದಲ್ಲಿ ನಡೆಸಬೇಕಾಗುತ್ತೆ. 

ಈ ಸಂಧರ್ಭದಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಸಂಚಾಲಕ ಅರುಣ್ ಕುಮಾರ್ ನಗವತ್, ಹಾವಿ.ವಿ ಘಟಕದ ಕಾರ್ಯದರ್ಶಿ ಶಂಭು ಸವದತ್ತಿ, ಉಪಾಧ್ಯಕ್ಷ ಪರಶುರಾಮ ಎಸ್, ಎಸ್ಎಫ್ಐ ಮುಖಂಡರಾದ ಕಲ್ಪನಾ ಬಡಿಗೇರ, ಕೀರ್ತಿ ಹುನಿಕಟ್ಟಿ, ಅಪೂರ್ವ ಮಲ್ಲಾಡ, ಜಯಲಕ್ಷ್ಮೀ ಪಾಟೀಲ್, ಸ್ವಪ್ನ ಮನೋಜಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...