ಹಾವೇರಿ | ವಿಮಾ ಪರಿಹಾರ ಜಮಾ: ಸರ್ಕಾರದ ನಿರ್ಲಕ್ಷ್ಯಕ್ಕೆ ರೈತ ಸಂಘ ಕಿಡಿ

Date:

ಪ್ರಸಕ್ತ ಸಾಲಿನ ಬೆಳೆವಿಮೆ ನೋಂದಣಿ ಮಾಡುವಲ್ಲಿ ಸಾಲಗಾರರು, ಸಾಲಗಾರರಲ್ಲದವರನ್ನು ವಿಂಗಡಿಸಿ ಸ್ವಯಂ ದೃಢೀಕರಣ ಸಲ್ಲಿಸುವುದರಲ್ಲಿನ ಗೊಂದಲ ನಿವಾರಿಸಬೇಕು. ಸರ್ಕಾರ 9 ತಿಂಗಳು ಕಳೆದರೂ ವಿಮಾ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ರೈತ ಸಂಘ, ಹಸಿರು ಸೇನೆ ಹಾವೇರಿ ಜಿಲ್ಲೆಯ ಹಾನಗಲ್ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

- Advertisement -

“2026-27 ಸಾಲಿನ ಶುಂಠಿ, ಹಸಿಮೆಣಸಿನ ಕಾಯಿ, ಅಡಕೆ ಮತ್ತು ಮಾವು ಬೆಳೆಯ ವಿಮಾ ಪರಿಹಾರದ ಅವಧಿ ಮುಕ್ತಾಯವಾಗಿ 9 ತಿಂಗಳು ಕಳೆದರೂ ವಿಮಾ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡಲಾಗಿಲ್ಲ. ಕೂಡಲೇ ಖಾತೆಗೆ ಪರಿಹಾರದ ಹಣ ಜಮಾ ಮಾಡಬೇಕು. ಬೆಳೆ ವಿಮೆ ಕಂತು ತುಂಬುವ ಕುರಿತು ಅಂತಿಮ ದಿನಾಂಕವನ್ನು ನಿಗದಿ ಮಾಡಿರುವ ಹಾಗೇ ಪರಿಹಾರ ಹಣವನ್ನು ರೈತರ ಖಾತೆಗೆ ಜಮಾ ಮಾಡಲು ದಿನಾಂಕ ನಿಗದಿಸಿ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, “ಕಳೆದೊಂದು ತಿಂಗಳ ಹಿಂದೆಯೇ ಜಿಲ್ಲಾಧಿಕಾರಿ ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಕೆರೆ ತುಂಬಿಸುವ ಯೋಜನೆಯನ್ನು ಸಕಾಲದಲ್ಲಿ ಪ್ರಾರಂಭಿಸಲು ಸೂಚಿಸಲಾಗಿತ್ತು. ಆದರೂ ಯೋಜನೆ ಕಾರ್ಯಾರಂಭ ಮಾಡದಿರುವುದು ಅಧಿಕಾರಿಗಳು ರೈತರಿಗೆ ಮಾಡುತ್ತಿರುವ ದ್ರೋಹವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸದರು.

ಮನವಿ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ, ಸೋಮಣ್ಣ ಜತೆಗೊಂಡವರ, ರುದ್ರಪ್ಪ ಹಣ್ಣಿ, ಶಿವಯೋಗಿ ಹೊಸಗೌಡ್ರ, ಮಾಲತೇಶ ಪರಪ್ಪನವರ ಇನ್ನೂ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...