ಹಾವೇರಿ | ವಿಮಾ ಯೋಜನೆ; ಕೃಷಿ ಇಲಾಖೆಯ ಆದೇಶ ಗೊಂದಲ; ಸರಿಪಡಿಸುವಂತೆ ರೈತ ಸಂಘದ ಅಧ್ಯಕ್ಷ ಅನಿಲ್ ಡೊಳ್ಳಿನ

Date:

“ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಹಾಗೂ ಹವಾಮಾನ ಆಧಾರಿತ ವಿಮಾ ಯೋಜನೆಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯು ಇತ್ತೀಚೆಗೆ ಹೊರಡಿಸಿರುವ ಆದೇಶವು ಗೊಂದಲಪೂರ್ಣವಾಗಿದ್ದು, ಇದಕ್ಕೆ ಸಂಬಂಂಧಿಸಿದಂತೆ ಜಿಲ್ಲಾಧಿಕಾರಿಗಳು ಕೂಡಲೆ ರೈತ ಸಂಘಟನೆಗಳ ಸಭೆ ಕರೆದು ರೈತರೊಂದಿಗೆ ಚರ್ಚೆ ನಡೆಸಿ ಗೊಂದಲ ನಿವಾರಣೆಗೆ ಮುಂದಾಗಬೇಕು” ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ( ಕೋಡಿಹಳ್ಳಿ ಚಂದ್ರಶೇಖರ್ )ಯ ಜಿಲ್ಲಾ ಅಧ್ಯಕ್ಷ ಅನಿಲ್ ಡೊಳ್ಳಿನ ಆಗ್ರಹಿಸಿದ್ದಾರೆ.

- Advertisement -

ಹಾವೇರಿ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಜಿಲ್ಲೆಯಲ್ಲಿ ಐದಾರು ವರ್ಷಗಳಿಂದ ಬೆಳೆ ವಿಮೆ ಪರಿಹಾರ ರೈತರಿಗೆ ದೊರಕಿಲ್ಲ. ಎಲ್ಲೊ ಕೆಲವು ಭಾಗದಲ್ಲಿ ಕೆಲವರಿಗೆ ಮಾತ್ರ ಅಲ್ಪಾಂಶ ಪರಿಹಾರ ದೊರಕಿದೆ. ಬೆಳೆನಷ್ಟ ಅನುಭವಿಸಿದ ರೈತರಿಗೆ ವಿಮೆ ಪರಿಹಾರ ನೀಡದ ಕಾರಣ, ಪರಿಹಾರದ ನಿರೀಕ್ಷೆಯಲ್ಲಿ ಪಶು ಸಂಗೋಪನೆ, ಕೃಷಿ ಯಾಂತ್ರೀಕರಣ ಮತ್ತಿತರೆ ಖರ್ಚುವೆಚ್ಚಗಳಿಗೆ ಕೈ ಹಾಕಿದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರತಿವರ್ಷ ಬಹುತೇಕ ರೈತರು ಬೆಳೆ ವಿಮೆ ತುಂಬುತಿದ್ದು ಪರಿಹಾರ ಮಾತ್ರ ಕನಸಿನ ಗಂಟಾಗಿದೆ. ಈ ಇತ್ತೀಚೆಗೆ ಜಿಲ್ಲಾಧಿಕಾರಿಗಳೇ ಪತ್ರಿಕಾ ಹೇಳಿಕೆ ನೀಡಿದ್ದು, ಬೆಳೆ ವಿಮೆ ತುಂಬುವಂತೆ ರೈತರಲ್ಲಿ ಮನವಿ ಮಾಡಿದ್ದಾರೆ. ಬಾರದ ವಿಮೆ ಪರಿಹಾರಕ್ಕಾಗಿ ರೈತ ಸಂಘಟನೆಗಳು ಹೋರಾಡುತ್ತಲೇ ಇವೆ. ಜಿಲ್ಲಾಡಳಿತವಾಗಲಿ, ವಿಮೆ ಕಂಪನಿಗಳಾಗಲೀ ಈ ವರೆಗೂ ಸಮರ್ಪಕ ಉತ್ತರ ನೀಡಿಲ್ಲ.  ವಿಮೆ ಪರಿಹಾರ ನೀಡದಿರುವುದಕ್ಕೆ ಸಕಾರಣಗಳಿಲ್ಲ. ಜವಾಬ್ದಾರಿ ಹೋರುತ್ತಿಲ್ಲ. ಹಾಗಾದರೆ, ಈ ವರೆಗೆ ರೈತರು ಕಟ್ಟಿದ ಕೋಟಿ ಕೋಟಿ ಪ್ರೀಮಿಯಂ ಹಣ ಎಲ್ಲಿಗೆ ಹೋಯಿತು ಎಂದು  ಅನಿಲ್ ಡೊಳ್ಳಿನ ಪ್ರಶ್ನಿಸಿದ್ದಾರೆ.

“ಇದೆಲ್ಲವನ್ನೂ ನೋಡಿದರೆ, ಈ ಬೆಳೆವಿಮೆ ಯೋಜನೆಗಳು ರೈತರ ಲೂಊಟಿಗಾಗಿ ಜಾರಿಗೊಂಡಿರುವವೇ? ಎಂಬ ಅನುಮಾನ ರೈತರಲ್ಲಿ ಮೂಡಿದೆ. ಈ ಮಧ್ಯೆ ಕೃಷಿ ಇಲಾಖೆ ಹೊಸ ಷರತ್ತು ವಿಧಿಸಿ ಆದೇಶ ಹೊರಡಿಸಿದೆ ಎನ್ನಲಾಗುತ್ತಿದೆ. ಅದರ ಪ್ರಕಾರ ಸಾಲಗಾರರಲ್ಲದ ರೈತರು ಸ್ವಘೋಷಣಾ ಪತ್ರ ಕೊಡಬೇಕಂತೆ. ಸಾಲಗಾರ ರೈತರು ಬೆಳೆ ವಿಮೆ ತುಂಬಲು ಅರ್ಹರೇ? ಅಲ್ಲವೇ ಸ್ಪಷ್ಟನೆ ಇಲ್ಲವಾಗಿದೆ ಎಂದಿರುವ ಅವರು,  ಈ ಎಲ್ಲ ಗೊಂದಲ ನಿವಾರಣೆಗಾಗಿ ಜಿಲ್ಲಾಧಿಕಾರಿಗಳು ಕೂಡಲೇ  ರೈತಸಂಘಟನಗಳ ಸಭೆ ಕರೆದು, ಬೆಳೆ ವಿಮೆ ಸೇರಿದಂತೆ ರೈತರ ಪ್ರಸ್ತುತ ಸಮಸ್ಯೆಗಳ ಕುರಿತು ರೈತರೊಂದಿಗೆ ಚರ್ಚಿಸಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...