ಹಾವೇರಿ | ಆರೋಗ್ಯ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಕರವೇ ಮನವಿ

Date:

ಗ್ರಾಮೀಣ ಪ್ರದೇಶದಲ್ಲಿರುವ ಉಪ ಆರೋಗ್ಯ ಕೇಂದ್ರಗಳಿಗೆ ಮೂಲಸೌಕರ್ಯ ಹಾಗೂ ತಾಲೂಕಿನ ಎಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಸುರಕ್ಷಾ ಅಧಿಕಾರಿಗಳು ಕೆಂದ್ರ ಸ್ಥಾನದಲ್ಲಿ ವಾಸ್ತವ್ಯ ಇರುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣದ) ಕಾರ್ಯಕರ್ತರು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ಮಾಡಿ, ತಾಲೂಕ ಆರೋಗ್ಯ ಅಧಿಕಾರಿ ಡಾ. ಸತೀಶಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿದ ನಂತರ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ಓಲೇಕಾರ ಮಾತನಾಡಿ, “ಕೇಂದ್ರ ಮತ್ತು ರಾಜ್ಯ ಸರಕಾರವು ಗ್ರಾಮೀಣ ಭಾಗದ ಜನರ ಪರಿಸ್ಥಿತಿಯನ್ನು ಅರಿತು ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಉಪ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಿ, ಆ ಕಟ್ಟಡಗಳಿಗೆ ಆರೋಗ್ಯ ಸುರಕ್ಷಾ ಅಧಿಕಾರಿಗಳನ್ನು ನೇಮಿಸಿದ್ದಾರೆ” ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಸದರಿ ಅಧಿಕಾರಿ ಆಯಾ ಕೇಂದ್ರಗಳಲ್ಲಿ ವಾಸ್ಥವ್ಯವಿದ್ದು, ಗ್ರಾಮೀಣ ಪ್ರದೇಶ ಜನರ ಆರೋಗ್ಯ ಸುಧಾರಿಸಲು ಪ್ರಥಮ ಚಿಕಿತ್ಸೆ ನೀಡುವುದರ ಜೊತೆಗೆ ಗರ್ಭಿಣಿ ಬಾಣಂತಿಯರ ಆರೋಗ್ಯವನ್ನು ಕ್ಷಣ ಕ್ಷಣ ವಿಚಾರಿಸಲು ಸರ್ವ ರೀತಿಯ ವ್ಯವಸ್ಥೆ ಮಾಡಿರುವುದನ್ನು ತಮ್ಮ ಇಲಾಖೆಯ ಬಹಳಷ್ಟು ಜನ ಆರೋಗ್ಯ ಸುರಕ್ಷಾ ಅಧಿಕಾರಿಗಳು ಸರಿಯಾಗಿ ನಿರ್ವಹಿಸದೇ ಇರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀರ್ವವಾಗಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪುಟ್ಟಪ್ಪ ಹಿತ್ತಲಮನಿ, ನೂರ ಅಹ್ಮದ ಲಕ್ಷೇಶ್ವರ, ಮಾರುತಿ ಹಾಲಗಿ, ಮಾದೇವಪ್ಪ ಹೇಡಿಗೊಂಡ, ಅನಸೂಯಾ ಶಿದ್ದಪ್ಪಳವರ, ಖಲಂದರ ಎಲೆಹಳ್ಳಿ, ಧರ್ಮಣ್ಣ ಡಮ್ಮಳ್ಳಿ, ರಮೇಶ ದಾಸಪ್ಪನವರ, ಪವನ ವಡ್ಡರ, ಮೌಲಾಸಾಬ ನದಾಫ, ಶೇಖಪ್ಪ ದೀಪಾವಳಿ, ರಾಜಕುಮಾರ ದೊಡ್ಡಮನಿ, ಶಾರದಾ ಆರಬಗೊಂಡ. ರಾಜಣ್ಣ ಗೌಡರ, ಕೃಷ್ಣಪ್ಪ ನಾಗಜ್ಜಿ, ಅಶೋಕ ಸವಣೂರ, ಸುರೇಶ ಲಚಮಣ್ಣವರ, ಬಸವರಾಜ ಹರಿಜನ, ಅಣ್ಣಪ್ಪ ಸವಣೂರ, ಅಣ್ಣಪ್ಪ ಬಾಳಂಬೀಡ, ರಮೇಶ ಹೋಬಳೇರ, ಮಾಬುಬಲಿ ದುಂಡಶಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...