ಹಾವೇರಿ | ಎಂಎಸ್‌ಪಿ ಖರೀದಿಗೆ ಪಾಸಾಗಿದ್ದ ಮೆಕ್ಕೆಜೋಳ, ಮಾರುವಾಗ ರಿಜೆಕ್ಟ್: ರೈತ ಕಂಗಾಲು

Date:

ಕಳೆದ ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಬೆಳೆದ ರೈತರ ಸಮಸ್ಯೆ ದಿನದಿಂದ ದಿನಕ್ಕೆ ಬೇರೆ ಬೇರೆ ರೂಪ ಪಡೆದುಕೊಳ್ಳುತ್ತಿದೆ. ಎಂಎಸ್‌ಪಿ(ಬೆಂಬಲ ಬೆಲೆ) ಖರೀದಿಗೆ ನೋಂದಣಿ ಮಾಡಿಸುವ ವೇಳೆ ಪಾಸಾಗಿದ್ದ ಮೆಕ್ಕೆಜೋಳ ಮಾದರಿ‌, ಮಾರಾಟದ ವೇಳೆ ರಜರಕ್ಟ್‌ ಆಗಿದೆ. ಇದರಿಂದಾಗಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.

- Advertisement -

ಹಾವೇರಿ ಜಿಲ್ಲೆಯಲ್ಲಿ ರೈತರು ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿ ಖರೀದಿ ಮಾಡುವಂತೆ ಪ್ರತಿಭಟನೆ ನಡೆಸಿದ್ದರು. ಸರ್ಕಾರ ಆರಂಭದಲ್ಲಿ ರೈತರಿಂದ ತಲಾ 12 ಕ್ವಿಂಟಲ್ ಮೆಕ್ಕೆಜೋಳ ಖರೀದಿ ಮಾಡುವುದಾಗಿ ಘೋಷಣೆ ಮಾಡಿತ್ತು. ಬಳಿಕ ರೈತರು ಹೋರಾಟ ಮುಂದುವರೆಸಿದಾಗ ತಲಾ 20 ಕ್ವಿಂಟಲ್​ ಎಂದು ಘೋಷಣೆ ಮಾಡಿ, ನಂತರ 50 ಕ್ವಿಂಟಲ್‌ಗೆ ಖರೀದಿ ಪ್ರಮಾಣ ಏರಿಕೆ ಮಾಡಿತ್ತು. ಆದರೆ, ಬ್ಯಾಡಗಿ ಪಟ್ಟಣದ ಎಪಿಎಂಸಿಯಲ್ಲಿರುವ ಕೆಎಂಎಫ್​ ಖರೀದಿ ಕೇಂದ್ರಕ್ಕೆ ತಂದಿರುವ ಮೆಕ್ಕೆಜೋಳದಲ್ಲಿ ಖರೀದಿಗಿಂತ ಹೆಚ್ಚು ಪ್ರಮಾಣದಲ್ಲಿ ಮೆಕ್ಕೆಜೋಳವನ್ನು ರಿಜೆಕ್ಟ್ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬ್ಯಾಡಗಿ ಎಪಿಎಂಸಿಗೆ ಬ್ಯಾಡಗಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೈತರು ಮೆಕ್ಕೆಜೋಳ ಮಾರಾಟಕ್ಕೆ ತಂದಿದ್ದಾರೆ. ಮೆಕ್ಕೆಜೋಳ ಖರೀದಿ ನೋಂದಣಿ ವೇಳೆ‌ ಆಯ್ಕೆಯಾಗಿದ್ದ ಮಾದರಿ(ಸ್ಯಾಂಪಲ್) ಮೆಕ್ಕೆಜೋಳವನ್ನು ಖರೀದಿ ಕೇಂದ್ರಕ್ಕೆ ತಂದರೆ ಇದೀಗ ತಿರಸ್ಕರಿಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? 2025ರಲ್ಲಿ ಸರ್ಕಾರದ ನಿದ್ದೆಗೆಡಿಸಿದ ರೈತ ಚಳವಳಿಗಳು: ಎಲ್ಲೆಲ್ಲಿ ಏನೇನಾಯ್ತು?

ಬ್ಯಾಡಗಿ ಮಾರುಕಟ್ಟೆಗೆ ಮೆಕ್ಕೆಜೋಳ ಮಾರಾಟಕ್ಕೆ ಬಂದಿರುವ ರೈತರು ಏಳೆಂಟು ದಿನಗಳಿಂದ ಮನೆಗೆ ಹೋಗದೆ ಟ್ರ್ಯಾಕ್ಟರ್ ಮೇಲೆಯೇ ಮಲಗಿ ಜೀವನ ಕಳೆಯುತ್ತಿದ್ದಾರೆ. ಆದರೆ ಮೆಕ್ಕೆಜೋಳ ಮಾತ್ರ ಖರೀದಿಯಾಗುತ್ತಿಲ್ಲ. ಇದರಿಂದ ಟ್ರ್ಯಾಕ್ಟರ್‌ ಬಾಡಿಗೆ ಹೆಚ್ಚಳವಾಗುತ್ತಿದೆ. ಅಲ್ಲದೆ ಊಟ, ವಸತಿ ವ್ಯವಸ್ಥೆಗಳಿಲ್ಲ. ಇಷ್ಟು ದಿನ ನಿಲ್ಲಿಸಿ ಇನ್ನೇನು ಖರೀದಿ ಹತ್ತಿರ ಹೋಗುತ್ತಿದ್ದಂತೆ ಅಧಿಕಾರಿಗಳು, ಖರೀದಿದಾರರು ʼಮೆಕ್ಕೆಜೋಳಕ್ಕೆ ಫಂಗಸ್ ಇದೆ, ಮೆಕ್ಕೆಜೋಳದಲ್ಲಿ ತೇವಾಂಶ ಅಧಿಕವಿದೆʼ ಎಂಬ ಕಾರಣ ನೀಡಿ ಮೆಕ್ಕೆಜೋಳ ಖರೀದಿ ಮಾಡುತ್ತಿಲ್ಲವೆಂಬ ಆರೋಪಗಳು ವ್ಯಕ್ತವಾಗುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...