ಹಾವೇರಿ | ಪ್ರೊ.ಬಿ.ಕೃಷ್ಣಪ್ಪ ಅವರ ಬದುಕು ನಮಗೆ ಆದರ್ಶವಾಗಲಿ: ಉಡಚಪ್ಪ ಮಾಳಗಿ

Date:

“ಶೋಷಿತರ ಮನೆ ಮನೆಗಳಲ್ಲಿ ಹೋರಾಟದ ಹಣತೆಯನ್ನು ಹಚ್ಚಿ, ಶೋಷಿತರ ಧ್ವನಿಯಾಗಿ ಹಾಗೂ ಸ್ಪೂರ್ತಿಯಾಗಿ ಕೆಲಸ ಮಾಡಲು ಪ್ರೊ. ಬಿ.ಕೃಷ್ಣಪ್ಪ ಅವರು ನಿರಂತರವಾಗಿ ಹಗಲಿರುಳು ಶ್ರಮಿಸಿದ್ದಾರೆ. ಅವರ ಹೋರಾಟದ ಬದುಕು ನಮಗೆ ಆದರ್ಶವಾಗಲಿ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಅವರು ಹೇಳಿದರು.

- Advertisement -

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ವತಿಯಿಂದ ಆಯೋಜಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಸಂಸ್ಥಾಪಕರಾದ ಪ್ರೊ.ಬಿ.ಕೃಷ್ಣಪ್ಪ ಅವರ 29ನೇ ಪರಿನಿಬ್ಬಾಣ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ಪ್ರೊ.ಬಿ.ಕೃಷ್ಣಪ್ಪ ಅವರನ್ನು ದಲಿತ ಚಳುವಳಿಯ ಪಿತಾಮಹ,ರಾಜ್ಯದ ಎರಡನೇ ಅಂಬೇಡ್ಕರ್ ಎಂದು ಹೇಳಬಹುದು. ಅವರು ನಮಗೆ ನೀಡಿದ ಕೊಡುಗೆ ಅಪಾರವಾಗಿದೆ. ಪ್ರೊ.ಬಿ.ಕೃಷ್ಣಪ್ಪ ಅವರ ಬದುಕಿನ ಆದರ್ಶಗಳನ್ನು ಪಾಲಿಸುವ ಮೂಲಕ ಅವರ ಹೋರಾಟದ ಹೆಜ್ಜೆಗಳನ್ನು ಮುನ್ನಡಿಸೋಣ. ಅವರು ಹಚ್ಚಿದ ಶೋಷಣೆಯ ವಿರುದ್ಧದ ಹೋರಾಟದ ಹಣತೆಯನ್ನು ಎಂದಿಗೂ ಹಾರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದರು.

“ಪ್ರೊ.ಬಿ.ಕೃಷ್ಣಪ್ಪ ಅವರು ನಮಗಾಗಿ ಎಲ್ಲವನ್ನು ತ್ಯಾಗ ಮಾಡಿದ್ದಾರೆ. ಅವರು ನಮಗೆ ಸದಾ ಸ್ಪೂರ್ತಿದಾಯಕವಾಗಲಿದ್ದಾರೆ” ಎಂದು ಉಡಚಪ್ಪ ಮಾಳಗಿ ಹೇಳಿದರು.

 ಈ ಸಂದರ್ಭದಲ್ಲಿ ಮುಖಂಡರಾದ ಡಿಎಸ್ ಎಸ್ ಸಂಚಾಲಕರಾದ ಮಾಲತೇಶ ಯಲ್ಲಾಪುರ, ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷರು ಮಂಜಪ್ಪ ಮರೋಳ, ಅಲೆಮಾರಿ ಸಮಾಜದ ಅಧ್ಯಕ್ಷರು ಶೆಟ್ಟಿ ವಿಭೂತಿ, ಬಿಎಸ್‌ಪಿ ಪಕ್ಷದ ಅಧ್ಯಕ್ಷರುಎಂ.ಕೆ ಮಖಬೂಲ್, ಮುಖಂಡರು ಸುಭಾಷ ಚವ್ಹಾಣ, ಸುರೇಶ ಛಲವಾದಿ, ಬಸವಣ್ಣೆಪ್ಪ ಅಳ್ಳಿಳ್ಳಿ, ಬಸವರಾಜ ಕಾಳೆ, ಹನಮಂತಪ್ಪ ಸಿ.ಡಿ, ಹನುಮಂತಪ್ಪ ಹೌಂಶಿ, ಮಹಾದೇವಪ್ಪ ಹರಿಜನ, ಪರಸಪ್ಪ ಹರಿಜನ, ಕೋಟೆಪ್ಪ ಹರಿಜನ, ಮಾಲತೇಶ ಬಜಳ್ಳಿ, ಅಣ್ಣಪ್ಪ ಹರಿಜನ, ಹನುಮಂತಪ್ಪ ಹರಿಜನ, ಸಂತೋಷ ಕನ್ನಮ್ಮನವರ, ಹುಲಿಗೆಪ್ಪ ಕಿಳ್ಳಿತ್ಯಾತರ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ...