ಹಾವೇರಿ | ಬೆಳೆ ಪರಿಶೀಲಿಸಿದ ಸಚಿವ ರುದ್ರಪ್ಪ ಲಮಾಣಿ: ಹಸಿ ಬರ ಘೋಷಣೆಗೆ ರೈತರ ಒತ್ತಾಯ

Date:

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಆಳಲಗರಿ ಹಾಗೂ ಕಲ್ಲೆದೇವರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಗೋವಿನಜೋಳ ಬೆಳೆ ವೀಕ್ಷಿಸಿದರು. ಪ್ರಸ್ತುತ ಸಂದರ್ಭದಲ್ಲಿ ಮಳೆ ಕೊರತೆಯಿಂದ ಬೆಳೆ ವಿನಾಶದ ಭೀತಿ ಎದುರಿಸುತ್ತಿರುವ ರೈತರು ತಮ್ಮ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

- Advertisement -

“ತಾಲೂಕಿನಲ್ಲಿ ಸಮರ್ಪಕವಾಗಿ ಮಳೆಯಾಗದೆ ಬೆಳೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಕಾಣುತ್ತಿಲ್ಲ. ಜಿಟಿಜಿಟಿ ಮಳೆಯಾಗುತ್ತಿರುವುದರಿಂದ ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಅಗತ್ಯ ಪ್ರಮಾಣದ ತೇವಾಂಶ ದೊರೆಯುತ್ತಿಲ್ಲ. ಹೀಗಾಗಿ ಬೆಳೆಗಳಿಗೆ ಹಾನಿಯಾಗುವ ಆತಂಕ ಎದುರಾಗಿದ್ದು, ಸರ್ಕಾರ ಹಸಿ ಬರ ಘೋಷಣೆ ಮಾಡಬೇಕು” ಎಂದು ರೈತರು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಈಗಾಗಲೇ ಬಿತ್ತನೆ ಮಾಡಿರುವ ಗೋವಿನಜೋಳ ಬೆಳೆ ಸಮರ್ಪಕವಾಗಿ ಬೆಳೆಯುತ್ತಿಲ್ಲ. “ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗದಿದ್ದರೆ ಬೆಳೆ ಇಳುವರಿ ಗಣನೀಯವಾಗಿ ಕುಸಿಯುವ ಸಾಧ್ಯತೆ ಇದೆ” ಎಂದು ರೈತರು ಸಚಿವರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ರೈತ ಸಂಘದ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಸೇರಿದಂತೆ ಅನೇಕ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸತ್ತಳೆಂದು ಅಂತ್ಯಕ್ರಿಯೆ ಸಿದ್ದತೆ ವೇಳೆ, ಸಾವಿನಂಚಿನಿಂದ ಪಾರಾದ ಅಜ್ಜಿ

ಅಜ್ಜಿ ಸತ್ತಳೆಂದು ಕುಟುಂಬಸ್ಥರೆಲ್ಲಾ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಕೊನೇ ಕ್ಷಣದಲ್ಲಿ ಜೀವಂತ ಇದ್ದ ಮಹಿಳೆ...

ಔರಾದ ತಾಲೂಕು ʼಬರʼ ಘೋಷಿಸಿ : ಸಿಎಂಗೆ ಶಾಸಕ ಪ್ರಭು ಚವ್ಹಾಣ ಮನವಿ

ಔರಾದ(ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ...

ಕೆವಡಿಯಾದ ರಸ್ತೆಗಳಲ್ಲಿ ಮಹಿಳೆಯರ ಕೈಗೆ ಸ್ಟೀರಿಂಗ್; ಪ್ರವಾಸೋದ್ಯಮದಿಂದ ಬದಲಾಯಿತು ಜೀವನದ ಲೆಕ್ಕಾಚಾರ

ಸ್ಟ್ಯಾಚ್ಯೂ ಆಫ್ ಯೂನಿಟಿ (ಏಕತೆಯ ಮೂರ್ತಿ) ಆವರಣದಲ್ಲಿ ಸಂಚರಿಸುವಾಗ ಗಮನ ಸೆಳೆಯುವ...

ಬಡವರು, ಉಳ್ಳವರು ಎಂದು ಹೇಗೆ ವಿಂಗಡಣೆ ಮಾಡುತ್ತೀರಿ: ಬಿಜೆಪಿ ನಾಯಕರಿಗೆ ಸಿಎಂ ಡಿ ಕೆ ಶಿವಕುಮಾರ್ ಪ್ರಶ್ನೆ

"ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ,...