ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಸತೀಶ್ ಜಾರಕಿಹೊಳಿ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹಾವೇರಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆ (Cloud Seeding) ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
“ಮಳೆಯ ಕೊರತೆಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ನೆರವಾಗುವ ಹಾಗೂ ಜಿಲ್ಲೆಯ ಜಲಸಂಪನ್ಮೂಲಗಳನ್ನು ಬಲಪಡಿಸುವ ಉದ್ದೇಶದಿಂದ ಶಾಸಕ ಪ್ರಕಾಶ ಕೆ. ಕೋಳಿವಾಡ ಅವರ ನೇತೃತ್ವದಲ್ಲಿ ಆರಂಭಗೊಂಡಿರುವ ಈ ಮಹತ್ವಾಕಾಂಕ್ಷಿ ಮೋಡ ಬಿತ್ತನೆ ಕಾರ್ಯ ಯಶಸ್ವಿಯಾಗಿ ಉತ್ತಮ ಮಳೆಯಾಗಲು ಸಹಕಾರಿಯಾಗಲಿ” ಎಂದು ಹಾರೈಸೋಣ.

ಈ ಸಂದರ್ಭದಲ್ಲಿ ಮಾಜಿ ಸಚಿವರು ಶ್ರೀ ಹೆಚ್. ಕೆ. ಪಾಟೀಲ್, ವಿಧಾನ ಸಭಾಧ್ಯಕ್ಷರಾದ ಶ್ರೀ ರುದ್ರಪ್ಪ ಲಮಾಣಿ, ಶಾಸಕರಾದ ಶ್ರೀ ಯು.ಬಿ. ಬಣಕಾರ, ಶ್ರೀ ಎನ್. ಎಚ್ ಕೊನರಡ್ಡಿ, ಶ್ರೀ ಬಾಬಾಸಾಹೇಬ್ ಪಾಟೀಲ್, ಶ್ರೀ ಯಾಸೀರ್ ಖಾನ್ ಪಠಾಣ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.




