ಹಾವೇರಿ | ತೈಲ, ಅನಿಲ ಬೆಲೆ ಹೆಚ್ಚಳ; ಡಿವೈಎಫ್ಐ ಖಂಡನೆ 

Date:

“ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗೃಹ ಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಬೆಲೆ ನಿರಂತರವಾಗಿ ಹೆಚ್ಚಿಸಿದ್ದರಿಂದ ಜನಸಾಮಾನ್ಯರ ಜೀವನದ ಮೇಲೆ ಭಾರೀ ಹೊರೆ ಉಂಟುಮಾಡಿದೆ. ಕೇಂದ್ರ ಸರ್ಕಾರ ತಕ್ಷಣವೇ ತೈಲ ಮತ್ತು ಅನಿಲ ದರಗಳನ್ನು ಇಳಿಸಿ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು” ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಗ್ರಹಿಸಿದ್ದಾರೆ.

- Advertisement -

ಹಾವೇರಿ ಪಟ್ಟಣದಲ್ಲಿ ಸೋಮವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ 2.61 ರೂ ಮತ್ತು 2.71 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಮೂಲಕ ಎರಡೇ ವಾರದಲ್ಲಿ ಇಂಧನ ಬೆಲೆಗಳು ಲೀಟರ್‌ಗೆ 7.5 ರೂಪಾಯಿಯಷ್ಟು ತುಟ್ಟಿಯಾಗಿ ಪೆಟ್ರೋಲ್ 110, ಡಿಸೇಲ್ 95 ರೂಪಾಯಿ ಏರಿಕೆಯಾಗಿದ್ದು, ಇನ್ನೂ ಬೆಲೆ ಹೆಚ್ಚಳವಾಗುವ ಆತಂಕವಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಇಂಧನ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಾಗಿ, ಅದರ ಪರಿಣಾಮವಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಬಡ, ಮಧ್ಯಮ ವರ್ಗ ಹಾಗೂ ಕಾರ್ಮಿಕ ಜನತೆ ಮತ್ತಷ್ಟು ಆರ್ಥಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಅಡುಗೆ ಅನಿಲದ ಬೆಲೆ ಏರಿಕೆಯಿಂದ ಬಡ ಹಾಗೂ ಮದ್ಯಮ ವರ್ಗದ ಜನತೆಯ ಬದುಕು ಸಂಕಷ್ಟಕರವಾಗಿದೆ” ಎಂದಿದ್ದಾರೆ.

“ಅಲ್ಲದೇ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಕೊರತೆಯಾಗುತ್ತಿರುವುದು ಕೂಡ ಜನರಿಗೆ ಸಂಕಷ್ಟ ತಂದೊಡ್ಡಿದ್ದು, ಅನಿಶ್ಚಿತೆಯಲ್ಲಿ ಬದುಕುವಂತಾಗಿದೆ. ಜಮಸಾಮಾನ್ಯರಿಗೆ ಸಮರ್ಪಕವಾಗಿ ಅಡುಗೆ ಅನಿಲ ಹಾಗೂ ತೈಲ ದೊರೆಯುವಂತೆ ಕೇಂದ್ರ ಸರಕಾರ ಸೂಕ್ತ ಕ್ರಮಗಳನ್ನು ಸರಕಾರ ಕೈಗೊಳ್ಳಬೇಕಿದೆ” ಎಂದು ಹೇಳಿದ್ದಾರೆ.

“ಸರ್ಕಾರಿ ಸ್ವಾಮ್ಯದ ತೈಲ ಪೂರೈಕೆ ಕಂಪನಿಗಳು ತಮ್ಮ ನಷ್ಟ ಸರಿದೂಗಿಸಲು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಾದ ಬೆಲೆ ಏರಿಕೆಯನ್ನು ಗ್ರಾಹಕರಿಗೆ ವರ್ಗಾಯಿಸುವ ಮೂಲಕ ಸಂಕಷ್ಟ ತಂದೊಡ್ಡಲಾಗುತ್ತಿದ್ದರೂ, ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರಕಾರ ಅದರಲ್ಲೂ ಪ್ರಧಾನ ಮತ್ರಿಗಳು ಆರ್ಥಿಕ ಮಿತವ್ಯಯ ಕುರಿತು ಜನತೆಗೆ ಕರೆ ನೀಡುತ್ತಿರುವುದನ್ನು ಡಿವೈಎಫ್ಐ ತೀವ್ರವಾಗಿ ಖಂಡಿಸುತ್ತದೆ.

“ತೈಲ ಬೆಲೆ ಹೆಚ್ಚಳದಿಂದಾಗಿ ಸಾಮಾನ್ಯ ಜನರಿಗೆ ಬದುಕು ನಡೆಸುವುದೇ ದುಸ್ತರವಾಗಿದ್ದು, ಜನರ ಮೇಲೆ ತೆರಿಗೆ ಭಾರ ಹಾಕಿರುವುದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಹಿಂಪಡೆಯಬೇಕು. ಆ ಮೂಲಕ ಜನಪರ ನೀತಿಯನ್ನು ಅನುಸರಿಸಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ದರಗಳನ್ನು ತಕ್ಷಣವೇ ಕಡಿಮೆ ಮಾಡಬೇಕು” ಎಂದು ಒತ್ತಿಯಿಸಿದ್ದಾರೆ.

“ಜನರ ಬದುಕಿಗೆ ಸಂಬಂಧಿಸಿದ ಈ ಪ್ರಮುಖ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪೆಟ್ರೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಲು ಕ್ರಮ ಕೈಗೊಳ್ಳದಿದ್ದರೆ, ಜನತೆ ತೀವ್ರವಾದ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ” ಎಂದು ಡಿವೈಎಫ್ಐ ರಾಜ್ಯ ಸಮಿತಿಯು ಎಚ್ಚರಿಸುತ್ತದೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...