ಹಾವೇರಿ | ಸಂಚಾರಿ ಕ್ಯಾಂಟೀನ್‌ಗಳ ಹಾವಳಿ; ಟ್ರಾಫಿಕ್‌ ಸಮಸ್ಯೆಗೆ ಬೇಸತ್ತ ಜನ

Date:

ಹಾವೇರಿಯಲ್ಲಿ ಸಂಚಾರಿ ಕ್ಯಾಂಟೀನ್‌ಗಳು ಹೆಚ್ಚಾಗಿದ್ದು ಸಂಚಾರ ದಟ್ಟಣೆ ಮತ್ತು ಪಾರ್ಕಿಗ್‌ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

- Advertisement -

ಹಾವೇರಿಯ ಕೆಲವು ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಜನ ದಟ್ಟಣೆ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಬಹುತೇಕ ರಸ್ತೆಗಳಲ್ಲಿ ಬೀದಿ ಬದಿ ಕ್ಯಾಂಟೀನ್‌ಗಳು ನಾಯಿಕೊಡೆಗಳಂತೆ ಹುಟ್ಟಿಕೊಂಡಿದ್ದು, ಬೆಳಗ್ಗೆಯಿಂದ ರಾತ್ರಿಯವರೆಗೆ ಕಾರ್ಯನಿರ್ವಹಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಎನ್‌ಎಚ್‌ 48, ಮುನ್ಸಿಪಲ್ ಹೈಸ್ಕೂಲ್ ರಸ್ತೆ, ಜಿಲ್ಲಾಧಿಕಾರಿ ಕಛೇರಿ ರಸ್ತೆ, ಗುತ್ತಲ್ ರಸ್ತೆ ಹಾಗೂ ಇತರ ಒಳ ರಸ್ತೆಗಳನ್ನು ಈ ಸಂಚಾರಿ ಕ್ಯಾಂಟೀನ್ಗಳು ಆಕ್ರಮಿಸಿಕೊಂಡಿವೆ. ಪಾರ್ಕಿಗ್‌ಗೆ ಮೀಸಲಿರುವ ಜಾಗದಲ್ಲಿ ಈ  ಕ್ಯಾಂಟೀನ್‌ಗಳಿದ್ದು, ಟ್ರಾಫಿಕ್ ಸಮಸ್ಯೆಯಾಗುತ್ತಿದೆ ಎನ್ನುವುದು ಸ್ಥಳೀಯರ ದೂರು.

ಅಲ್ಲದೆ, ರಸ್ತೆ ಬದಿಯಲ್ಲಿ ತಿನಿಸುಗಳನ್ನು ಮಾರಿ, ಕಸವನ್ನು ರಸ್ತೆಯ ಮೇಲೆ ಎಸೆಯುತ್ತಾರೆ. ಅಡುಗೆ ಹೊಗೆ ಉಂಟಾಗುತ್ತದೆ, ಆಹಾರವನ್ನು ಬೇಯಿಸುವಾಗ ಮತ್ತು ಪಾತ್ರೆಗಳನ್ನು ತೊಳೆಯುವಾಗ ನಿರಂತರ ಶಬ್ದ ಉಂಟಾಗುವುದು ಇಲ್ಲಿನ ಅಂಗಡಿಗಳು ಮತ್ತು ನಿವಾಸಿಗಳಿಗೆ ಸಮಸ್ಯೆಯಾಗಿದೆ.

ಇಲ್ಲಿನ ಅಂಗಡಿಯವರು ಮತ್ತು ನಿವಾಸಿಗಳು ಎದುರಿಸುತ್ತಿರುವ ದೊಡ್ಡ ಸಮಸ್ಯೆ ಪಾರ್ಕಿಕ್‌ ಸಮಸ್ಯೆ. ಎನ್‌ಎಚ್‌-48 ಬಳಿ ಬಸ್ ಟರ್ಮಿನಲ್‌, ವಾಣಿಜ್ಯ ಪ್ರದೇಶ ಇರುವುದರಿಂದ, ದ್ವಿಚಕ್ರ ವಾಹನ ಮತ್ತು ನಾಲ್ಕು ಚಕ್ರವಾಹನಗಳನ್ನು ಮುಖ್ಯ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಾರೆ. ಇದರಿಂದ ಟ್ರಾಫಿಕ್ ಉಂಟಾಗುತ್ತಿದೆ.

ಇನ್ನು, ಮುನ್ಸಿಪಲ್ ಹೈಸ್ಕೂಲ್ ರಸ್ತೆಯಲ್ಲಿ ಮಾಂಸಹಾರ ತಿಂಡಿ ತಿನಿಸುಗಳನ್ನು ಮಾರುವವರು ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ಉಳಿದ ಮಾಂಸಾಹಾರ ಮತ್ತು ತ್ಯಾಜ್ಯವನ್ನು ಸಾಮಾನ್ಯವಾಗಿ ರಸ್ತೆಗಳಲ್ಲಿ ಎಸೆಯುತ್ತಾರೆ. ಈ ಮಾಂಸಕ್ಕಾಗಿ ಬೀದಿ ನಾಯಿಗಳು ಜಗಳವಾಡುತ್ತವೆ. ಇದು ಇಲ್ಲಿ ಓಡಾಡುವ ಜನರಿಗೆ ಮತ್ತು ಮಕ್ಕಳಿಗೆ ಅಪಾಯ ತರಬಹುದು ಎನ್ನುತ್ತಾರೆ ಸ್ಥಳೀಯರು.

ಒಟ್ಟಿನಲ್ಲಿ ಜನರಿಗೆ ಅನುಕೂಲವಾಗಲಿ ಎಂದು ತಲೆ ಎತ್ತಿರುವ ಈ ಸಂಚಾರಿ ಕ್ಯಾಂಟೀನ್‌ಗಳಿಂದ ಸ್ಥಳೀಯ ಅಂಗಡಿ ಮಾಲೀಕರು ಮತ್ತು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದು ಜಿಲ್ಲಾಡಳಿತ ಆದಷ್ಟುಬೇಗ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...