ಹಾವೇರಿ | ಒಳ ಮೀಸಲಾತಿ ಇಲ್ಲದೆ ಸರ್ಕಾರಿ ಉದ್ಯೋಗ ನೇಮಕ ಆದೇಶ ವಿರೋಧಿಸಿ ಮನವಿ

Date:

“ಒಳ ಮೀಸಲಾತಿ ಇಲ್ಲದೆ ಸರ್ಕಾರಿ ಉದ್ಯೋಗ ನೇಮಕ ಮಾಡಲು ಆದೇಶ ಹೊರಡಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಅವರ ಮೂಲಕ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಮನವಿ ಸಲ್ಲಿಸಿದ ನಂತರ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯ ಮುಖಂಡರು ಉಡಚಪ್ಪ ಮಳಗಿ ಮಾತನಾಡಿ, “ರಾಜ್ಯಾದ್ಯಂತ 35 ವರ್ಷಗಳಿಂದ ನಿರಂತರ ಹೋರಾಟ ನಡೆಸಿದ್ದೇವೆ. ಸುಪ್ರೀಂ ಕೋರ್ಟ್ ಪರಿಶಿಷ್ಟ ಮೀಸಲಾತಿ ವರ್ಗೀಕರಿಸಲು ರಾಜ್ಯಕ್ಕೆ ಅವಕಾಶ ನೀಡಿತು. ರಾಜ್ಯ ಸರ್ಕಾರ ಗೌರವಾನ್ವಿತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ರಚಿಸಿ ವರದಿ ಪಡೆದು ಸಚಿವ ಸಂಪುಟದಲ್ಲಿ ಅನುಮೋಧಿಸಿತು. ಆ ನಂತರ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಮಸೂದೆ ಅಂಗೀಕರಿಸಿ ರಾಜ್ಯಪಾಲರ ಸಹಿ ನಂತರ ವಿಧೇಯಕವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ಕಾಂಗ್ರೆಸ್ ಸರ್ಕಾರ ಆರಂಭದಿಂದಲೂ ಒಳ ಮೀಸಲಾತಿ ವಿರೋಧಿಯಾಗಿದೆ. ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳಮೀಸಲಾತಿ ವಿರೋಧಿಗಳ ರಾಜಕೀಯ ಒತ್ತಡದ ಪ್ರಭಾವಕ್ಕೆ ಒಳಗಾಗಿದ್ದಾರೆ. ಒಳಮೀಸಲಾತಿ ಜಾರಿ ಮಾಡಲು ವಿಶೇಷ ಸಚಿವ ಸಂಪುಟದ ದೀರ್ಘ ಚರ್ಚೆಯ ಅಗತ್ಯವಿಲ್ಲ ಯಾವ ಕೋರ್ಟ್ ತಡೆಯಾಜ್ಞೆ ಹಾಗೂ ತಾಂತ್ರಿಕ ಆಡಚಣೆಗಳಿಲ್ಲ. ಅಡಚಣೆ ಇರುವುದು ಸರ್ಕಾರದಲ್ಲಿ ಆದ್ದರಿಂದ ಮುಖ್ಯಮಂತ್ರಿಗಳು ಸಮರ್ಥ ಹಾಗೂ ನಿಷ್ಟುರ ನಿರ್ಧಾರ ಮಾಡಬೇಕಿದೆ. ಹಲವಾರು ಹಕ್ಕೊತ್ತಾಯಗಳನ್ನು ಇದೇ ಅವಧಿಯಲ್ಲಿ ಒತ್ತಾಯಿಸಲಾಯಿತು” ಎಂದರು.

“ಒಳಮೀಸಲಾತಿ ಇಲ್ಲದೆ 56.432 ಉದ್ಯೋಗ ನೇಮಕಾತಿಗೆ ಹೊರಡಿಸಿರುವ ದಿನಾಂಕ 27-02-2026ರ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು ಹಾಗೂ ಒಳ ಮೀಸಲಾತಿ ಅಳವಡಿಸಿ, ಶೇ.15 ರಷ್ಟು ಮೀಸಲಾತಿಯಲ್ಲಿ ಉದ್ಯೋಗ ನೇಮಕಾತಿ ಮಾಡಲಿ,ವಿಶ್ವವಿದ್ಯಾಲಯಗಳನ್ನು ಒಂದು ಘಟಕವಾಗಿಸಿ ಉದ್ಯೋಗ ನೇಮಕಾತಿ ಮಾಡುವ ಪ್ರಯತ್ನವನ್ನು ಕೈಬಿಡಬೇಕು” ಎಂದು ಆಗ್ರಹಿಸಿದರು.

“ಅಲೆಮಾರಿ, ಅರೆ ಅಲೆಮಾರಿ ಸಮುದಾಯ ಸಮುದಾಯಗಳಿಗೆ ಶೇ 1 ರಷ್ಟು ಪ್ರತ್ಯೇಕ ಮೀಸಲಾತಿ ನೀಡಲಿ.ಪರಿಶಿಷ್ಟ ಜಾತಿಗೆ ಶೇ.17 ಮತ್ತು ಪರಿಶಿಷ್ಟ ವರ್ಗಕ್ಕೆ ಶೇ.7. ಒಟ್ಟು ಶೇ.56 ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಿ ಮೀಸಲಾತಿ ಹೆಚ್ಚಿಸಬೇಕು. ಉದ್ಯೋಗ ನೇಮಕಾತಿ,ನೇರ ನೇಮಕಾತಿ,ಬ್ಯಾಕ್‌ಲಾಗ್, ಬಡ್ತಿ, ಮುಂಬಡ್ತಿ, ಒಳಗುತ್ತಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಆರ್ಥಿಕ ಸೌಲಭ್ಯ ಎಲ್ಲಾ ಹಂತಗಳಲ್ಲಿಯೂ ಸಂಪೂರ್ಣ ಒಳಮೀಸಲಾತಿ ಕಲ್ಪಿಸಬೇಕು” ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

 ಈ ಸಂದರ್ಭದಲ್ಲಿ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷರು ಮಂಜಪ್ಪ ಮರೋಳ, ಜಗದೀಶ ಹರಿಜನ, ಶಿವಲಿಂಗಪ್ಪ ನಿಂಗಪ್ಪನವರ, ಜಿಲ್ಲಾ ಮುಖಂಡರು ಮಹೇಶಪ್ಪ ಶಾಕಾರ, ರಾಜಪ್ಪ ಸೋಮನಕಟ್ಟಿ, ವೆಂಕಟೇಶ ಹಾವನೂರ, ಪುನೀತ ಹಾವನೂರ, ಯಶವಂತ ಹಾವನೂರ, ನಿಂಗಪ್ಪ ಸೇರಿದಂತೆ ಪದಾಧಿಕಾರಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...