ಹಾವೇರಿ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ಶಿಷ್ಯವೇತನ ಕಡಿಮೆ ಮಾಡದಂತೆ ಒತ್ತಾಯ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಕಡಿಮೆ ಮಾಡದೇ ಇನ್ನೂ ಹೆಚ್ಚು ಶಿಷ್ಯವೇತನ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ನೀಡುವಂತೆ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದ್ದಾರು.

- Advertisement -

ದುಬಾರಿ ಕಷ್ಟಕರ ಬದುಕು ನಡೆಸುವ ಇಂದಿನ ಕಾಲದಲ್ಲಿ ಸರ್ಕಾರಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶಿಷ್ಯವೇತವನ್ನು ಹೆಚ್ಚಿಸಬೇಕಿರುವುದು ಅವಶ್ಯವಾಗಿದೆ ಹಾಗೂ ಆಯಾ ಶೈಕ್ಷಣಿಕ ವರ್ಷಗಳಲ್ಲಿ ಶಿಕ್ಷಣಕ್ಕೆ ಅನುಕೂಲವಾಗುವಂತೆ ಶಿಷ್ಯವೇತನ ನೀಡಬೇಕು. ರಾಜ್ಯ ಸರ್ಕಾರ ಕಾರ್ಮಿಕರ ಮಕ್ಕಳ ಶಿಷ್ಯವೇತನ ಕಡಿಮೆ ಮಾಡುವ ಹುನ್ನಾರ ಮಾಡುತ್ತಿರುವುದು ಕಂಡು ಬರುತ್ತಿದ್ದು, ಇದು ಸರಿಯಾದ ಕ್ರಮವಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯಾರ್ಥಿಗಳ ಶೈಕ್ಷಣಿಕ ವಿಷ್ಯವೇತನ ಹಾಗೂ ಇನ್ನಿತರ ಸೌಲಭ್ಯ ನೀಡುವುದನ್ನು ನಿಲ್ಲಿಸುವುದಾಗಲಿ ಹಾಗೂ ಕಡಿಮೆ ಮಾಡುವ ಯೋಚನೆ ಮಾಡಬಾರದು.

ಜಿಲ್ಲೆಯಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮೆಟ್ರಿಕ್ ನಂತರದ ಹಾಸ್ಟಲ್‌ಗಳನ್ನು ಹೆಚ್ಚಿಸಬೇಕು. ಜಿಲ್ಲೆಯ ಉಸ್ತುವಾರಿ ಸಚಿವರು, ಎಲ್ಲಾ ಶಾಸಕರು ಡಿಸೆಂಬರ್ ೦4ರಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿ, ಜಿಲ್ಲೆಯ ವಿದ್ಯಾರ್ಥಿಗಳ ಹಿತ ಕಾಯುವ ಕೆಲಸ ಮಾಡಬೇಕು. ಸರ್ಕಾರಗಳು ಮಕ್ಕಳಿಗೆ ಉತ್ತಮ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ಮಾಡುವುದು ಅಗತ್ಯವಾಗದೆ ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...