ಹಾವೇರಿ | ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಹೊಲಿಗೆ ಯಂತ್ರ ಅನುಕೂಲ: ಸಿಸ್ಟರ್ ಅನಿತಾ ಡಿಸೋಜಾ

Date:

“ರೋಶನಿ ಸೇವಾ ಸಂಸ್ಥೆಯ ವಿನೂತನ‌ ಕಾರ್ಯಕ್ರಮವಾಗಿದ್ದು, ಮನೆಯಲ್ಲಿ ಇರುವ  ವಿಧವಾ ಮಹಿಳೆಯರು, ಹದಿನೈದು ವರ್ಷದ ಒಳಗೆ ಇರುವ ಮಕ್ಕಳ ತಾಯಂದಿರು, ಅಂಗವಿಕಲ ಮಕ್ಕಳ ತಾಯಂದಿರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಆರ್ಥಿಕ ಸದೃಡ ಮಾಡಲು, ತಮಗೆ ಸಹಾಯ ಮಾಡುತ್ತಿದ್ದು, ಸ್ವ ಉದ್ಯೋಗದಿಂದ ಬದುಕು ಕಟ್ಟಿಕೊಳ್ಳಲು ಹೊಲಿಗೆ ತರಬೇತಿ ಅನುಕುಲವಾಗಿದೆ” ಎಂದು ಮಹಿಳೆಯರಿಗೆ ರೋಶನಿ ಸೇವಾ ಸಂಸ್ಥೆಯ ನಿರ್ಧೇಶಕರು ಸಿಸ್ಟರ್ ಅನಿತಾ ಡಿಸೋಜಾ ಹೇಳಿದರು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ರೋಶನಿ ಸೇವಾ ಸಂಸ್ಥೆ ಸಭಾಂಗಣದಲ್ಲಿ ಮಹಿಳೆಯರಿಗೆ ಹೊಲಿಗೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಈ ಹೊಲಿಗೆ ಯಂತ್ರ ತರಬೇತಿಗೆ ಇಪ್ಪತೈದು ಜನರನ್ನು ಆಯ್ಕೆ ಮಾಡಿಕೊಂಡು ಒಬ್ಬರಿಗೆ ಒಬ್ಬರು ದಾನಿಗಳನ್ನು ಹುಡುಕಿ, ಅವರಿಂದ ನಿಮಗೆ ಆರ್ಥಿಕ ನೆರವು ಆಯೋಜಿಸಲಾಗಿದೆ. ಆರ್ಥಿಕ ಸಹಾಯ ತೆಗೆದುಕೊಂಡ ಪ್ರತಿಯೊಬ್ಬ ಮಹಿಳೆಯು ಯಾವುದೇ ಕಾರಣಕ್ಕೂ ದುರಪಯೋಗ ಮಾಡಿಸಬಾರದು. ಹೊಲಿಗೆ ತರಬೇತಿ ಪಡೆದು, ಬಟ್ಟೆ ಹೊಲಿಯಲು ಕಲಿಯಬೇಕು. ಈ ಮೂಲಕ ನಿಜವು ಆರ್ಥಿಕ ಸಬಲರಾಗಬೇಕು. ಜೊತೆಗೆ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು. ನೀವು ಯಾರ ಹಂಗಿನಲ್ಲಿಯೂ ಇರಬಾರದು ಎಂಬುದು‌ ನಮ್ಮ ಆಶಯ” ಎಂದು ಹೇಳಿದರು.

ಪ್ರಗತಿಪರ ಚಿಂತಕರು ಅಶೋಕ ದಾಸರ ಮಾತನಾಡಿ, “ಸರಕಾರ ಮಾಡದ ಕೆಲಸವನ್ನು ರೋಷನಿ ಟ್ರಸ್ಟ ಮಾಡುತ್ತಿದೆ. ಈ ಸಂಸ್ಥೆಯ ಮೂಲಕ ಸಾಕಷ್ಟು ಕೆಲಸಗಳನ್ನು‌ ಮಾಡುತ್ತಿದ್ದಾರೆ. ಬಡವರ ಪರವಾಗಿ, ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗದವರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಅವರು ನೀಡುವ ಆರ್ಥಿಕ ಸಹಾಯವನ್ನು ಪಡೆದು, ಸ್ವ ಉದ್ಯೋಗ ಕಲಿತು, ಸ್ವಾವಲಂಬಿಗಳಾಗಿ ಬದುಕಬೇಕು” ಎಂದು‌ ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಆಶಾ ಕಠಾರಿ, ಪವಿತ್ರ ಕುಂದೂರು ಅವರು ಮಹಿಳೆಯರಿಗೆ ಹೊಲಿಗೆ ಯಂತ್ರದ ಮೂಲಕ ಸ್ವಾವಲಂಬಿಗಳಾಗಿ ಹೇಗೆ ಬದುಕು ಕಟ್ಟಿಕೊಳ್ಳಬಹುದು ಎಂಬುದರ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಜನ ವೇದಿಕೆ ಮುಖಂಡರು  ಬಸವರಾಜ ಕೊತಂಬ್ರಿ, ಶರಣಪ್ಪ ಎಚ್ ಸಂಗನಾಳ‌ ಹಾಗೂ ವೇದಿಕೆ ಮುಂಭಾಗದಲ್ಲಿ ಮಹಿಳೆಯರು‌ ಇದ್ದರು. ಕಲ್ಲಪ್ಪ ನಾಯ್ಕರ್ ನಿರೂಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...