ಹಾವೇರಿ | ಶಾಲಾ-ಕಾಲೇಜ್ ಡೊನೇಷನ್ ಹಾವಳಿ ವಿರೋಧಿಸಿ ಮೇ 7ಕ್ಕೆ ರಂದು ರಾಜ್ಯಾವ್ಯಾಪಿ ಹೋರಾಟಕ್ಕೆ ಎಸ್ಎಫ್ಐ ಕರೆ

Date:

“ರಾಜ್ಯದಲ್ಲಿ 2026-27ನೇ ಸಾಲಿನ ಖಾಸಗಿ ಶಾಲೆಗಳ ಪ್ರವೇಶವನ್ನು ಪ್ರಾರಂಭಿಸಿ ದಾಖಲಾತಿ ಪ್ರಾರಂಭ ಮಾಡಿವೆ. ಬಹುತೇಕ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಮನಬಂದಂತೆ ವಸೂಲಿ ಮಾಡಲು ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರೂ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ಆಯುಕ್ತರು, ಅಪರ ಆಯುಕ್ತರು, ವಿವಿಧ ಜಿಲ್ಲೆಯ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ಸರ್ಕಾರ ತಮಗೆ ಯಾವುದೇ ಸಂಬಂಧವಿಲ್ಲದಂತೆ ಕಣ್ಣು ಮುಚ್ಚಿ ಕುಳಿತಿದ್ದಾರೆ” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಹಾವೇರಿ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿದ ಅವರು, “2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು,  ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್‌ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವಂತಹ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು 2009ರ ಆರ್.ಟಿ.ಇ ಕಾಯ್ದೆಯನ್ನು  ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದಾರೆ. ಈ ಮೂಲಕ ಹಗಲು ದರೋಡೆ ಮಾಡಲು ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಾಗುತ್ತಿವೆ. ಡೊನೆಷನ್ ಹಾವಳಿ ವಿರೋಧಿಸಿ, ಡೊನೆಷನ್ ನಿಯಂತ್ರಣಕ್ಕೆ ‘ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ’ (ಡೊನೇಷನ್ ವಿರೋಧಿ ಸಮಿತಿ) ವನ್ನು ತಕ್ಷಣ ರಚಿಸಿ, ವಂತಿಗೆ ವಸೂಲಿಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ. ಕ್ರಮಕೈಗೊಳ್ಳುವಂತೆ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ  ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ) ಕರ್ನಾಟಕ ರಾಜ್ಯ ಸಮಿತಿಯು ಮೇ -7 ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...