ಹಾವೇರಿ | ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ವಿರೋಧಿಸಿ ಎಸ್ಎಫ್ಐ ಪ್ರತಿಭಟನೆ

Date:

ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಶನ್ ಹಾವಳಿ ವಿರೋಧಿಸಿ, ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರವನ್ನು ರಚಿಸುವಂತೆ, ಶಾಲಾ-ಕಾಲೇಜುಗಳಲ್ಲಿ ಡೊನೇಶನ್ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ಗುರುವಾರ ಹಾವೇರಿ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನೆಯಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್ ಮಾತನಾಡಿ, “ಸರಕಾರದ ನಿಯಮಗಳ ಪ್ರಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಅಭಿವೃದ್ಧಿ ಶುಲ್ಕವನ್ನು ಸಂಗ್ರಹಿಸಲು ಅವಕಾಶವಿದೆ. ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ. ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ, ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಾರಂಭಿಕ ತರಗತಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸಬಾರದು ಎಂದು ಶಿಕ್ಷಣ ಹಕ್ಕು ಕಾಯ್ದೆ 2009 ರ ಸೆಕ್ಷನ್ 13(2)(ಬಿ) ಹೇಳುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಈ ಕಾಯ್ದೆಯ ಪ್ರಕಾರ ಪ್ರವೇಶ ಪರೀಕ್ಷೆ ನಡೆಸುವ ಶಾಲೆಗಳಿಗೆ 25 ಸಾವಿರ ರೂ ದಂಡ ಹಾಕಬೇಕೆಂದು ಹೇಳಿದೆ. ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ 10×16 ಸೈಜಿನಲ್ಲಿ ಪ್ಲೆಕ್ಸ್ ಪ್ರಕಟಿಸಬೇಕೆಂದು ಹಾಗೂ ಇದೇ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದರೆ, ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡಿಲ್ಲ” ಎಂದು ಕಿಡಿಕಾರಿದರು.

“ಸರ್ಕಾರದ ಸುತ್ತೋಲೆಯಲ್ಲಿ ಡಿ.ಡಿ.ಪಿ.ಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇದನ್ನು ಪರೀಶಿಲಿಸಬೇಕೆಂದು ಹೇಳಿದ್ದರೂ ಇಲಾಖೆಯ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಣಿದು ಸರಿಯಾಗಿ ಪರೀಶೀಲನೆ ಮಾಡಿರುವುದಿಲ್ಲ. ಶಿಕ್ಷಣ ಹಕ್ಕು ಕಾಯ್ದೆ-1983 ಮತ್ತು 2009ರ ಆರ್.ಟಿ.ಇ ಕಾಯ್ದೆ ಜಾರಿಯಾದರೂ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಬಹುತೇಕ ಖಾಸಗಿ ಶಾಲೆಗಳಲ್ಲಿ ಲಕ್ಷಾಂತರ ರೂಪಾಯಿಗಳವರೆಗೂ ಹಣ ವಸೂಲಿ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ. ಆಕ್ರಮವಾಗಿ ಟ್ಯೂಷನ್, ಟ್ಯೂಟರಿಯಲ್ಸ್, ಆನದೀಕೃತವಾಗಿ CSC CBSC ಕೆಲವು ಪ್ರತಿಷ್ಟಿತ ಪಿ.ಯು.ಸಿ ಕಾಲೇಜುಗಳು JEE, NEET, CET ಹೆಸರಿನಲ್ಲಿ ಶಾಲಾ ಕಾಲೇಜುಗಳು ನಡೆಯುತ್ತಿವೆ” ಎಂದು ಆರೋಪಿಸಿದರು.

1003360888

ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ್ ನಗವತ್ ಮಾತನಾಡಿ, “2026-27ನೇ ಸಾಲಿನಲ್ಲಿ ರಾಜ್ಯಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಈಗಾಗಲೇ ಪ್ರವೇಶಾತಿ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಸಭೆ ಸೇರಿ, ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಕುರಿತು ಪಾಲಕರಿಗೆ ಮಾಹಿತಿ ನೀಡಬೇಕಾಗಿತ್ತು. ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇರುವಂತಹ ಸಮಿತಿಯು ಸಭೆ ಸೇರಿ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿಲ್ಲ. ಆದ ಕಾರಣ 1983ರ ಶಿಕ್ಷಣ ಕಾಯ್ದೆ ಮತ್ತು 2009ರ ಆರ್.ಟಿ.ಇ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡುವುದರ ಮೂಲಕ ಹಗಲು ದರೋಡೆ ಮಾಡಿರುತ್ತಾರೆ” ಎಮನದು ಆಕ್ರೋಶ ವ್ಯಕ್ತಪಡಡಿಸಿದರು.

“ಒಂದೆಡೆ ರಾಜ್ಯಾದ್ಯಂತ ಅಣಬೆಗಳಂತೆ ಖಾಸಗಿ ಶಾಲೆಗಳು ತಲೆ ಎತ್ತುತ್ತಿವೆ. ಮತ್ತೊಂದೆಡೆ ರಾಜ್ಯದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಈಗಾಗಲೇ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೊನೇಷನ್ ಹಣವನ್ನು ಮನಬಂದತೆ ವಸೂಲಿ ಮಾಡಲು ಮುಂದಾಗಿದ್ದಾರೆ. ಬಡ ಹಿಂದುಳಿದ, ದಲಿತ ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಡೊನೇಷನ್ ಪಿಡುಗಿನಿಂದ ಶಾಲೆಗಳಲ್ಲಿ ಓದುವುದು ಅಸಾಧ್ಯವಾಗುತ್ತಿದೆ” ಅಸಮಾಧಾನ ವ್ಯಕ್ತಪಡಿಸಿದರು.

ಕಾಲೇಜ್ ಘಟಕದ ಅಧ್ಯಕ್ಷ ಚೈತ್ರಾ ಕೊರವರ ಮಾತನಾಡಿ, “ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸುವುದರ ಜೊತೆಗೆ ನೋಟ್‌ಬುಕ್, ಶಾಲಾ ಬ್ಯಾಗ್, ಬೂಟು, ಬಟ್ಟೆ, ಜಾಮಿಟ್ರಿ ಬಾಕ್ಸ್ ಕಡ್ಡಾಯವಾಗಿ ಆಯಾ ಶಾಲೆಗಳಲ್ಲಿ ತೆಗೆದುಕೊಳ್ಳಬೇಕೆಂದು ಪಾಲಕರಿಗೆ ಹೇಳಿ ಹೆಚ್ಚಿನ ದರದಲ್ಲಿ ಕಟ್ಟಿಸಿಕೊಳ್ಳುತ್ತಿದ್ದಾರೆ. ಶಾಲೆಗಳನ್ನು ಅಂಗಡಿಯಾಗಿ ಮಾರ್ಪಟ್ಟು ಮಾಡಿದ ಶಾಲೆಗಳ ವಿರುದ್ಧ ಮಾನ್ಯತೆಯನ್ನು ರದ್ದು ಮಾಡಬೇಕು. ಬಹುತೇಕ ಶಾಲೆಗಳು ಇಲಾಖೆಯ ಆದೇಶವನ್ನು ಉಲ್ಲಂಘಿಸಿವೆ. ಅಂತಹ ಶಾಲೆಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅನಧಿಕೃತ ಟ್ಯೂಷನ್ ಸೆಂಟರ್‌ಗಳನ್ನು ಮುಚ್ಚಬೇಕು” ಎಂದು ಆಗ್ರಹಿಸಿದರು.

“ಈ ಕೂಡಲೇ ಜಿಲ್ಲಾ ಶಿಕ್ಷಣ ಶುಲ್ಕ ನಿಯಂತ್ರಣ ಪ್ರಾಧಿಕಾರ ಸಭೆ ಸೇರಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ) ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸುತ್ತದೆ” ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರು ಕೃಷ್ಣ ನಾಯ್ಕ, ಮಾಲತೇಶ್ ಇಚ್ಚಂಗಿ, ಪುನೀತ್ ಕುಮಾರ್, ಬೀರಪ್ಪ, ಮನು ಎನ್, ನಾಗರಾಜ್ ಎಂ ವೈ , ನವೀನ್ ಬ ಕೆ, ಕುಮಾರ ಸಿ, ಮಾಲತೇಶ್ ಸಿ, ಆಕಾಶ್ ಕೆ, ಪರಶುರಾಮ ಮಾದರ, ಪ್ರದೀಪ ಲಮಾಣಿ, ಮಲ್ಲಿಕಾರ್ಜುನ ಹಡಪದ, ಉಮೇಶ್ ಡಿ ಎಸ್, ಸಿದ್ದಲಿಂಗೇಶ, ಯಶವಂತ, ಮಾಲತೇಶ್ ಕೆ ಟಿ, ಮಜಮಿಲ್ ಅಕ್ಕುವಳ್ಳಿ, ನಂದೀಶ್ ಎಲ್, ಕಿರಣ್ ಕುಮಾರ್, ರಾಜು, ಮಹಾಂತೇಶ್, ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...