“ನೀಟ್ ಪರೀಕ್ಷೆ ಹಗರಣ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಹಾಗೂ ಇತರೆ ವಿದ್ಯಾರ್ಥಿ ನಾಯಕರನ್ನು ಬಲವಂತವಾಗಿ ತೆರವುಗೊಳಿಸಿ ಹೋರಾಟವನ್ನು ಹತ್ತಿಕ್ಕುವ ಬದಲು, ಪ್ರತಿಭಟನಾಕಾರರೊಂದಿಗೆ ತಕ್ಷಣ ಮಾತುಕತೆ ನಡೆಸಿ ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕೇಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
“ನೀಟ್ ಪರೀಕ್ಷೆ ಹಗರಣ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಹಾಗೂ ಇತರೆ ವಿದ್ಯಾರ್ಥಿ ನಾಯಕರನ್ನು ಬಲವಂತವಾಗಿ ತೆರವುಗೊಳಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಬ್ಯಾಡಗಿ ತಾಲ್ಲೂಕು ಸಮಿತಿ ತೀವ್ರವಾಗಿ ಖಂಡಿಸುತ್ತದೆ.
ವಿದ್ಯಾರ್ಥಿಗಳು ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶಾಂತಿಯುತವಾಗಿ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆಯನ್ನು ಬಲಪ್ರಯೋಗದಿಂದ ಹತ್ತಿಕ್ಕುವ ಕೇಂದ್ರ ಸರ್ಕಾರದ ನಡೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ವೈಫಲ್ಯಗಳಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕುವ ಬದಲು, ಪ್ರತಿಭಟನಾಕಾರರೊಂದಿಗೆ ತಕ್ಷಣ ಮಾತುಕತೆ ನಡೆಸಿ ಅವರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು.
ವಿದ್ಯಾರ್ಥಿಗಳ ಧ್ವನಿಯನ್ನು ದಮನಿಸುವ ಯಾವುದೇ ಪ್ರಯತ್ನವನ್ನು ಎಸ್ಎಫ್ಐ ತೀವ್ರವಾಗಿ ವಿರೋಧಿಸುತ್ತದೆ. ಪ್ರಜಾಪ್ರಭುತ್ವದ ಹಕ್ಕುಗಳನ್ನು ಗೌರವಿಸಿ, ಬಂಧನಕ್ಕೊಳಗಾದ ಅಥವಾ ಬಲವಂತವಾಗಿ ತೆರವುಗೊಳಿಸಲಾದ ಪ್ರತಿಭಟನಾಕಾರರ ವಿರುದ್ಧದ ಕ್ರಮಗಳನ್ನು ಹಿಂಪಡೆಯಬೇಕು ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಬೇಕು ಎಂದು ಎಸ್ಎಫ್ಐ ಆಗ್ರಹಿಸುತ್ತದೆ.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ್ ಕುಮಾರ್ ನಗವತ್, ತಾಲ್ಲೂಕ ಕಾರ್ಯದರ್ಶಿ ಪಂಚಾಕ್ಷರಿ ಕೋಟಿಹಾಳ, ಉಪಾಧ್ಯಕ್ಷರಾದ ವೀರೇಶ್, ಸಹಕಾರ್ಯದರ್ಶಿರಾದ ಸಂದೀಪ ಎನ್, ಕಾರ್ತಿಕ ಎಸ್, ಸದಸ್ಯರಾದ ಕುಮಾರ್, ಕಾವೇರಿ, ರೇಣುಕಾ ಕೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.





