ಹಾವೇರಿ | ಅರ್ಜಿಗಳ ಶೀಘ್ರ ವಿಲೇವಾರಿ-ರಾಜ್ಯಕ್ಕೆ ಜಿಲ್ಲೆ 3ನೇ ಸ್ಥಾನ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಅವರಿಗೆ ಅಭಿನಂದನಾ ಪತ್ರ

Date:

ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರ ಅರ್ಜಿಗಳ ಶೀಘ್ರ ವಿಲೇವಾರಿ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡಲು ಹಾವೇರಿ ಜಿಲ್ಲೆಯು ರಾಜ್ಯಕ್ಕೆ ಮೂರನೇ  ಸ್ಥಾನ ಪಡೆದಿದ್ದು, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಅವರಿಗೆ ಕಂದಾಯ ಇಲಾಖೆ ಆಯುಕ್ತರಾದ ಸಿ.ಎನ್. ಮೀನಾ ನಾಗರಾಜ್ ಅವರು ಅಭಿನಂದನಾ ಪತ್ರ ತಿಳಿಸಿದ್ದಾರೆ.

- Advertisement -

ನಾಡಚೇರಿಗಳಲ್ಲಿ ಏಪ್ರಿಲ್-2026ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ 25964 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ. 99.97 ರಷ್ಟು ವಿಲೇವಾರಿ ಮಾಡಿ 6.84 ಸಿನ್ಮಾ ಮೌಲ್ಯವನ್ನು ಪಡೆದಿರುತ್ತೀರಿ. 7.78 ವಿಲೇವಾರಿ ಸೂಚ್ಯಂಕದ (Disposal Index) ಪ್ರಕಾರ ಹಾವೇರಿ ಜಿಲ್ಲೆಯಲ್ಲಿ 8.78 ಪಟ್ಟು ನಿಗಧಿತ ಅವಧಿಗಿಂತ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ. ಏಪ್ರಿಲ್-2026ರ ಮಾಹೆಯಲ್ಲಿ ಹಾವೇರಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಅವರಿಗೆ ಕಂದಾಯ ಇಲಾಖೆ ಆಯುಕ್ತರಾದ ಸಿ.ಎನ್. ಮೀನಾ ನಾಗರಾಜ್ ಅವರು ಅಭಿನಂದನಾ ಪತ್ರ ಕಳುಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ನಿಮ್ಮ ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ನಿಮ್ಮ ಹಾಗೂ ನಿಮ್ಮ ನಾಡಕಛೇರಿ/ಅಟಲ್‌ಜೀ ಜನಸ್ನೇಹಿ ಕೇಂದ್ರದ ಸಿಬ್ಬಂದಿಗಳ ಸಹಕಾರ, ಕಾರ್ಯತತ್ಪರತೆ ಕಾರಣವಾಗಿರುತ್ತದೆ. ಆದ್ದರಿಂದ, ಅಟಲ್‌ಜೀ ಜನಸ್ನೇಹಿ ನಿರ್ದೇಶನಾಲಯದ ಪರವಾಗಿ ನಿಮ್ಮ ತಂಡಕ್ಕೆ ನನ್ನ ಅಭಿನಂದನೆಯನ್ನು ವ್ಯಕ್ತಪಡಿಸಲು ಇಚ್ಛಿಸುತ್ತೇನೆ. ಇನ್ನು ಮುಂದಿನ ದಿನಗಳಲ್ಲಿಯೂ ಸಹಾ ನಿಮ್ಮಿಂದ ಇದೇ ರೀತಿಯ ಸಹಕಾರ ಹಾಗೂ ಕಾರ್ಯಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಅಭಿನಂದನಾ ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...