ಹಾವೇರಿ | ಶಿಕ್ಷಣದ ಹಕ್ಕು, ಘನತೆಯ ಭವಿಷ್ಯಕ್ಕಾಗಿ ವಿದ್ಯಾರ್ಥಿನಿಯರ ರಾಜ್ಯ ಸಮಾವೇಶ

Date:

ಶಿಕ್ಷಣದ ಹಕ್ಕಿಗಾಗಿ ಮತ್ತು ಘನತೆಯ ಭವಿಷ್ಯಕ್ಕಾಗಿ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ರಾಜ್ಯ ಸಮಿತಿ ಏರ್ಪಡಿಸಿದ್ದ ರಾಜ್ಯ ವಿದ್ಯಾರ್ಥಿನಿಯರ ಸಮಾವೇಶವು ಕಲಬುರಗಿಯಲ್ಲಿ ನಡೆಯುತ್ತಿದ್ದು, ಹಾವೇರಿ ಜಿಲ್ಲೆಯಿಂದ ಎಸ್‌ಎಫ್‌ಐ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

“ಗ್ರಾಮೀಣ ಪ್ರದೇಶದಿಂದ ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿನಿಯರು ಅನೇಕ ಸಮಸ್ಯೆ ಮತ್ತು ಕೊರತೆಗಳನ್ನು ಅನುಭವಿಸುತ್ತಿದ್ದಾರೆ. ಶಿಕ್ಷಣ ಕೇಂದ್ರಗಳಿರುವ ಕಡೆಗೆ ಬಸ್‌ಗಳು ಸಮಯಕ್ಕೆ ಸರಿಯಾಗಿ ಇರುವುದಿಲ್ಲ. ಓದುವ ಶಾಲಾ ಕಾಲೇಜುಗಳಲ್ಲಿ ಶೌಚಾಲಯ, ನೀರು, ಆಟದ ಮೈದಾನ ಇರುವುದಿಲ್ಲ. ಹಸಿವೆಯಲ್ಲಿ ಬಂದು ಅವ್ಯವಸ್ಥೆಯಲ್ಲಿ ಓದಿ ಮನೆಗೆ ಹೋಗಿ ತಲುಪುವುದರೊಳಗಾಗಿ ಎಲ್ಲದರಲ್ಲಿ ನಿರಾಸಕ್ತಿ ಉಂಟಾಗಿ ಶರೀರದ ಮೇಲೂ ಮನಸಿನ ಮೇಲೂ ದುಷ್ಪರಿಣಾಮವಾಗುತ್ತಿದೆ” ಎಂದು ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಎಸ್ ತಿಳಿಸಿದರು

“ತೀವ್ರ ಬಡತನದ ಕಾರಣದಿಂದ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳು ಓದುವ ವಯಸ್ಸಿನಲ್ಲಿ ಕಾರ್ಮಿಕರಾಗಿ ದುಡಿಯಬೇಕಾಗಿದೆ. ಉದ್ಯೋಗ ಖಾತ್ರಿಯಲ್ಲಿ ದುಡಿಯುವ ವಿದ್ಯಾರ್ಥಿನಿಯರ ಸಂಖ್ಯೆಯು ಹೆಚ್ಚುತ್ತಿದೆ. ದಲಿತ, ಹಿಂದುಳಿದ ವಿದ್ಯಾರ್ಥಿನಿಯರಂತೂ ಒಂದಲ್ಲ ಒಂದು ದುಡಿಮೆಗೆ ಒಳಗಾಗುತ್ತಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರತಿನಿಧಿಗಳ ಅಧಿವೇಶನವು ಎರಡು ದಿನಗಳ ಕಾಲ ಕಲಬುರಗಿಯ ಕನ್ನಡ ಭವನದಲ್ಲಿ ನಡೆಯುತ್ತಿದೆ. ಈ ಸಮಾವೇಶದಲ್ಲಿ ಈ ಮೇಲಿನ ವಿಚಾರಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸಾಕಷ್ಟು ಪಾಠಗಳು, ಚರ್ಚೆಗಳು ನಡೆಯಲಿವೆ. ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 200ಕ್ಕೂ ಹೆಚ್ಚು ಆಯ್ದ ವಿದ್ಯಾರ್ಥಿನಿಯರ ಪ್ರತಿನಿಧಿಗಳು, ನಾಡಿನ ಖ್ಯಾತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಹಾಗೂ ಎಸ್ಎಫ್ಐ ಕೇಂದ್ರ ಸಮಿತಿಯ ಜಂಟಿ ಕಾರ್ಯದರ್ಶಿ ದೀಪ್ಸಿತಾ ಧರ್ ಮುಖ್ಯ ಅತಿಥಿಯಾಗಿ ಬರಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಡಿ.23, 24ರಂದು ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನ

ಸಮಾವೇಶಕ್ಕೆ ಜಿಲ್ಲೆಯಿಂದ ಮಲ್ಲಿಗೆ ಜೆಟ್ಟೆಣ್ಣನವರ, ಲಕ್ಷ್ಮೀ ಕೊಡಿಕೊಪ್ಪ, ಪೂರ್ಣಿಮಾ ಡವಗಿ, ಸಂಗೀತಾ ಆರ್ , ಜಯಮ್ಮ ಮದ್ದಿ, ಕಾವ್ಯ , ಲಕ್ಷ್ಮೀ .ಡಿ, ಸಹಾನ, ವನಿತಾ ಮದ್ದೆರ್, ಎಸ್ಎಫ್ಐ ಶಿಗ್ಗಾಂವಿ ತಾಲೂಕು ಕಾರ್ಯದರ್ಶಿ ಅರ್ಜುನ ರಜಪೂತ ವಿದ್ಯಾರ್ಥಿ ಪ್ರತಿನಿಧಿ ಅಧಿವೇಶನದಲ್ಲಿ ಭಾಗವಹಿಸಿಲಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಎಸ್ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಚಿಕ್ಕಮಗಳೂರು | ಹಿಂದು ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ

ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...