ಹಾವೇರಿ | ರಾಜ್ಯ ಸರಕಾರ ಬೆಲೆ ಏರಿಕೆಗೆ ತಕ್ಕಂತೆ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸಬೇಕು: ಬಸವರಾಜ ಪೂಜಾರ ಆಗ್ರಹ

Date:

“ರಾಜ್ಯ ಸರ್ಕಾರ ಕನಿಷ್ಠ ವೇತನ ಪರಿಷ್ಕರಣೆ ಮಾಡಿ, ಇಂದಿನ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚಕ್ಕೆ ಅನುಗುಣವಾಗಿ ಎಲ್ಲಾ ಕಾರ್ಮಿಕರಿಗೆ ಸರಾಸರಿ ರೂ. 36,000 ಕನಿಷ್ಠ ವೇತನ ನಿಗದಿಪಡಿಸಬೇಕು” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಒತ್ತಾಯಿಸಿದರು.

- Advertisement -

ಹಾವೇರಿ ಪಟ್ಟಣದ ಹೊರವಲಯದಲ್ಲಿರುವ ಜಿಲ್ಲಾಡಳಿತ ಭವನದ ಎದುರು ಶನಿವಾರ ಸೆಂಟರ್ ಆಪ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಜಿಲ್ಲಾ ಸಮಿತಿ ವತಿಯಿಂದ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಪ್ರತಿಭಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

“ಕಾರ್ಮಿಕರ ನಿರಂತರ ಹೋರಾಟದ ಫಲವಾಗಿ ಪ್ರತಿ ಉದ್ದಿಮೆಗೆ ಪ್ರತ್ಯೇಕವಾಗಿ ಕನಿಷ್ಠ ವೇತನ ಅಧಿಸೂಚನೆ ಹೊರಡಿಸದೇ ಬಹುತೇಕ ಉದ್ದಿಮೆಗಳಿಗೆ ಏಕರೂಪವಾಗಿ ಹಾಗೂ ಹಿಂದೆ ಇದ್ದ ನಾಲ್ಕು ವಲಯಕ್ಕೆ ಬದಲಾಗಿ ಮೂರು ವಲಯಗಳಾಗಿ ಮಾಡಿ ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಮೇ 22ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಂತಿಮ ಕನಿಷ್ಟ ವೇತನ ಅಧಿಸೂಚನೆ ಸ್ವಾಗತರ್ಹವಾಗಿದ್ದು, ಬೆಲೆ ಏರಿಕೆ ಸೇರಿದಂತೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಲಕ್ಷಾಂತರ ಕಾರ್ಮಿಕರಿಗೆ ಸಹಾಯವಾಗಲಿದೆ” ಎಂದರು.

“ಆದರೇ ಸದರಿ ಕನಿಷ್ಟ ವೇತನ ಅಧಿಸೂಚನೆಯಿಂದ ಹೊರಗಿಟ್ಟಿರುವ ಬಹುತೇಕ ಲಕ್ಷಾಂತರ ಬಡ ಮಹಿಳೆಯರಿರುವ ಗಾರ್ಮೆಂಟ್ಸ್, ಪ್ಲಾಂಟೇಷನ್, ಬೀಡಿ, ಕೈಮಗ್ಗ ಮುಂತಾದ 19 ಉದ್ದಿಮೆಗಳಲ್ಲಿಯ ಕಾರ್ಮಿಕರಿಗೆ ಅನ್ಯಾಯವಾಗಲಿದೆ. ಈ ಉದ್ದಿಮೆಗಳಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿ ಮಾಡಿ ಅಧಿಸೂಚನೆ ಹೊರಡಿಸಬೇಕು” ಎಂದು ಒತ್ತಾಯಿಸಿದರು.

“ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರ, ಲೋಡಿಂಗ್ ಅನ್ ಲೋಡಿಂಗ್ (ಹಮಾಲಿ) ಸೇರಿದಂತೆ ತುಂಡು ಕೆಲಸ (ಪೀಸ್‌ ವರ್ಕ್) ಸ್ವರೂಪದ ಶ್ರಮಿಕ ಪ್ರಾಧಾನ್ಯ ಉದ್ದಿಮೆಗಳಿಗೆ ಪರಿಷ್ಕರಣೆ ಮಾಡಲಾಗುವುದೆಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಅದಕ್ಕೆ ಯಾವುದೇ ಕಾಲಮಿತಿ ನಿಗದಿ ಮಾಡಿಲ್ಲ. ಕೂಡಲೇ ಈ ಕಾರ್ಮಿಕರಿಗೂ ಪರಿಷ್ಕೃತ ಕನಿಷ್ಟ ವೇತನ ನಿಗದಿಮಾಡಬೇಕು ಹಾಗೂ ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸ್ಕೀಂ ನೌಕರರನ್ನು ಕನಿಷ್ಟ ವೇತನ ವ್ಯಾಪ್ತಿಗೆ ತರಬೇಕು” ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಸಂಚಾಲಕರು ಅಂದಾನೆಪ್ಪ ಕೆ. ಹೆಬಸೂರು ಮಾತನಾಡಿ, “ರಾಜ್ಯ ಸರ್ಕಾರ ಕನಿಷ್ಠ ವೇತನದ ಕರಡು ಅಧಿಸೂಚನೆ ಹೊರಡಿಸಿದ ದಿನಾಂಕವಾದ 2025 ಏಪ್ರಿಲ್ 11 ರಿಂದಲೇ ಪೂರ್ವಾನ್ವಯಿಸಿ ಕನಿಷ್ಠ ವೇತನ ಜಾರಿಗೆ ತರಬೇಕು. ಒಂದು ವರ್ಷದ ಅರಿಯರ್ಸ್ ಕಾರ್ಮಿಕರಿಗೆ ನೀಡಬೇಕು. ಮಾಲೀಕರ ಯಾವುದೇ ಒತ್ತಡಕ್ಕೆ ಮಣಿಯದೆ ಈ ಪರಿಷ್ಕೃತ ಕನಿಷ್ಠ ವೇತನದ ಆದೇಶವನ್ನು ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು” ಎಂದು ಒತ್ತಾಯಿಸಿದರು.

“ಕಾರ್ಮಿಕ ಸಂಹಿತೆಗಳಿಗೆ ರಾಜ್ಯ ಸರಕಾರ ಕಾರ್ಮಿಕರ ಪರ ತಿದ್ದುಪಡಿಗಳನ್ನು ತಂದು ನಂತರ ನಿಯಮಗಳನ್ನು ರೂಪಿಸಬೇಕು. ಖಾಯಂಯೇತರ ಕಾರ್ಮಿಕರ ಖಾಯಂ ಮಾಡಿಕೊಳ್ಳಲು ಅಗತ್ಯ ಕಾನೂನು ರೂಪಿಸಬೇಕು” ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯತಿ ನೌಕರ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಕೋಟಿ ಮಾತನಾಡಿ, “ಹಲವಾರು ಬಾರಿ ಪ್ರತಿಭಟನೆ ನಡೆಸಿದರೂ ಗ್ರಾಮ ಪಂಚಾಯತಿ ನೌಕರರ ಹಲವಾರು ಸಮಸ್ಯೆಗಳು ಇಂದಿಗೂ ಪರಿಹಾರ ಕಂಡಿಲ್ಲ. ಕೂಡಲೇ ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸಲು ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಾಕ್ಕೆ ಆಗಮಿಸಿದ  ತಹಸೀಲ್ದಾರರು ಅಮೃತಗೌಡ ಪಾಟೀಲ, ಮಾನ್ಯ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರು ರೇಖಾ ಡೊಳ್ಳಿನ ಹಾಗೂ ಮಾನ್ಯ ಜಿ.ಪಂ ಅಧಿಕಾರಿ ಐ.ಎಂ ಮುಲ್ಲಾ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯ್ತು‌. 

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯತಿ ನೌಕರ ಸಂಘದ ಜಿಲ್ಲಾ ಮುಖಂಡರಾದ ಫಕ್ಕಿರೇಶ ಹಕ್ಕಿಮರೆಣ್ಣನವರ, ಮಂಜು ರಟ್ಟಿಹಳ್ಳಿ, ಆಂಜನೇಯ ನಾಗಣ್ಣನವರ, ಕಟ್ಟಡ ಕಾರ್ಮಿಕ ಸಂಘಟನೆ ಮುಖಂಡರಾದ ಚನವೀರಯ್ಯ ಹಿರೇಮಠ, ರಿಯಾಜ್ ಅಹಮದ್ ಮರಫಾಜಿ, ರಿಯಾಜ್ ಕೋಟೇನವರ, ಸಾಬೀರ ಕಡಕೋಳ, ಸ್ವಚ್ಛವಾಹಿನಿ ಕಾರ್ಮಿಕ ಮುಖಂಡರಾದ ಗಾಯತ್ರಿ ಬಲ್ಮುರಿ, ಮಮತಾ ಆನವಟ್ಟಿ, ಲತಾ ಯಲಗಚ್ಚ, ದೀಪಾ ಶಿರಗಂಬಿ, ಶೋಭಾ ಬೂದಗಟ್ಟಿ ಸೇರಿದಂತೆ ಗ್ರಾಮ ಪಂಚಾಯತಿ ನೌಕರರು, ಸ್ವಚ್ಛವಾಹಿನಿ ಸಿಬ್ಬಂದಿ ಹಾಗೂ ಕಟ್ಟಡ ಕಾರ್ಮಿಕರು ಪಾಲ್ಗೊಂಡಿದ್ದರು‌.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...

ರಾಯಚೂರು | ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವಕ್ಕೆ ಎನ್‌.ಎಸ್.ಬೋಸರಾಜು ಶುಭ ಹಾರೈಕೆ

ನಾಳೆ ನ. 29ರಂದು ನಡೆಯಲಿರುವ ರಾಯಚೂರು ರಿಪೋರ್ಟಸ ಗಿಲ್ಡ್‌ನ 25ನೇ ವರ್ಷದ...