ಹಾವೇರಿ | ‘ಭಾರತೀಯ ಆರ್ಥಿಕತೆಯಲ್ಲಿ ಕೃತಕ ಬುದ್ದಿಮತ್ತೆಯ ಪಾತ್ರ’ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ

Date:

ಹಾವೇರಿ ಪಟ್ಟಣದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ. ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಶನಿವಾರದಂದು “ಭಾರತೀಯ ಆರ್ಥಿಕತೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ” ಎಂಬ ವಿಷಯದ ಮೇಲೆ ಒಂದು ದಿನದ ಬಹುಶಿಸ್ತೀಯ ರಾಜ್ಯಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿತ್ತು.

- Advertisement -

ಮುಖ್ಯ ಭಾಷಣಕಾರರು ಮೈಸೂರು ವಿವಿ ಅರ್ಥಶಾಸ್ತ್ರ ಪ್ರೊ. ಮಹೇಶ್ ಎಂ. ಪ್ರಾಧ್ಯಾಪಕರು ಅವರು ಮಾತನಾಡಿ, “ಕೃತಕ ಬುದ್ಧಿಮತ್ತೆಯು ಉತ್ಪಾದಕತೆ, ಡಿಜಿಟಲ್ ಪರಿವರ್ತನೆ, ಹಣಕಾಸು ಒಳಗೊಳ್ಳುವಿಕೆ ಹಾಗೂ ಭವಿಷ್ಯದ ಉದ್ಯೋಗಾವಕಾಶಗಳ ಮೇಲೆ ಬೀರುವ ಪರಿಣಾಮಗಳ” ಕುರಿತು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಹಾವೇರಿ ವಿವಿ ಕುಲಸಚಿವರು ಡಾ. ಎಸ್.ಟಿ.ಬಾಗಲಕೋಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ಆರ್ಥಿಕ ಅಭಿವೃದ್ಧಿ, ಆಡಳಿತ, ಉದ್ಯೋಗ ಮತ್ತು ನವೋದ್ಯಮ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆಯ ಮಹತ್ವ ಬಹಳಷ್ಟು ಇದೆ” ಎಂದು ವಿವರಿಸಿದರು.

ಕೆ.ಎಲ್.ಇ. ಸಂಸ್ಥೆಯ, ಬೆಳಗಾವಿಯ ನಿರ್ದೇಶಕರು ಎಂ. ಸಿ.ಕೊಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ “ಒನ್ ಡೇ ಮಲ್ಟಿಡಿಸಿಪ್ಲಿನರಿ ಸ್ಟೇಟ್ ಲೆವೆಲ್ ಸೆಮಿನಾರ್‌ನ ಪ್ರೊಸೀಡಿಂಗ್ಸ್ ನ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, “ಶಿಕ್ಷಣದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಅಗತ್ಯತೆಯನ್ನು ಒತ್ತಿ ಹೇಳಿದರು. ಇಂತಹ ಸಮಕಾಲೀನ ವಿಷಯದ ಕುರಿತು ವಿಚಾರ ಸಂಕಿರಣ ಆಯೋಜಿಸಿದ ಅರ್ಥಶಾಸ್ತ್ರ ವಿಭಾಗವನ್ನು ಪ್ರಶಂಸಿಸಿ ಅಧ್ಯಕ್ಷೀಯ ನುಡಿಗಳನ್ನು ಆಡಿದರು. 

ಕಾಲೇಜಿನ ಪ್ರಾಚಾರ್ಯರು ಪ್ರೊ.ಎಂ.ಎಂ.ಹೊಳ್ಳಿಯವರ ಸ್ವಾಗತ ಭಾಷಣ ಮಾಡಿದರು. ನಂತರ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಹೇಮಂತ್ ಸಿ.ಎನ್. ಅವರು ಮುಖ್ಯ ಅತಿಥಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಆಹ್ವಾನಿತ ಭಾಷಣಕಾರರಾಗಿ ಮಂಡ್ಯ ವಿವಿ ಪ್ರಾಧ್ಯಾಪಕರು ಡಾ.ಜಿ.ಎಸ್ ಪ್ರೇಮಕುಮಾರ್ ಅವರು ವಿಚಾರ ಸಂಕಿರಣದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವು ಅಂತಿಮ ವರ್ಷದ ಬಿ.ಎ. ಅರ್ಥಶಾಸ್ತ್ರ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು. ಡಾ. ಸಂಜೀವ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳಯ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...