ಹಾವೇರಿ | ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ

Date:

“ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಹಾವೇರಿ ಜಿಲ್ಲೆಯ ತಿಮ್ಮನಹಳ್ಳಿ ಗ್ರಾಮದ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.

- Advertisement -

“ನಿಗದಿತ ಸಮಯಕ್ಕೆ ಬಸ್‌ಗಳು ಸಂಚರಿಸದ ಕಾರಣ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗದೆ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ” ಎಂದು ವಿದ್ಯಾರ್ಥಿಗಳು, ಊರಿನ ಮುಖಂಡರು, ರೈತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಈ ವೇಳೆ ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ಜಿಲ್ಲಾ ಅಧ್ಯಕ್ಷ ಅರುಣ್ ಕುಮಾರ್ ನಗವತ್ ಮಾತನಾಡಿ, “ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಅತ್ಯಂತ ಅಗತ್ಯವಾಗಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾದ ವಾತಾವರಣ ನಿರ್ಮಿಸುವುದು ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಸಾರಿಗೆ ಇಲಾಖೆಯ ಜವಾಬ್ದಾರಿಯಾಗಿದೆ. ಆದರೆ ತಿಮ್ಮನಹಳ್ಳಿ ಗ್ರಾಮದ ವಿದ್ಯಾರ್ಥಿಗಳು ಪ್ರತಿದಿನ ಬಸ್‌ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತಡವಾಗಿ ತಲುಪುವಂತಾಗಿದೆ. ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕಾಗಿದ್ದು, ಸಾರಿಗೆ ವ್ಯವಸ್ಥೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಬಾರದು. ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಸಾರಿಗೆ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿ ಪವಿತ್ರ ಮಾತನಾಡಿ, “ನಾವು ಪ್ರತಿದಿನ ಶಾಲಾ-ಕಾಲೇಜುಗಳಿಗೆ ಹೋಗಲು ಬಸ್‌ಗಳನ್ನೇ ಅವಲಂಬಿಸಿದ್ದೇವೆ. ಆದರೆ ಸರಿಯಾದ ಸಮಯಕ್ಕೆ ಬಸ್‌ಗಳು ಬಾರದ ಕಾರಣ ಬಹಳ ಹೊತ್ತು ಕಾಯಬೇಕಾಗುತ್ತದೆ. ಇದರಿಂದ ತರಗತಿಗಳು ತಪ್ಪುತ್ತಿವೆ ಹಾಗೂ ನಮ್ಮ ಓದಿಗೆ ತೊಂದರೆಯಾಗುತ್ತಿದೆ. ಹಲವು ಬಾರಿ ಈ ಸಮಸ್ಯೆಯನ್ನು ಗಮನಕ್ಕೆ ತಂದರೂ ಸೂಕ್ತ ಪರಿಹಾರ ದೊರೆತಿಲ್ಲ” ಎಂದು ಒತ್ತಾಯಿಸಿದರು.

“ಇನ್ನೋರ್ವ ವಿದ್ಯಾರ್ಥಿ ವಿಜಯ ಕುಮಾರ ಗೌಡ ಮಾತನಾಡಿ, “ನಾವು ಪ್ರತಿದಿನ ನಮ್ಮ ವಿದ್ಯಾಭ್ಯಾಸಕ್ಕಾಗಿ ಬೆಳಿಗ್ಗೆ ಬೇಗನೆ ಮನೆಯಿಂದ ಹೊರಟು ಬಸ್ ನಿಲ್ದಾಣಕ್ಕೆ ಬರುತ್ತೇವೆ. ಆದರೆ ನಿಗದಿತ ಸಮಯಕ್ಕೆ ಬಸ್‌ಗಳು ಬರುವುದಿಲ್ಲ. ಕೆಲವೊಮ್ಮೆ ಗಂಟೆಗಟ್ಟಲೆ ಬಸ್‌ಗಾಗಿ ಕಾಯಬೇಕಾಗುತ್ತದೆ. ತಿಮ್ಮನಹಳ್ಳಿ ಗ್ರಾಮದ ವಿದ್ಯಾರ್ಥಿಗಳ ಸಮಸ್ಯೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಬೆಳಿಗ್ಗೆ ಮತ್ತು ಸಂಜೆ ಕಾಲೇಜು ಸಮಯಕ್ಕೆ ಅನುಗುಣವಾಗಿ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕೇವಲ ಭರವಸೆ ನೀಡದೆ ತಕ್ಷಣವೇ ಸಮಸ್ಯೆಗೆ ಪರಿಹಾರ ನೀಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಪವಿತ್ರ ಎನ್, ಕಾವ್ಯ ಮೂಲಿಮನಿ, ಸುನೀತಾ ಕೆ, ಸಂಗೀತ, ಜ್ಯೋತಿ, ವಿಜಯ ಕುಮಾರ ಗೌಡ, ಗಿರೀಶ ಗೌಡ, ಹೇಮಂತ, ಮನೋಜ್ ಬಣಕಾರ, ಮತ್ತನ್ ಗೌಡ, ಮನೋಜ್ ನಾಡರ್, ಆನಂದ, ನವೀದ್, ಹರೀಶ್ ಕೆ, ನಿಂಗನಗೌಡ, ಜಗದೀಶ ಎಂ, ಮೇಘರಾಜ, ಕೃಷ್ಣ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಫಾಯಿ ಕರ್ಮಚಾರಿಗಳಿಗೆ ಯೋಜನೆಗಳ ಸೌಲಭ್ಯ ವಿಳಂಬ ಮಾಡದೇ ತಲುಪಿಸಿ: ಜಿಲ್ಲಾಧಿಕಾರಿ

"ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಇಲಾಖೆಯ...

ಗದಗ | ನವಂಬರ್ 14ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ನೆಹರು ಜಯಂತಿ, ಮಕ್ಕಳ ದಿನಾಚರಣೆ

"ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ...

ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...