ಹಾವೇರಿ | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ

Date:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಖಂಡಿಸಿ, ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಪ್ರಕರಣಗಳ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವರ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗಾಗಿ ಹಾಗೂ NTA ಸಂಸ್ಥೆ ರದ್ದುಗೊಳಿಸಲು ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿಗಳನ್ನು ಬೆಂಬಲಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

- Advertisement -

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ ತಾಲ್ಲೂಕು ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಕೆಇಬಿ ಗಣೇಶ ಗುಡಿಯಿಂದ ಬಸ್ ನಿಲ್ದಾಣ ಮಾರ್ಗವಾಗಿ ಪೋಸ್ಟ್‌ ಸರ್ಕಲ್ ವರೆಗೆ ಬೃಹತ್ ಪ್ರತಿಭಟನೆ ರ್ಯಾಲಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ, ನೀಟ್ ಪರೀಕ್ಷೆ ಹಾಗೂ NTA ಸಂಸ್ಥೆಯನ್ನು ರದ್ದುಗೊಳಿಸುವಂತೆ, ಧರ್ಮೇಂದ್ರ ಪ್ರಧಾನ್ ರಾಜಿನಾಮೆಗಾಗಿ ಆಗ್ರಹಿಸಿ ಫಲಕಗಳನ್ನು ಪ್ರದರ್ಶನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ದೇಶದಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು  ವೈದ್ಯಕೀಯ ಮತ್ತು ಇತರೆ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರ ಮಟ್ಟದಲ್ಲಿ ನಡೆಸುವ ನೀಟ್ ಪರೀಕ್ಷೆಯ ನಿರಂತರವಾಗಿ ಹಗರಣ ಬಯಲಿಗೆ ಬರುತ್ತಿವೆ. ನ್ಯಾಷನಲ್ ಟೆಸ್ಟ್ ಏಜೆನ್ಸಿ (ಎನ್.ಟಿ.ಎ) ಪರೀಕ್ಷೆಯ ನಡವಳಿಕೆ ಹಾಗೂ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಪಾರದರ್ಶಕತೆಯನ್ನು ಪ್ರಶ್ನಿಸುವ ಹಲವಾರು ದೂರುಗಳು ದೇಶಾದ್ಯಂತ ಬರುತ್ತಿವೆ. ಪ್ರವೇಶವನ್ನು ನಡೆಸಲು ಅಸಮರ್ಥ ಮತ್ತು ಅನರ್ಹವಾಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಕಿಡಿಕಾರಿದರು.

“ಇದರಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಮತ್ತು ತೊಂದರೆಗಳಿಗೆ ಎನ್.ಡಿ.ಎ ಸರ್ಕಾರವೇ ಜವಾಬ್ದಾರಿ ಹೊರಬೇಕು ಎಂಬುದನ್ನು ಎಸ್ಎಫ್ಐ ಕರ್ನಾಟಕ ರಾಜ್ಯ ಸಮಿತಿಯು ಆಗ್ರಹಿಸಿದೆ” ಎಂದು ಜಿಲ್ಲಾಧ್ಯಕ್ಷ ಬಸವರಾಜ ಎಸ್ ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

“ಹೀಗೆ ಹಲವಾರು ಪರೀಕ್ಷೆಗಳನ್ನು ನಡೆಸಲು NTA ವಿಫಲವಾಗಿದೆ. ಮತ್ತು ಭ್ರಷ್ಟಾಚಾರವಾಗಿರುವುದು ಮತ್ತು ಪತ್ರಿಕೆ ಸೋರಿಕೆಯಾಗಿರುವುದು ಸ್ಪಷ್ಟವಾಗಿದೆ. ಇದು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ, ಆದರಿಂದ NTA ರದ್ದು ಪಡಿಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮದ ನೇರ ಹೊಣೆಯನ್ನು ಭಾರತ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಒತ್ತು ರಾಜೀನಾಮೆ ನೀಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“NEET ಪರೀಕ್ಷೆ ರದ್ದಾದ ಬಳಿಕ ನಿರಾಶೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳನ್ನು ಎಸ್‌ಎಫ್‌ಐ ನಿಯೋಗಗಳು ಭೇಟಿ ಮಾಡುತ್ತಿವೆ. ಹಿಸಾರ್‌ನ ಸಿಮ್ರಾನ್, ಧರ್ಮಪುರಿಯ ರೋಶ್ನಿ, ಕೇರಳದ ಇಜಾ ಮಹೇಶ್ ಅವರ ಕುಟುಂಬಗಳನ್ನು ಎಸ್‌ಎಫ್‌ಐ ನಾಯಕರು ಭೇಟಿ ಮಾಡಿ ಸಾಂತ್ವನ ತಿಳಿಸಿದ್ದಾರೆ. ರಾಜಸ್ಥಾನ ಸೇರಿದಂತೆ ದೇಶದಾದ್ಯಂತ ಎಲ್ಲಾ ಬಲಿಯಾದ ವಿದ್ಯಾರ್ಥಿಗಳ ಕುಟುಂಬಗಳನ್ನು ಭೇಟಿ ಮಾಡಿ ಅವರಿಗೆ ಸಂಪೂರ್ಣ ಕಾನೂನು ನೆರವು ನೀಡಲಾಗುವುದು. ಪ್ರತಿಯೊಂದು ಕುಟುಂಬಕ್ಕೂ ₹5 ಕೋಟಿ ಪರಿಹಾರ ನೀಡಬೇಕೆಂದು ಎಸ್‌ಎಫ್‌ಐ ಆಗ್ರಹಿಸುತ್ತದೆ. ನ್ಯಾಯ ಮತ್ತು ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಲಾಗುವುದು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಸ್ಎಫ್ಐ ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರಾ ಕೊರವರ ಮಾತನಾಡಿ, ನೀಟ್ ಪರೀಕ್ಷೆಯಲ್ಲಿ ಗ್ರಾಮೀಣ ಪ್ರದೇಶದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ತಳಸಮುದಾಯದ ವಿದ್ಯಾರ್ಥಿಗಳು ಲಕ್ಷಾಂತರ ರೂಪಾಯಿ ಸುರಿಯುವ ಶ್ರೀಮಂತ ,ಉನ್ನತ ಶೈಕ್ಷಣಿಕ ಸೌಲಭ್ಯವುಳ್ಳ ಅಭ್ಯರ್ಥಿಗಳ ಜೊತೆಗೆ ಪೈಪೋಟಿ ನಡೆಸಿ ಸೀಟು ಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಎಸ್ಎಫ್ಐ ಜಿಲ್ಲಾ ಮುಖಂಡ ಅರುಣ್ ಕುಮಾರ್ ನಗವತ್ ಮಾತನಾಡಿ, “ಜೂನ್ 2026ರ UGC-NET ಪರೀಕ್ಷೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಮತ್ತು ಅವ್ಯವಸ್ಥೆಗಳನ್ನು ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಗಳು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನ್ಯಾಯಸಮ್ಮತ, ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷೆಗಳನ್ನು ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿವೆ” ಎಂದರು.

SFIಯ ತನ್ನ ದೀರ್ಘಕಾಲದ ಬೇಡಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸುತ್ತದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯನ್ನು ತಕ್ಷಣವೇ ರದ್ದುಪಡಿಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು. ಭಾರತದ ಉನ್ನತ ಶಿಕ್ಷಣದ ಪ್ರವೇಶ ಹಾಗೂ ನೇಮಕಾತಿ ಪರೀಕ್ಷೆಗಳನ್ನು ಪದೇ ಪದೇ ಅಸಮರ್ಥತೆ, ಅಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಕೊರತೆಯನ್ನು ತೋರಿಸಿರುವ ಸಂಸ್ಥೆಯ ಕೈಯಲ್ಲಿ ಬಿಡಲಾಗದು” ಎಂದರು.

ಪ್ರತಿಭಟನೆಯಲ್ಲಿ ಎಸ್ಎಫ್ಐ ತಾಲ್ಲೂಕ ಅಧ್ಯಕ್ಷ ಗೌತಮ್ ಸಾವಕ್ಕನವರ, ಮುಖಂಡರು ಕರೆಯಮ್ಮನವರ, ವರ್ಷ ಪಾಟೀಲ್, ಸಲ್ಮಾ ಬಾನು, ಮಧು ವರದಿ, ಸೃಷ್ಟಿ ದೇವಗಿರಿ, ಫರ್ಹಾನ್ ಧಾರದವರ್, ಸುನಿಲ್ ಟಿ, ಮನೋಜ ಚೌಡಮ್ಮನವರ್, ನಂಜುಂಡಿ ಸುಡಂಬಿ, ಜೈಶಂಕರ್, ಹನುಮಂತ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...