ಹಾವೇರಿ | ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು: ಎಂ.ಎಂ.ಮೈದೂರ

Date:

“ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸಮತೋಲನದಲ್ಲಿಡಲು ಕ್ರೀಡೆ ಪ್ರಮುಖವಾಗಿದ್ದು, ತಾಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿವೆ” ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರು ಹೇಳಿದರು.

- Advertisement -

ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ 2026-27ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

“ಪ್ರತಿ ವರ್ಷ ಕ್ಲಸ್ಟರ್ ಮಟ್ಟದಿಂದ ತಾಲೂಕು ಹಾಗೂ ಜಿಲ್ಲಾ ಮಟ್ಟದವರೆಗೆ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಆಟದಲ್ಲಿ ಮುಂದಿದ್ದಂತೆ ಪಾಠದಲ್ಲಿ ಸಾಧನೆ ಮಾಡಬೇಕು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವ ಜತೆಗೆ ಶಿಸ್ತು ಮತ್ತು ಆತ್ಮವಿಶ್ವಾಸ ಬೆಳೆಸುತ್ತದೆ” ಎಂದರು.

“ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಇನ್ನಷ್ಟು ಪದಕಗಳನ್ನು ಗೆಲ್ಲಬೇಕಾದರೆ ಕ್ರೀಡಾ ಪ್ರತಿಭೆಗಳಿಗೆ ಬಾಲ್ಯದಿಂದಲೇ ಉತ್ತಮ ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟಗಳೇ ಇದಕ್ಕೆ ಬುನಾದಿಯಾಗಿದ್ದು, ಇಲ್ಲಿ ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟಕ್ಕೆ ಮುನ್ನಡೆಯಬೇಕು” ಎಂದು ಹೇಳಿದರು.

“ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವವರಿಗೆ ಸರ್ಕಾರದಿಂದ ವಿವಿಧ ಸೌಲಭ್ಯಗಳು ಹಾಗೂ ಉದ್ಯೋಗಾವಕಾಶಗಳಲ್ಲಿ ಮೀಸಲಾತಿಯಂತಹ ಅವಕಾಶಗಳಿವೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು” ಎಂದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯಾ ಕಾಟೋಕರ್ ಅವರು ಕ್ರೀಡಾ ಜ್ಯೋತಿ, ಒಲಿಂಪಿಕ್ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಶಿಕ್ಷಣಕ್ಕೆ ಎಷ್ಟು ಮಹತ್ವವಿದೆಯೋ ಕ್ರೀಡೆಗೂ ಅಷ್ಟೇ ಮಹತ್ವ ನೀಡಬೇಕು. ಕ್ರೀಡೆ ಜೀವನದ ಅವಿಭಾಜ್ಯ ಭಾಗವಾಗಬೇಕು. ನಾನು ವಿದ್ಯಾರ್ಥಿಯಾಗಿದ್ದಾಗ ಕ್ರೀಡೆಯಲ್ಲಿ ಭಾಗವಹಿಸುತ್ತಿದ್ದೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸಮತೋಲನದಲ್ಲಿಡಲು ಸಾಧ್ಯ. ಇಂದಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚಿನ ಸಮಯ ಮೀಸಲಿಡಬೇಕು” ಎಂದು ಹೇಳಿದರು.

“ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು” ಎಂದು ಅವರು ಶುಭ ಹಾರೈಸಿದರು.

ವಿನಯಾ ಕಾಟೋಕರ್ ಒಲಿಂಪಿಕ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹದೇವಸ್ವಾಮಿ, ಉಪನ್ಯಾಸಕರು, ದೈಹಿಕ ಶಿಕ್ಷಕರು, ಪ್ರಾಂಶುಪಾಲರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...

ವಿಜಯಪುರ | ಆತ್ಮವಿಶ್ವಾಸ ಬೆಳೆಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಪ್ರೊ. ಎಸ್ ಇಂದುಮತಿ

ಹೆಣ್ಣುಮಕ್ಕಳು ತಮ್ಮ ಭದ್ರತೆಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು....

ಚಿಕ್ಕಬಳ್ಳಾಪುರ: ರೈತ ಸಂಘದ ಕಚೇರಿಯಲ್ಲಿಯೇ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜಿನಪ್ಪ ನೇಣುಹಾಕಿಕೊಂಡು ಆತ್ಮಹತ್ಯೆ

ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು....