ಹಾವೇರಿ | ಹಾಲು, ಬಸ್ ಪ್ರಯಾಣ ದರ ಏರಿಕೆ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ; ಎಸ್ಎಫ್ಐ ಡಿವೈಎಫ್ಐ ಖಂಡನೆ

Date:

ಹಾಲಿನ, ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಆರ್ಥಿಕ ಬರೆ ಎಳೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಕ್ರಮವನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಮತ್ತು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಹಾವೇರಿ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ  ಭಾನುವಾರ ನಗರದ ಮೈಲಾರ ಮಹದೇವಪ್ಪ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು. 

- Advertisement -

ಹಾಲಿನ ದರ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ತೀವ್ರವಾಗಿ ಖಂಡಿಸಿದ ಪ್ರತಿಭಟನಾಕಾರರು, ತಕ್ಷಣವೇ ಈ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡ್ಕರಿ-ಮೋಶಾ ಆಡಳಿತದಲ್ಲಿ ‘ವೋಟ್‌ ಚೋರಿ’ ಬೆನ್ನಲ್ಲೇ ‘ಪೆಟ್ರೋಲ್ ಚೋರಿ’:...

ದೇಶಾದ್ಯಂತ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ 'ವೋಟ್‌ ಚೋರಿ' ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಬಿಜೆಪಿಗಾಗಿ ನಡೆದ ಮತದಾರರ ಹಕ್ಕು ಹರಣ, ಮತಗಳತನದ ಎಸ್‌ಐಆರ್‌ ರದ್ದಾಗಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ...

ಬಾಗಲಕೋಟೆ | ಉತ್ಪಾದನೆ ಕುಸಿತ, ಭರ್ಜರಿ ಬೇಡಿಕೆ: ದಾಖಲೆ...

ಮುಂಗಾರು ಮಳೆಯ ಕೊರತೆ, ಭೀಕರ ಬರದ ಪರಿಣಾಮ ಹೊಲಗಳಲ್ಲಿ ಮೆಕ್ಕೆಜೋಳದ ಇಳುವರಿ ಕುಸಿದಿದೆ. ಆದರೆ, ಮಾರುಕಟ್ಟೆಯಲ್ಲಿ ಮಾತ್ರ ಮೆಕ್ಕೆಜೋಳಕ್ಕೆ ಚಿನ್ನದ ಬೆಲೆ ಬಂದಿದೆ! ಕಡಿಮೆ ಬೆಲೆಯಿಂದ ವರ್ಷಗಟ್ಟಲೆ ನಷ್ಟ ಅನುಭವಿಸಿದ್ದ ಬೆಳೆಗಾರರಿಗೆ ಈ...

ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ,...

ಮನುಷ್ಯತ್ವದ ಮುಖವಾಡ ಕಳಚಿದಾಗಒಳಗಿನ ಮೃಗ ಎಚ್ಚರಗೊಳ್ಳುತ್ತದೆ…ವಿವೇಕದ ಬೆಳಕು ಆರಿದಾಗಕ್ರೋಧವೇ ದಾರಿದೀಪವಾಗುತ್ತದೆ… ಬುದ್ಧಿಯೇ ಅದರ ಆಯುಧವಾದಾಗಸೇಡಿನ ಯೋಚನೆ ಸಂಚಾಗುತ್ತದೆ…ಪರರ ನೋವಿನಲ್ಲಿ ಸುಖ ಕಾಣುವ ಮನಸ್ಸುಕ್ರೌರ್ಯದ ಪರಮಾವಧಿ ತಲುಪುತ್ತದೆ… ಸುತ್ತಲಿನವರ ಮೌನ, ನಿರ್ಲಕ್ಷ್ಯಕೆಲವೊಮ್ಮೆ ಅಪಾಯಕ್ಕೆ ಆಹ್ವಾನವಾಗುತ್ತದೆ…ಕಾಲ ಮಿಂಚುವ ಮುನ್ನ...

ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ರಾಷ್ಟ್ರೀಯ ಮುಖಂಡರಾದ ಬಸವರಾಜ ಪೂಜಾರ ಮಾತನಾಡಿ, “ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಜನರ ಜೀವನಾಧಾರ ವಸ್ತುಗಳಾದ ಅಕ್ಕಿ, ಬೇಳೆ, ಅಡುಗೆ ಅನಿಲ, ಪೆಟ್ರೋಲ್-ಡೀಸೆಲ್, ಔಷಧಿ ಮತ್ತಿತರ ಅಗತ್ಯ ಸಾಮಗ್ರಿಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಡಿ.ಕೆ.ಶಿವಕುಮಾರ್ ಸರ್ಕಾರ ಸಹ ಬೆಲೆ ಏರಿಕೆಯ ಹೊರೆಯನ್ನು ಸಾರ್ವಜನಿಕರ ಮೇಲೆ ಹಾಕುತ್ತಿದೆ. ಇನ್ನೊಂದೆಡೆ ಕಾರ್ಪೊರೇಟ್ ಬಂಡವಾಳಗಾರರಿಗೆ ಪ್ರೋತ್ಸಾಹ ಧನ ಹಾಗೂ ವಿವಿಧ ರಿಯಾಯಿತಿಗಳನ್ನು ನೀಡುತ್ತಿರುವುದು ತೀವ್ರ ಖಂಡನೀಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿವೈಎಫ್ಐ ಜಿಲ್ಲಾಧ್ಯಕ್ಷರು ಬಸವರಾಜ ಎಸ್ ಮಾತನಾಡಿ, “ಹಾಲು, ಹಾಲಿನ ಉತ್ಪನ್ನಗಳು, ಬಸ್ ದರ ಸೇರಿದಂತೆ ದಿನ ಬಳಕೆ ವಸ್ತುಗಳ ದರವನ್ನು ವಿಪರೀತವಾಗಿ ಏರಿಕೆ ಮಾಡಿದ್ದು ಖಂಡನೀಯ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಂದ ನೇರ ಲೂಟಿ ಮಾಡಲು ಹೊರಟಿದೆ ಕೂಡಲೇ ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆಯನ್ನು ಇಳಿಸಬೇಕು. ದರ ಏರಿಕೆ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

 ಡಿಎಸ್ಎಸ್ ಮುಖಂಡರಾದ ಉಡಚಪ್ಪ ಮಾಳಗಿ ಮಾತನಾಡಿ, “ಜನವಿರೋಧಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಖಂಡನೀಯ. ಜನರ ದುಡಿಮೆ ಮೇಲೆ ಹಾಗೂ ಆರ್ಥಿಕತೆಯ ಮೇಲೆ ಭಾರಿ ಪ್ರಮಾಣದಲ್ಲಿ ಪೆಟ್ಟು ಬೀಳುತ್ತದೆ” ಎಂದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ಅರುಣ ಕುಮಾರ ನಗವತ ಮಾತನಾಡಿ, ಹಾಲಿನ ಬೆಲೆ ಏರಿಕೆಯ ಬೆನ್ನಲ್ಲೇ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರಗಳನ್ನು ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಬಸ್ ಪ್ರಯಾಣ ದರವನ್ನು ಶೇಕಡಾ 25 ರಿಂದ ಶೇಕಡಾ 30ರಷ್ಟು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಅಲ್ಲದೆ ಬಸ್ ಪಾಸ್ ದರಗಳನ್ನು ಸಹ ಶೇಕಡಾ 25 ರಷ್ಟು ಹೆಚ್ಚಳ ಮಾಡಿರುವ ಸರ್ಕಾರದ ಕ್ರಮ ಸಂಪೂರ್ಣ ಜನವಿರೋಧಿಯಾಗಿದೆ ಎಂದರು.

ಪ್ರತಿಭಟನೆಯಲ್ಲಿ ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯರಾದ ರೇಣುಕಾ ಕಹಾರ, ಎಸ್ಎಫ್ಐ- ಡಿವೈಎಫ್ಐ ಮುಖಂಡರಾದ ಶಂಭುಲಿಂಗ ಸವದತ್ತಿ, ಚೈತ್ರಾ, ಪರಶುರಾಮ ಎಸ್, ಧನುಷ್ ದೊಡ್ಡಮನಿ, ಅನ್ವಿಕಾ ಆರ್ ಬಿ, ಸ್ವಪ್ನ ಕಬ್ಬೆರ್, ರೇಣುಕಾ ಓಲೇಕಾರ, ಅನುಶ್ರೀ ಕಮದೋಳ್ಳಿ, ವನಜಾಶ್ರಿ ಕೋಟೆರ್, ಕುಮಾರ ಹಡಪದ್, ಮಹಮದ್ ಯಾಸಿನ್, ಅಯಾನ್, ಪಕ್ಕೀರೇಶ ಎನ್,ಮುಕಬಲ್ ಅಹಮದ್, ಅತ್ತವುಲ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಕ್ಕಿ ಬೆಲೆ ಏರಿಕೆ ಬೆನ್ನಲ್ಲೇ ಭತ್ತಕ್ಕೂ ಬೆಲೆ ಹೆಚ್ಚಳಕ್ಕೆ ರೈತರ ಆಗ್ರಹ

ರಾಜ್ಯದಲ್ಲಿ ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಭತ್ತಕ್ಕೂ ಸೂಕ್ತ...

ಕುಂದಾಪುರದಲ್ಲಿ ಸಂಭ್ರಮದ ‘ನಮ್ಮೂರ ದೀಪಾವಳಿ – ನಮ್ಮೂರ ಪ್ರತಿಭೆಗಳಿಗೆ’ ಕಾರ್ಯಕ್ರಮ

ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಅಕ್ಷರ ಸಾಂಸ್ಕೃತಿಕ ಸಂಸ್ಥೆ ಹಾಗೂ...

ಕುಂದಾಪುರ–ಹೊಸಂಗಡಿ ರಸ್ತೆಯಲ್ಲಿ ಸಾವಿನ ಭೀತಿ: ಭಾರೀ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಿ

ಕುಂದಾಪುರದಿಂದ ಹೊಸಂಗಡಿಯವರೆಗಿನ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಅಗಲೀಕರಣ ಕಾಮಗಾರಿಯನ್ನು...