ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

Date:

“ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಜಾರಿಗೆ ತರಲಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು” ಎಂದು ಸಕ್ಕರೆ ಮತ್ತು ಜವಳಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.

- Advertisement -

ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ತಾಲೂಕು ಮಟ್ಟದ ಪ್ರಜಾ ಸೇವಾ ಆಂದೋಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

“ಸಾರ್ವಜನಿಕರು ತಮ್ಮ ಸಣ್ಣಪುಟ್ಟ ಕೆಲಸಗಳಿಗೂ ತಾಲೂಕು ಹಾಗೂ ಜಿಲ್ಲಾ ಮಟ್ಟದ ಕಚೇರಿಗಳಿಗೆ ಹಲವು ಬಾರಿ ಅಲೆದಾಡುವ ಪರಿಸ್ಥಿತಿಯಿದೆ. ಇದರಿಂದ ಸಮಯ ಮತ್ತು ಹಣ ವ್ಯರ್ಥವಾಗುವುದರ ಜೊತೆಗೆ ಅನಗತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸಿ ಜನರ ಬಳಿಯೇ ಆಡಳಿತವನ್ನು ಕೊಂಡೊಯ್ಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪ್ರಜಾಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ” ಎಂದರು.

“ಇದಕ್ಕಾಗಿ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಿ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸುವ ಮೂಲಕ ಸಾರ್ವಜನಿಕರ ಅರ್ಜಿಗಳ ವಿಲೇವಾರಿಗೆ ವಿಶೇಷ ಆದ್ಯತೆ ನೀಡಲಾಗಿದೆ” ಎಂದರು.

“ಜಿಲ್ಲೆಯಲ್ಲಿ ಈಗಾಗಲೇ ಸುಮಾರು 1,500 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈ ಪೈಕಿ ಸುಮಾರು 1,200 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಉಳಿದ 300 ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಆದ್ಯತೆ ನೀಡಬೇಕು. ಸ್ಥಳೀಯ ಮಟ್ಟದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ವಿಳಂಬ ಮಾಡದೆ ಪರಿಹರಿಸಬೇಕು. ಸರ್ಕಾರದ ಅಥವಾ ವಿಭಾಗೀಯ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಬೇಕಾದ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು” ಎಂದು ಸಲಹೆ ನೀಡಿದರು.

ಯಾವುದೇ ಅರ್ಜಿಯನ್ನು ಕಾರಣವಿಲ್ಲದೆ ಬಾಕಿ ಉಳಿಸಿಕೊಳ್ಳಬಾರದು. ಸಮಸ್ಯೆ ಪರಿಹಾರ ಸಾಧ್ಯವಿಲ್ಲದಿದ್ದರೆ ಅದಕ್ಕೆ ಸೂಕ್ತ ಕಾರಣ ತಿಳಿಸಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಅಹವಾಲುಗಳನ್ನು ಆಲಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಡುವೆ ಸಮನ್ವಯ ಹೆಚ್ಚಿಸುವ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು. ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಪ್ರಜಾಸೇವಾ ಆಂದೋಲನ ಆಯೋಜಿಸಲಾಗುವುದು” ಎಂದು ಹೇಳಿದರು.

ಸಾರ್ವಜನಿಕ ದೂರುಗಳು: ಮರಡೂರು ಬ್ಯಾರೇಜ್‌ ನಿಂದ ನೀರು ಸೋರಿಕೆ. ಶಿಥೀಲ ಬ್ಯಾರೇಜ ಕಂ-ರಸ್ತೆ, ಹೊಸ ಬ್ಯಾರೇಜ್ ನಿರ್ಮಾಣ, ಸ್ಮಶಾನಕ್ಕೆ ದಾರಿ ಸಮಸ್ಯೆ, ಸ್ಮಶಾನ ಭೂಮಿ, ರಸ್ತೆ ಬದಿಯ ಗಿಡಗಂಟಿಗಳ ತೆರವು, ಸಾರಿಗೆ ಸೌಲಭ್ಯ, ವಸತಿ, ಜೆ.ಜೆ.ಎಂ.ಕಾಮಗಾರಿ, ವಿಬಿ ರಾಮಜಿ ಕೂಲಿ ಹಣ ಪಾವತಿ ಸಮಸ್ಯೆ, ಕುಡಿಯುವ ನೀರು, ಆಸ್ಪತ್ರೆ ಸೌಲಭ್ಯ, ಹಾಸ್ಟೆಲ್ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಕುರಿತು ವಿವಿಧ ಗ್ರಾಮಗಳ ಹಾಗೂ ಹಾವೇರಿ ನಗರದ ವಿವಿಧ ಬಡಾವಣೆಗಳ ಚರಂಡಿ, ರಸ್ತೆ, ನದಿ ನೀರಿನ ಪೂರೈಕೆ ಸೇರಿದಂತೆ ಮೂಭೂತ ಸೌಲಭ್ಯಗಳ ಸಮಸ್ಯೆ ಕುರಿತು ನಾಗರಿಕರು ಮನವಿ ದೂರು ಸಲ್ಲಿಸಿದ್ದಾರೆ.

ವೈಯಕ್ತಿಕ ದೂರುಗಳು: ಗೃಹಲಕ್ಷ್ಮೀ ಹಣ ಜಮೆ, ಕಾರ್ಮಿಕ ಕಾರ್ಡ್ ರದ್ದತಿ, ವಸತಿ, ಕಾರ್ಮಿಕ ಇಲಾಖೆಯ ಮದುವೆ ಸಹಾಯಧನ ವಿಳಂಬ ಸೇರಿದಂತೆ ವಿವಿಧ ವೈಯಕ್ತಿಕ ಸಮಸ್ಯೆಗಳ ಪರಿಹಾರಕ್ಕೆ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ.ಮೈದೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಕ್ಷಿತ್‌ಕುಮಾರ, ಡಿ.ಎಫ್.ಒ. ಅಕ್ಷಯಕುಮಾರ, ಜಿ.ಪಂ.ಉಪ ಕಾರ್ಯದರ್ಶಿ ಡಾ.ಪುನಿತ್, ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ತಹಶೀಲ್ದಾರ ಶ್ರೀಮತಿ ಶರಣಮ್ಮ, ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್. ಸ್ವಾಗತಿಸಿದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ |539ನೇ ಕನಕ ಜಯಂತಿಗೆ ಸಕಲ ಸಿದ್ಧತೆ: ಅದ್ದೂರಿ ಮೆರವಣಿಗೆ, ಪ್ರತಿಭಾ ಪುರಸ್ಕಾರಕ್ಕೆ ತೀರ್ಮಾನ

ತಾಲ್ಲೂಕಿನಲ್ಲಿ ಈ ಬಾರಿ 539ನೇ ಕನಕ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಮತ್ತು...

ಬಾಗೇಪಲ್ಲಿ | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ

ಪಕ್ಷದ ತಾಲ್ಲೂಕು ಕಾರ್ಯದರ್ಶಿ ಎಂ.ಎನ್.ರಘುರಾಮ ರೆಡ್ಡಿ ಮಾತನಾಡಿ ‘ಕರ್ನಾಟಕ ರಾಜ್ಯೋತ್ಸವ ಮತ್ತು...

ಜನರ ಅಹವಾಲು ಆಲಿಸಲು ಜನರ ಬಳಿಗೇ ಬಂದ ಸರ್ಕಾರ: ಸಚಿವ ನರೇಂದ್ರಸ್ವಾಮಿ

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳಿಗೆ ಅಲೆದಾಡುವುದನ್ನು...