“ಗ್ರಾಮ ಪಂಚಾಯಿತಿ ಪ್ರತಿನಿಧಿಗಳ ಆಡಳಿತ ಮುಗಿದುಒಂದು ವರ್ಷ ಆಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಸಮಸ್ಯೆಗಳು ಉದ್ಬವಿಸುತ್ತವೆ. ಕೂಡಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಜಿಲ್ಲಾ ಘಟಕದ ವತಿಯಿಂದ ಸಿಇಒ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಹಾಒಕ್ಕೂಟದ ಜಿಲ್ಲಾಧ್ಯಕ್ಷರಾದ ಅನಂತರಾಜ ಹವಳಣ್ಣನವರ.ಒಕ್ಕೂಟದ ರಾಜ್ಯ ಮಾಧ್ಯಮ ಕಾರ್ಯದರ್ಶಿ ನಿಂಗಪ್ಪ ಆರೇರ, ಹಾನಗಲ್ ತಾಲ್ಲೂಕ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವಪ್ಪ ಬಿ.ಕೆ. ಬಿಳ್ಳಳ್ಳಿ ಗ್ರಾಪಂ ಅಧ್ಯಕ್ಷರಾದ ಹನಮರಡ್ಡಿ ದಬಾಳಪ್ಪನವರ, ಮಹೇಶ ಜವಳಿ ಇದ್ದರು.




